ಇಮ್ರಾನ್ ಖಾನ್ ಚಿಕಿತ್ಸೆಗಾಗಿ ರಾವಲ್ಪಿಂಡಿ ಕೇಂದ್ರ ಕಾರಾಗೃಹದಿಂದ ಇಸ್ಲಾಮಾಬಾದ್ನ ಶಿಫಾ ಆಸ್ಪತ್ರೆಗೆ ಸ್ಥಳಾಂತರ
ಇಸ್ಲಾಮಾಬಾದ್, 21 ಆಗಸ್ಟ್ (ಹಿ.ಸ.): ಆ್ಯಂಕರ್:ಪಾಕಿಸ್ತಾನದ ಮಾಜಿ ಪ್ರಧಾನಿ ಹಾಗೂ ಪಾಕಿಸ್ತಾನ್ ತೆಹ್ರೀಕ್-ಎ-ಇನ್ಸಾಫ್ (ಪಿಟಿಐ) ಸಂಸ್ಥಾಪಕ ಇಮ್ರಾನ್ ಖಾನ್ ಅವರನ್ನು ಕೊನೆಗೂ ರಾವಲ್ಪಿಂಡಿಯ ಆದಿಯಾಲಾ ಜೈಲಿನಿಂದ ಇಸ್ಲಾಮಾಬಾದ್‌ನ ಶಿಫಾ ಇಂಟರ್‌ನ್ಯಾಷನಲ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ಸ್ಥಳಾಂತರಿಸಲಾಗಿದೆ
पाकिस्तान की पुलिस ने  21 अगस्त को सूरज निकलने से पहले कड़ी सुरक्षा के बीच पीटीआई संस्थापक इमरान खान को रावलपिंडी की आदियाला जेल से निकालकर शिफा अस्पताल इस्लामाबाद पहुंचाया । फोटो - जियो न्यूज


ಇಸ್ಲಾಮಾಬಾದ್, 21 ಆಗಸ್ಟ್ (ಹಿ.ಸ.):

ಆ್ಯಂಕರ್:ಪಾಕಿಸ್ತಾನದ ಮಾಜಿ ಪ್ರಧಾನಿ ಹಾಗೂ ಪಾಕಿಸ್ತಾನ್ ತೆಹ್ರೀಕ್-ಎ-ಇನ್ಸಾಫ್ (ಪಿಟಿಐ) ಸಂಸ್ಥಾಪಕ ಇಮ್ರಾನ್ ಖಾನ್ ಅವರನ್ನು ಕೊನೆಗೂ ರಾವಲ್ಪಿಂಡಿಯ ಆದಿಯಾಲಾ ಜೈಲಿನಿಂದ ಇಸ್ಲಾಮಾಬಾದ್‌ನ ಶಿಫಾ ಇಂಟರ್‌ನ್ಯಾಷನಲ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ಸ್ಥಳಾಂತರಿಸಲಾಗಿದೆ. 2023ರ ಆಗಸ್ಟ್‌ನಿಂದ ಆದಿಯಾಲಾ ಜೈಲಿನಲ್ಲಿ ಬಂಧನದಲ್ಲಿರುವ 73 ವರ್ಷದ ಇಮ್ರಾನ್ ಖಾನ್ ಅವರನ್ನು ಸುಪ್ರೀಂ ಕೋರ್ಟ್ ಆದೇಶದಂತೆ ಕಠಿಣ ಭದ್ರತೆಯ ನಡುವೆ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಪೊಲೀಸ್ ಅಧಿಕಾರಿಯೊಬ್ಬರ ಪ್ರಕಾರ, ಸುಪ್ರೀಂ ಕೋರ್ಟ್ ನೀಡಿದ್ದ ಎರಡು ದಿನಗಳ ಗಡುವು ಮುಕ್ತಾಯಗೊಳ್ಳುವ ಕೆಲವೇ ಸಮಯದ ಮೊದಲು ಇಮ್ರಾನ್ ಖಾನ್ ಅವರನ್ನು ಆಸ್ಪತ್ರೆಗೆ ತಲುಪಿಸಲಾಯಿತು. ಇದೀಗ ತಜ್ಞ ವೈದ್ಯರ ತಂಡ ಅವರ ಆರೋಗ್ಯವನ್ನು ಪರಿಶೀಲಿಸಿ, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಬೇಕೇ ಅಥವಾ ಇಲ್ಲವೇ ಎಂಬ ಬಗ್ಗೆ ನಿರ್ಧಾರ ಕೈಗೊಳ್ಳಲಿದೆ.

ಪಾಕಿಸ್ತಾನದ ದಿ ನ್ಯೂಸ್ ಮತ್ತು ಜಿಯೋ ನ್ಯೂಸ್ ವರದಿಗಳ ಪ್ರಕಾರ, ಇಮ್ರಾನ್ ಖಾನ್ ಅವರನ್ನು ಶಿಫಾ ಆಸ್ಪತ್ರೆಗೆ ಕರೆತರುವ ಮುನ್ನ ಪೊಲೀಸ್ ಮಹಾನಿರೀಕ್ಷಕ ಸೈಯದ್ ಅಲಿ ನಾಸಿರ್ ರಿಜ್ವಿ ಆಸ್ಪತ್ರೆಗೆ ಭೇಟಿ ನೀಡಿ ಭದ್ರತಾ ವ್ಯವಸ್ಥೆಗಳನ್ನು ಪರಿಶೀಲಿಸಿದರು. ಆಸ್ಪತ್ರೆಯ ಸುತ್ತಮುತ್ತ ಭಾರಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಆಸ್ಪತ್ರೆಯ ಸಮೀಪ ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ವಾಹನಗಳನ್ನು ಕೂಡ ಪೊಲೀಸರು ತೆರವುಗೊಳಿಸಿದ್ದಾರೆ.

ಇಮ್ರಾನ್ ಖಾನ್ ಅವರನ್ನು ಆದಿಯಾಲಾ ಜೈಲಿನಿಂದ ಸ್ಥಳಾಂತರಿಸುವ ಕುರಿತು ಪಿಟಿಐ ಅಧ್ಯಕ್ಷ ಬ್ಯಾರಿಸ್ಟರ್ ಗೌಹರ್ ಖಾನ್ ಅವರಿಗೆ ಪೊಲೀಸರು ಮುಂಚಿತವಾಗಿ ಅಧಿಕೃತ ಮಾಹಿತಿ ನೀಡಿದ್ದಾರೆ. ಆಸ್ಪತ್ರೆಗೆ ಸುತ್ತಮುತ್ತಲಿನ ಪ್ರದೇಶದಲ್ಲಿ ಸಾರ್ವಜನಿಕರ ಸಂಚಾರಕ್ಕೂ ಕಟ್ಟುನಿಟ್ಟಿನ ನಿಗಾ ವಹಿಸಲಾಗಿದೆ.

ಸುಪ್ರೀಂ ಕೋರ್ಟ್ ಆದೇಶ

ಇಮ್ರಾನ್ ಖಾನ್ ಅವರ ಆರೋಗ್ಯಕ್ಕೆ ಸಂಬಂಧಿಸಿದ ವಿಚಾರಣೆ ನಡೆಸಿದ ಪಾಕಿಸ್ತಾನದ ಸುಪ್ರೀಂ ಕೋರ್ಟ್ ಮಂಗಳವಾರ ಮಹತ್ವದ ಆದೇಶ ನೀಡಿತ್ತು. ಆದಿಯಾಲಾ ಜೈಲು ಅಧಿಕಾರಿಗಳು ಪಿಟಿಐ ಸಂಸ್ಥಾಪಕ ಇಮ್ರಾನ್ ಖಾನ್ ಅವರನ್ನು ತಪಾಸಣೆ ಮತ್ತು ಚಿಕಿತ್ಸೆಗಾಗಿ ಎರಡು ದಿನಗಳೊಳಗೆ ಶಿಫಾ ಇಂಟರ್‌ನ್ಯಾಷನಲ್ ಆಸ್ಪತ್ರೆಗೆ ಸ್ಥಳಾಂತರಿಸಬೇಕು ಎಂದು ನ್ಯಾಯಾಲಯ ಸೂಚಿಸಿತ್ತು.

ಇಮ್ರಾನ್ ಖಾನ್ ಅವರ ತಪಾಸಣೆ ಮತ್ತು ಚಿಕಿತ್ಸೆಗಾಗಿ ವಿಶೇಷ ವೈದ್ಯಕೀಯ ಮಂಡಳಿ ರಚಿಸುವಂತೆಯೂ ನ್ಯಾಯಾಲಯ ಆದೇಶಿಸಿತ್ತು. ವೈದ್ಯಕೀಯ ಪರೀಕ್ಷೆ ಹಾಗೂ ಚಿಕಿತ್ಸೆಯ ಸಂದರ್ಭದಲ್ಲಿ ವೈದ್ಯೆ ಉಜ್ಮಾ ಮತ್ತು ಇಮ್ರಾನ್ ಖಾನ್ ಅವರ ವೈಯಕ್ತಿಕ ವೈದ್ಯರು ಹಾಜರಿರುವಂತೆ ಸೂಚಿಸಲಾಗಿತ್ತು. ಅವರ ಚಿಕಿತ್ಸೆ ಮತ್ತು ವೈದ್ಯಕೀಯ ವೆಚ್ಚವನ್ನು ಇಮ್ರಾನ್ ಖಾನ್ ಅವರ ಕುಟುಂಬವೇ ಭರಿಸಬೇಕು ಎಂದು ನ್ಯಾಯಾಲಯ ತಿಳಿಸಿತ್ತು.

