
ಬೆಂಗಳೂರು, 24 ಆಗಸ್ಟ್ (ಹಿ.ಸ.):
ಆ್ಯಂಕರ್:
ಸಚಿವ ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ನಾಯಕರು ವಿಧಾನಸೌಧದ ಬಳಿ ತೀವ್ರ ಪ್ರತಿಭಟನೆ ನಡೆಸಿದರು. ಇದರ ಬೆನ್ನಲ್ಲೇ ಆಡಳಿತರೂಢ ಕಾಂಗ್ರೆಸ್ ಪಕ್ಷವು ವಿನೂತನ ಶೈಲಿಯಲ್ಲಿ ಪ್ರತಿಹೋರಾಟ ನಡೆಸುವ ಮೂಲಕ ತಿರುಗೇಟು ನೀಡಿದೆ.
ಎಸ್ ಮನೋಹರ್ ನೇತೃತ್ವದಲ್ಲಿ ನಡೆದ ಈ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಎಲ್ಇಡಿ ಪ್ರಚಾರ ವಾಹನಗಳನ್ನು ಬಳಸಿಕೊಂಡು ಸರ್ಕಾರದ ವಿರುದ್ಧದ ಬಿಜೆಪಿ ಟೀಕೆಗಳಿಗೆ ಪ್ರತ್ಯುತ್ತರ ನೀಡಿದರು.
ಸದನದಲ್ಲಿ ಚರ್ಚೆ ನಡೆಸುವುದನ್ನು ಬಿಟ್ಟು ಮೈತ್ರಿ ನಾಯಕರು ಬೀದಿಗಿಳಿದು ಹೋರಾಟ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಮುಖಂಡರು ತೀವ್ರವಾಗಿ ಕಿಡಿಕಾರಿದರು.
ಉಭಯ ಪಕ್ಷಗಳ ಪ್ರತಿಭಟನೆಯಿಂದಾಗಿ
ವಿಧಾನಸೌಧದ ಸುತ್ತಮುತ್ತ ಕೆಲ ಕಾಲ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R