ನಾಳೆ ಅಮಿತ್ ಶಾ ನೇತೃತ್ವದಲ್ಲಿ ರಾಷ್ಟ್ರೀಯ ಭದ್ರತಾ ಕಾರ್ಯತಂತ್ರ ಸಮ್ಮೇಳನ
ನವದೆಹಲಿ, 23 ಆಗಸ್ಟ್ (ಹಿ.ಸ.): ಆ್ಯಂಕರ್:ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು ಆ.24 ಮತ್ತು 25ರಂದು ನವದೆಹಲಿಯಲ್ಲಿ ನಡೆಯಲಿರುವ 9ನೇ ರಾಷ್ಟ್ರೀಯ ಭದ್ರತಾ ಕಾರ್ಯತಂತ್ರ ಸಮ್ಮೇಳನದಲ್ಲಿ ಪಾಲ್ಗೊಳ್ಳಲಿದ್ದಾರೆ. ಎರಡು ದಿನಗಳ ಸಮ್ಮೇಳನದಲ್ಲಿ ದೇಶದ ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ ಸಮಕಾ
अमित शाह


ನವದೆಹಲಿ, 23 ಆಗಸ್ಟ್ (ಹಿ.ಸ.):

ಆ್ಯಂಕರ್:ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು ಆ.24 ಮತ್ತು 25ರಂದು ನವದೆಹಲಿಯಲ್ಲಿ ನಡೆಯಲಿರುವ 9ನೇ ರಾಷ್ಟ್ರೀಯ ಭದ್ರತಾ ಕಾರ್ಯತಂತ್ರ ಸಮ್ಮೇಳನದಲ್ಲಿ ಪಾಲ್ಗೊಳ್ಳಲಿದ್ದಾರೆ.

ಎರಡು ದಿನಗಳ ಸಮ್ಮೇಳನದಲ್ಲಿ ದೇಶದ ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ ಸಮಕಾಲೀನ ವಿಚಾರಗಳು ಹಾಗೂ ಸವಾಲುಗಳ ಕುರಿತು ಭದ್ರತಾ ಮತ್ತು ಪೊಲೀಸ್ ಪಡೆಗಳ 850ಕ್ಕೂ ಹೆಚ್ಚು ಅಧಿಕಾರಿಗಳು ಚರ್ಚೆ ನಡೆಸಲಿದ್ದಾರೆ.

ಈ ಬಾರಿ ಸಮ್ಮೇಳನವನ್ನು ಹೈಬ್ರಿಡ್ ಮಾದರಿಯಲ್ಲಿ ಆಯೋಜಿಸಲಾಗಿದ್ದು, ಅಧಿಕಾರಿಗಳು ನೇರವಾಗಿ ಹಾಗೂ ಆನ್‌ಲೈನ್ ಮೂಲಕ ಭಾಗವಹಿಸಲಿದ್ದಾರೆ. ದೇಶದ ವಿವಿಧ ಭದ್ರತಾ ಪಡೆಗಳು ಮತ್ತು ಪೊಲೀಸ್ ಸಂಘಟನೆಗಳ ಅಧಿಕಾರಿಗಳು ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ ಪ್ರಮುಖ ವಿಷಯಗಳ ಕುರಿತು ವಿಚಾರ ವಿನಿಮಯ ನಡೆಸಲಿದ್ದಾರೆ.

ಬದಲಾಗುತ್ತಿರುವ ಭದ್ರತಾ ಪರಿಸ್ಥಿತಿಯಲ್ಲಿ ಎದುರಾಗುತ್ತಿರುವ ಸವಾಲುಗಳು, ಅವುಗಳನ್ನು ಎದುರಿಸುವ ಕಾರ್ಯತಂತ್ರ ಹಾಗೂ ದೇಶದ ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಕ್ರಮಗಳ ಕುರಿತು ಸಮ್ಮೇಳನದಲ್ಲಿ ಸಮಗ್ರ ಚರ್ಚೆ ನಡೆಯಲಿದೆ.

--------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande