ಆ.25ರಂದು ಉದ್ಯೋಗ ನೇರ ಸಂದರ್ಶನ
ಶಿವಮೊಗ್ಗ, 23 ಆಗಸ್ಟ್ (ಹಿ.ಸ.): ಆ್ಯಂಕರ್: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಸೋನಾಲಿಕ ಟ್ರ್ಯಾಕ್ಟರ್ ಪ್ರೈ.ಲಿ. ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಆಗಸ್ಟ್ 25ರಂದು ಬೆಳಿಗ್ಗೆ 10 ಗಂಟೆಗೆ ನೇರ ಸಂದರ್ಶನ ಆಯೋಜಿಸಲಾಗಿದೆ. ಐಟಿಐ, ಡಿಪ್ಲೊಮಾ ಅಥವಾ ಯಾವುದೇ ಪದವಿ ತೇರ್ಗಡೆಯಾ
ಆ.25ರಂದು ಉದ್ಯೋಗ ನೇರ ಸಂದರ್ಶನ


ಶಿವಮೊಗ್ಗ, 23 ಆಗಸ್ಟ್ (ಹಿ.ಸ.):

ಆ್ಯಂಕರ್:

ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಸೋನಾಲಿಕ ಟ್ರ್ಯಾಕ್ಟರ್ ಪ್ರೈ.ಲಿ. ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಆಗಸ್ಟ್ 25ರಂದು ಬೆಳಿಗ್ಗೆ 10 ಗಂಟೆಗೆ ನೇರ ಸಂದರ್ಶನ ಆಯೋಜಿಸಲಾಗಿದೆ.

ಐಟಿಐ, ಡಿಪ್ಲೊಮಾ ಅಥವಾ ಯಾವುದೇ ಪದವಿ ತೇರ್ಗಡೆಯಾಗಿರುವ 18ರಿಂದ 30 ವರ್ಷದೊಳಗಿನ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಬಹುದು.

ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ತಮ್ಮ ಬಯೋಡೇಟಾ ಹಾಗೂ ಆಧಾರ್ ಕಾರ್ಡ್ ಪ್ರತಿಯೊಂದಿಗೆ ಸಂದರ್ಶನಕ್ಕೆ ಹಾಜರಾಗಬೇಕು.

ಸಂದರ್ಶನಕ್ಕೆ ಯಾವುದೇ ಶುಲ್ಕವಿರುವುದಿಲ್ಲ.

ಸಂದರ್ಶನವು ಗುತ್ಯಪ್ಪ ಕಾಲೋನಿ, ಪಂಪಾನಗರ 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನಡೆಯಲಿದೆ ಎಂದು ಉದ್ಯೋಗಾಧಿಕಾರಿಗಳು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande