ಲಕ್ಕೂರು ಸರ್ಕಾರಿ ಆಸ್ಪತ್ರೆಗೆ ವೈದ್ಯಕೀಯ ಸಿಬ್ಬಂದಿ ನೇಮಕ ಮಾಡಲು ಮನವಿ
ಲಕ್ಕೂರು ಸರ್ಕಾರಿ ಆಸ್ಪತ್ರೆಗೆ ವೈದ್ಯಕೀಯ ಸಿಬ್ಬಂದಿ ನೇಮಕ ಮಾಡಲು ಮನವಿ
ಮಾಲೂರು ತಾಲ್ಲೂಕು ಲಕ್ಕೂರು ಸಾರ್ವಜನಿಕ ಆಸ್ಪತ್ರೆಗೆ ಅಗತ್ಯ ಸಿಬ್ಬಂದಿ ನೇಮಕ ಮಾಡುವಂತೆ ಒತ್ತಾಯಿಸಿ ಗಾನಸುಧಾ ಸಾಂಸ್ಕೃತಿಕ ಅಧ್ಯಕ್ಷ ಗೌತಮ್ ರವರು ಮಾಲೂರು ತಾಲ್ಲೂಕು ಆರೋಗ್ಯ ಅಧಿಕಾರಿಗೆ ಮನವಿ ಸಲ್ಲಿಸಿದರು.


ಕೋಲಾರ, ೨೪ ಆಗಸ್ಟ್ (ಹಿ.ಸ.)

ಆ್ಯಂಕರ್ : ಮಾಲೂರು ತಾಲ್ಲೂಕಿನ ಲಕ್ಕೂರು ಹೋಬಳಿ ಸಾರ್ವಜನಿಕ ಆಸ್ಪತ್ರೆಯಲ್ಲಿ ರಾತ್ರಿ ವೇಳೆ ವೈದ್ಯರು, ನರ್ಸ್ ಸಿಬ್ಬಂದಿ, ಸೆಕ್ಯುರಿಟಿ ಗಾರ್ಡ್ ಹಾಗೂ ಆಂಬುಲೆನ್ಸ್ ವ್ಯವಸ್ಥೆ ಇಲ್ಲದಿರುವುದರಿಂದ ಬಡ ರೋಗಿಗಳಿಗೆ ತೊಂದರೆಯಾಗುತ್ತಿದ್ದು, ಕೂಡಲೇ ಸರ್ಕಾರದಿಂದ ಅಗತ್ಯ ಸಿಬ್ಬಂದಿ ಮತ್ತು ಸೌಕರ್ಯಗಳನ್ನು ಕಲ್ಪಿಸಿಕೊಡುವಂತೆ ಮಾಲೂರು ತಾಲ್ಲೂಕು ಆರೋಗ್ಯ ಅಧಿಕಾರಿಗೆ ಗಾನಸುಧಾ ಸಾಂಸ್ಕೃತಿಕ ಕಲಾ ಸಂಸ್ಥೆಯ ಅಧ್ಯಕ್ಷ ಕೆ.ಗೌತಮ್ ಮನವಿ ಸಲ್ಲಿಸಿದರು.

ಈ ಆಸ್ಪತ್ರೆಗೆ ಬರುವ ರೋಗಿಗಳು ಹೆಚ್ಚಾಗಿ ಬಡವರಾಗಿದ್ದು, ರಾತ್ರಿ ವೇಳೆಯಲ್ಲಿ ತುರ್ತು ಚಿಕಿತ್ಸೆಗೆ ಆಂಬುಲೆನ್ಸ್ ವ್ಯವಸ್ಥೆ ಲಭ್ಯವಿಲ್ಲ, ರಾತ್ರಿ ವೇಳೆ ವೈದ್ಯರು ಇಲ್ಲದೆ ಕೇವಲ ಒಬ್ಬ ನರ್ಸ್ ಮಾತ್ರ ಇರುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ ಹಾಗಾಗಿ ಒಬ್ಬ ವೈದ್ಯರು, ಸ್ಟಾಫ್ ನರ್ಸ್, ಒಬ್ಬ ಕಾವಲುಗಾರರನ್ನು ಹಾಗೂ ಆಂಬುಲೆನ್ಸ್ ಸೌಲಭ್ಯವನ್ನು ಸರ್ಕಾರದಿಂದ ನೇಮಿಸುವಂತೆ ಗೌತಮ್ ಒತ್ತಾಯಿಸಿದ್ದಾರೆ.

ಈ ಸಂದರ್ಭದಲ್ಲಿ ಗಾನಸುಧಾ ಸಾಂಸ್ಕೃತಿಕ ಕಲಾ ಸಂಸ್ಥೆಯ ಗೌರವ ಸಲಹೆಗಾರರಾದ ಎನ್. ಪ್ರದೀಪ್ ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್


 rajesh pande