ಜಾತಿ ಪ್ರಮಾಣ ಪತ್ರ ವಿವಾದ ; ಕೊತ್ತೂರು ಮಂಜುನಾಥ್ ವಿರುದ್ಧ ಕಾನೂನು ಕ್ರಮಕ್ಕೆ ಮುಖ್ಯಮಂತ್ರಿಗಳಿಗೆ ಮನವಿ
ಜಾತಿ ಪ್ರಮಾಣ ಪತ್ರ ವಿವಾದ ; ಕೊತ್ತೂರು ಮಂಜುನಾಥ್ ವಿರುದ್ಧ ಕಾನೂನು ಕ್ರಮಕ್ಕೆ ಮುಖ್ಯಮಂತ್ರಿಗಳಿಗೆ ಮನವಿ
ಶಾಸಕ ಕೊತ್ತೂರು ಜಿ. ಮಂಜುನಾಥ್ ಜಾತಿ ಪ್ರಮಾಣ ಪತ್ರ ವಿವಾದದ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸುವಂತೆ ಒತ್ತಾಯಿಸಿ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ಗೆ ಮನವಿ ಸಲ್ಲಿಸಿದರು.


ಕೋಲಾರ, ಆಗಸ್ಟ್ ೨೪ (ಹಿ.ಸ.)

ಆ್ಯಂಕರ್: ಕೋಲಾರ ಶಾಸಕ ಕೊತ್ತೂರು ಜಿ. ಮಂಜುನಾಥ್ ಅವರ ಜಾತಿ ಪ್ರಮಾಣಪತ್ರ ವಿವಾದಕ್ಕೆ ಸಂಬಂಧಿಸಿದಂತೆ ಶೀಘ್ರವೇ ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು ಆಗ್ರಹಿಸಿ, ದಲಿತ ಹಾಗೂ ಪ್ರಗತಿಪರ ಮುಖಂಡರು ಮುಖ್ಯಮಂತ್ರಿಗಳ ಅಧಿಕೃತ ನಿವಾಸದಲ್ಲಿ ಸೋಮವಾರ ಮನವಿ ಸಲ್ಲಿಸಿದರು.

ಮುಳಬಾಗಿಲು ಮೀಸಲು ಕ್ಷೇತ್ರದಿಂದ ಆಯ್ಕೆಯಾಗಿರುವ ಕೊತ್ತೂರು ಮಂಜುನಾಥ್ ಅವರು ಸುಳ್ಳು ಜಾತಿ ಪ್ರಮಾಣಪತ್ರ (ಬುಡ್ಗ ಜಂಗಮ) ಪಡೆದಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಸಂವಿಧಾನಬದ್ಧವಾಗಿ ದಲಿತರಿಗೆ ಮೀಸಲಾಗಿರುವ ಈ ಕ್ಷೇತ್ರದಲ್ಲಿ ಹಿಂದುಳಿದ ವರ್ಗಗಳ ಬೈರಾಗಿ ಜನಾಂಗಕ್ಕೆ ಸೇರಿರುವವರು ಸ್ಪರ್ಧಿಸಿರುವುದು ವಿವಾದಕ್ಕೆ ಕಾರಣವಾಗಿದೆ.

ಈ ಕುರಿತು ಈಗಾಗಲೇ ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ನಲ್ಲಿ ವಿಚಾರಣೆಗಳು ನಡೆದಿವೆ ಹಾಗೂ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಚುರುಕುಗೊಳಿಸುವಂತೆ ಮುಖಂಡರು ಒತ್ತಾಯಿಸಿದ್ದಾರೆ.

ಮುಳಬಾಗಿಲು ವಿಧಾನಸಭಾ ಮೀಸಲು ಕ್ಷೇತ್ರದಿಂದ ಸ್ಪರ್ಧಿಸಿ ಆಯ್ಕೆಯಾಗಿದ್ದ ಕೊತ್ತೂರು ಮಂಜುನಾಥ್ ಸುಳ್ಳು ಜಾತಿ ಪ್ರಮಾಣ ಪತ್ರ ನೀಡಿದ್ದಾರೆ. ಸಂವಿಧಾನಬದ್ಧವಾಗಿ ಈ ಕ್ಷೇತ್ರವನ್ನು ದಲಿತರಿಗೆ ಮೀಸಲು ಇರಿಸಲಾಗಿದೆ. ಬುಡ್ಗ ಜಂಗಮ ಜಾತಿ ಪ್ರಮಾಣ ಪತ್ರ ನೀಡಿದ್ದಾರೆ. ಈಗಾಗಲೇ ಹೈಕೋರ್ಟ್ ಮತ್ತು ಸುಪ್ರಿಂ ಕೋರ್ಟ್ಗಳು ಅವರು ಹಿಂದುಳಿದ ವರ್ಗಗಳ ಬೈರಾಗಿ ಜನಾಂಗಕ್ಕೆ ಸೇರಿದ್ದಾರೆ.

ನಾಗರೀಕ ಹಕ್ಕು ಜಾರಿ ನಿರ್ದೇಶನಾಲಯ ಪ್ರಕರಣ ದಾಖಲಿಸಿದ್ದು, ತನಿಖೆ ಆಮೆ ನಡಿಗೆಯಲ್ಲಿ ನಡೆಯುತ್ತಿದೆ. ಕೋಲಾರದ ಶಾಸಕ ಕೊತ್ತೂರು ಜಿ. ಮಂಜುನಾಥ್ ಅವರ ಜಾತಿ ಪ್ರಮಾಣಪತ್ರಕ್ಕೆ ಸಂಬAಧಿಸಿದ ವಿಚಾರದಲ್ಲಿ ಶೀಘ್ರವಾಗಿ ಸೂಕ್ತ ಕಾನೂನು ಕ್ರಮ ಕೈಗೊಂಡು ನ್ಯಾಯಾಲಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನಿವಾಸದಲ್ಲಿ ಮನವಿ ಸಲ್ಲಿಸಲಾಯಿತು.

ಶಾಸಕರ ಜಾತಿ ಪ್ರಮಾಣಪತ್ರದ ಕುರಿತು ಉಂಟಾಗಿರುವ ವಿವಾದವನ್ನು ಗಂಭೀರವಾಗಿ ಪರಿಗಣಿಸಿ, ಸಂಬ0ಧಿಸಿದ ದಾಖಲೆಗಳನ್ನು ಪರಿಶೀಲಿಸಿ ಕಾನೂನುಬದ್ಧವಾಗಿ ಶೀಘ್ರ ಕ್ರಮ ಕೈಗೊಳ್ಳುವಂತೆ ಮನವಿಯಲ್ಲಿ ಒತ್ತಾಯಿಸಲಾಯಿತು.

ಈ ಸಂದರ್ಭದಲ್ಲಿ ಭಾರತೀಯ ದಲಿತ ಸೇನೆಯ ಅಧ್ಯಕ್ಷ ದಲಿತ ನಾರಾಯಣಸ್ವಾಮಿ, ದ್ರಾವಿಡ ವಿಮೋಚನಾ ಸಂಘದ ಅಧ್ಯಕ್ಷ ಕೆ.ಎಂ. ಅನಂತಕೀರ್ತಿ, ಕೆಇಬಿ ಚಂದ್ರು, ಸಾಹುಕಾರ್ ಶಂಕರಪ್ಪ, ರಾಜ್ ಹರಳಕುಂಟೆ, ಅನಿಲ್, ಗಿರಿಜಾ, ಉಮಾ, ಆದಿತ್ಯ ಮೌರ್ಯ, ಮಾಹಿತಿ ಮಂಜುನಾಥ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್


 rajesh pande