ಸರ್ಕಾರದಿಂದ ಮರುಪರಿಶೀಲನಾ ಅರ್ಜಿ

ಸುಪ್ರೀಂ ಕೋರ್ಟ್ ಇಮ್ರಾನ್ ಖಾನ್ ಅವರನ್ನು ಆಸ್ಪತ್ರೆಗೆ ಸ್ಥಳಾಂತರಿಸುವಂತೆ ಆದೇಶ ನೀಡಿದ ಬಳಿಕ ಪಾಕಿಸ್ತಾನದ ಒಕ್ಕೂಟ ಸರ್ಕಾರ ಈ ತೀರ್ಪಿನ ವಿರುದ್ಧ ಬುಧವಾರ ಮರುಪರಿಶೀಲನಾ ಅರ್ಜಿ ಸಲ್ಲಿಸಿತ್ತು. ಸರ್ಕಾರದ ಆಕ್ಷೇಪದ ನಡುವೆಯೂ ನ್ಯಾಯಾಲಯ ನಿಗದಿಪಡಿಸಿದ್ದ ಗಡುವಿನೊಳಗೆ ಇಮ್ರಾನ್ ಖಾನ್ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಜೈಲಿಗೆ ಮರಳುವ ಸಾಧ್ಯತೆ ಇಲ್ಲವೇ?

ಇಮ್ರಾನ್ ಖಾನ್ ಅವರನ್ನು ಆಸ್ಪತ್ರೆಯಿಂದ ಅವರ ಬನಿ ಗಾಲಾ ನಿವಾಸಕ್ಕೆ ಸ್ಥಳಾಂತರಿಸುವ ಸಾಧ್ಯತೆ ಕುರಿತು ಈಗಲೇ ಯಾವುದೇ ನಿರ್ಧಾರ ಕೈಗೊಳ್ಳಲು ಸಾಧ್ಯವಿಲ್ಲ ಎಂದು ಪಿಟಿಐ ಪ್ರಧಾನ ಕಾರ್ಯದರ್ಶಿ ಸಲ್ಮಾನ್ ಅಕ್ರಮ್ ರಾಜಾ ಹೇಳಿದ್ದಾರೆ. ಯಾವುದೇ ಕಟ್ಟಡವನ್ನು ಉಪಜೈಲು ಎಂದು ಘೋಷಿಸುವ ಅವಕಾಶವಿದೆ ಎಂದು ಅವರು ತಿಳಿಸಿದ್ದಾರೆ.

ವೈದ್ಯರ ತಂಡದ ಪರಿಶೀಲನೆಯ ಬಳಿಕ ಇಮ್ರಾನ್ ಖಾನ್ ಅವರನ್ನು ಮತ್ತೆ ಜೈಲಿಗೆ ಕಳುಹಿಸುವುದು ಅವರ ಆರೋಗ್ಯಕ್ಕೆ ಹಾನಿಕಾರಕ ಎಂಬ ನಿರ್ಧಾರಕ್ಕೆ ಬಂದರೆ, ಪರ್ಯಾಯ ವ್ಯವಸ್ಥೆ ಕುರಿತು ಪರಿಗಣಿಸಬಹುದು ಎಂದು ಸಲ್ಮಾನ್ ಅಕ್ರಮ್ ರಾಜಾ ಹೇಳಿದ್ದಾರೆ.

ಹಲವು ಪ್ರಕರಣಗಳಲ್ಲಿ ಶಿಕ್ಷೆ

2022ರ ಏಪ್ರಿಲ್‌ನಲ್ಲಿ ಅವಿಶ್ವಾಸ ನಿರ್ಣಯದ ಮೂಲಕ ಪ್ರಧಾನಿ ಸ್ಥಾನದಿಂದ ಪದಚ್ಯುತರಾದ ಇಮ್ರಾನ್ ಖಾನ್ ವಿರುದ್ಧ ಹಲವು ಗಂಭೀರ ಪ್ರಕರಣಗಳು ದಾಖಲಾಗಿವೆ. ವಿವಿಧ ಪ್ರಕರಣಗಳಲ್ಲಿ ಅವರನ್ನು ದೋಷಿ ಎಂದು ಘೋಷಿಸಿ ಶಿಕ್ಷೆ ವಿಧಿಸಲಾಗಿದೆ. 2023ರ ಆಗಸ್ಟ್‌ನಿಂದ ಅವರು ರಾವಲ್ಪಿಂಡಿಯ ಆದಿಯಾಲಾ ಜೈಲಿನಲ್ಲಿ ಬಂಧನದಲ್ಲಿದ್ದಾರೆ.

ಇದೀಗ ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಅವರನ್ನು ವೈದ್ಯಕೀಯ ತಪಾಸಣೆ ಮತ್ತು ಚಿಕಿತ್ಸೆಗಾಗಿ ಶಿಫಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ತಜ್ಞ ವೈದ್ಯರ ತಂಡದ ವರದಿ ಹಾಗೂ ಮುಂದಿನ ನಿರ್ಧಾರದತ್ತ ಪಾಕಿಸ್ತಾನದ ರಾಜಕೀಯ ವಲಯದ ಗಮನ ನೆಟ್ಟಿದೆ.

--------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande