ವಿವಿಧ ಯೋಜನೆಗಳ ಸೌಲಭ್ಯಕ್ಕೆ ಅರ್ಜಿ ಆಹ್ವಾನ: ಸೆಪ್ಟೆಂಬರ್ 17 ಕೊನೆಯ ದಿನ
ಬಳ್ಳಾರಿ, 24 ಆಗಸ್ಟ್ (ಹಿ.ಸ.) ಆ್ಯಂಕರ್ : ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ 2026-27ನೇ ಸಾಲಿನಲ್ಲಿ ಜಾರಿಗೊಳಿಸಲಾಗುತ್ತಿರುವ ವಿವಿಧ ಯೋಜನೆಗಳಡಿ ಸಾಲ ಹಾಗೂ ಸಹಾಯಧನ ಸೌಲಭ್ಯ ಪಡೆಯಲು ಜಿಲ್ಲೆಯ ಮತೀಯ ಅಲ್ಪಸಂಖ್ಯಾತ ಸಮುದಾಯದವರಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ನ
ವಿವಿಧ ಯೋಜನೆಗಳ ಸೌಲಭ್ಯಕ್ಕೆ ಅರ್ಜಿ ಆಹ್ವಾನ: ಸೆಪ್ಟೆಂಬರ್ 17 ಕೊನೆಯ ದಿನ


ಬಳ್ಳಾರಿ, 24 ಆಗಸ್ಟ್ (ಹಿ.ಸ.)

ಆ್ಯಂಕರ್ : ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ 2026-27ನೇ ಸಾಲಿನಲ್ಲಿ ಜಾರಿಗೊಳಿಸಲಾಗುತ್ತಿರುವ ವಿವಿಧ ಯೋಜನೆಗಳಡಿ ಸಾಲ ಹಾಗೂ ಸಹಾಯಧನ ಸೌಲಭ್ಯ ಪಡೆಯಲು ಜಿಲ್ಲೆಯ ಮತೀಯ ಅಲ್ಪಸಂಖ್ಯಾತ ಸಮುದಾಯದವರಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

ಮುಸ್ಲಿಂ, ಕ್ರಿಶ್ಚಿಯನ್, ಜೈನ, ಬೌದ್ಧ, ಸಿಖ್ ಹಾಗೂ ಪಾರ್ಸಿ ಸಮುದಾಯದ ಅರ್ಹ ಫಲಾನುಭವಿಗಳು ಈ ಯೋಜನೆಗಳ ಪ್ರಯೋಜನ ಪಡೆಯಬಹುದಾಗಿದೆ.

ಯೋಜನೆಗಳು:

ಶೈಕ್ಷಣಿಕ ಮತ್ತು ವೃತ್ತಿಪರ ಯೋಜನೆಗಳು: ಅರಿವು ಯೋಜನೆ, ವಿದೇಶ ವ್ಯಾಸಂಗ ಸಾಲ ಯೋಜನೆ ಹಾಗೂ ತರಬೇತಿ ಯೋಜನೆ.

ಸ್ವಯಂ ಉದ್ಯೋಗ ಮತ್ತು ಆರ್ಥಿಕ ಚಟುವಟಿಕೆಗಳು: ಸ್ವಾವಲಂಬಿ ಸಾರಥಿ ಯೋಜನೆ, ಶ್ರಮಶಕ್ತಿ ಸಾಲ, ವೃತ್ತಿ ಪ್ರೋತ್ಸಾಹ, ವ್ಯಾಪಾರ/ಉದ್ದಿಮೆ ನೇರ ಸಾಲ ಮತ್ತು ನವೋದಯ ಯೋಜನೆ.

ವಿಶೇಷ ವಲಯ ಯೋಜನೆಗಳು: ಗಂಗಾ ಕಲ್ಯಾಣ ಯೋಜನೆ, ರೇಷ್ಮೆ ನೂಲು ಬಿಚ್ಚಾಣಿಕೆ ಉದ್ಯಮ ಪೆÇ್ರೀತ್ಸಾಹ, ಫಾಸ್ಟ್ ಫುಡ್ ಟ್ರಕ್/ಟ್ರೈಲರ್ ಫುಡ್ (ಕಿಯೋಸ್ಕ್) ಯೋಜನೆ, ಸಿಖ್ಖಲಿಗಾರ ಸಮುದಾಯದ ಆರ್ಥಿಕ ಸಬಲೀಕರಣ ಯೋಜನೆ, ಮಹಿಳಾ ಸ್ವ-ಸಹಾಯ ಗುಂಪುಗಳಿಗೆ ಸಹಾಯಧನ ಹಾಗೂ ಸಾಂತ್ವನ ಯೋಜನೆ.

ಅರ್ಜಿದಾರರು ಕನಿಷ್ಠ 15 ವರ್ಷಗಳಿಂದ ಜಿಲ್ಲೆಯಲ್ಲಿ ಖಾಯಂ ನಿವಾಸಿಯಾಗಿರಬೇಕು. ವಯೋಮಿತಿ ಕನಿಷ್ಠ 18 ವರ್ಷ ಹಾಗೂ ಗರಿಷ್ಠ 55 ವರ್ಷದೊಳಗಿರಬೇಕು. ಕುಟುಂಬದ ವಾರ್ಷಿಕ ಆದಾಯ ಎಲ್ಲಾ ಮೂಲಗಳಿಂದ ರೂ. 4,50,000 ಮೀರಬಾರದು.

ಮಹಿಳೆಯರಿಗೆ ಶೇ. 33 ರಷ್ಟು ಹಾಗೂ ವಿಕಲಚೇತನರಿಗೆ ಶೇ. 3 ರಷ್ಟು ಮೀಸಲಾತಿ ಇರುತ್ತದೆ. ಈ ಹಿಂದೆ ನಿಗಮದಿಂದ ಯಾವುದೇ ಸೌಲಭ್ಯ ಪಡೆಯದವರು ಮಾತ್ರ ಅರ್ಜಿ ಸಲ್ಲಿಸಲು ಅರ್ಹರು.

ಅರ್ಜಿದಾರರು ಆನ್ಲೈನ್ನಲ್ಲಿ ಜಾತಿ ಮತ್ತು ಆದಾಯ ಪ್ರಮಾಣಪತ್ರ, ಆಧಾರ್ ಕಾರ್ಡ್, ಐಎಫ್ಎಸ್ಸಿ ಕೋಡ್ ಹೊಂದಿರುವ ಬ್ಯಾಂಕ್ ಪಾಸ್ಬುಕ್ ಪ್ರತಿ, ಯೋಜನಾ ವರದಿ ಹಾಗೂ ಅರ್ಜಿದಾರ ಮತ್ತು ಜಾಮೀನುದಾರರ ಭಾವಚಿತ್ರಗಳನ್ನು ಅಪ್ಲೋಡ್ ಮಾಡಬೇಕು.

ಅರ್ಹ ಆಸಕ್ತರು ನಿಗಮದ ಅಧಿಕೃತ ವೆಬ್ಸೈಟ್ https://kmdconline.karnataka.gov.in/ ಮೂಲಕ ಸೆ.17 ರೊಳಗೆ ಅರ್ಜಿ ಸಲ್ಲಿಸಬೇಕು.

ಹೆಚ್ಚಿನ ವಿವರಗಳಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, 1ನೇ ಮಹಡಿ, ಮೌಲಾನಾ ಆಜಾದ್ ಭವನ, ಜೋಳದರಾಶಿ ದೊಡ್ಡನಗೌಡ ರಂಗಮಂದಿರ ಹತ್ತಿರ, ಬಳ್ಳಾರಿ ಅಥವಾ ದೂ. ಸಂಖ್ಯೆ: 08392-294370, 8277944207 ಅನ್ನು ಸಂಪರ್ಕಿಸಬಹುದು.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande