ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಬೃಹತ್ ಪ್ರತಿಭಟನೆ
ಬೆಂಗಳೂರು, 24 ಆಗಸ್ಟ್ (ಹಿ.ಸ.): ಆ್ಯಂಕರ್:ವಾಲ್ಮೀಕಿ ಅಭಿವೃದ್ಧಿ ನಿಗಮದ ನೂರಾರು ಕೋಟಿ ರೂಪಾಯಿ ಹಣದ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಗಂಭೀರ ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬಿಜೆಪಿ ವತಿಯಿಂದ ಬೃಹತ್ ಪ್ರತಿ
ಪ್ರತಿಭಟನೆಯಲ್ಲಿ ಭಾಗವಹಿಸಿದ ವಿಜಯೇಂದ್ರ


ಬೆಂಗಳೂರು, 24 ಆಗಸ್ಟ್ (ಹಿ.ಸ.):

ಆ್ಯಂಕರ್:ವಾಲ್ಮೀಕಿ ಅಭಿವೃದ್ಧಿ ನಿಗಮದ ನೂರಾರು ಕೋಟಿ ರೂಪಾಯಿ ಹಣದ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಗಂಭೀರ ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನಾ ಸಮಾವೇಶ ಹಾಗೂ ವಿಧಾನಸೌಧ ಮುತ್ತಿಗೆ ಚಳುವಳಿ ನಡೆಸಲಾಯಿತು.

ವಿಧಾನಸಭೆಯ ಪ್ರತಿ ಪಕ್ಷದ ನಾಯಕ ಆರ್. ಅಶೋಕ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಶಾಸಕರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

ಈ ವೇಳೆ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಭ್ರಷ್ಟಾಚಾರದ ಮೂಲಕ ಬಡವರು, ಶೋಷಿತರು ಹಾಗೂ ದಲಿತರ ಹಣವನ್ನು ಲೂಟಿ ಮಾಡಲಾಗುತ್ತಿದೆ ಎಂದು ಆರೋಪಿಸಿದರು. ಪ್ರತಿಭಟನಾಕಾರರನ್ನು ತಡೆಯಲು ಪೊಲೀಸರು ಪ್ರಯತ್ನಿಸಿದರೂ, ಜನರ ನ್ಯಾಯಯುತ ಹೋರಾಟವನ್ನು ಹತ್ತಿಕ್ಕಲು ಸಾಧ್ಯವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯ ಸರ್ಕಾರದ ಬೊಕ್ಕಸವನ್ನು ದುರುಪಯೋಗಪಡಿಸಿಕೊಂಡಿರುವ ಆರೋಪ ಎದುರಿಸುತ್ತಿರುವ ಸಚಿವರನ್ನು ಸಂಪುಟದಿಂದ ವಜಾಗೊಳಿಸಬೇಕು ಹಾಗೂ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣದ ಅವ್ಯವಹಾರದ ಸಂಪೂರ್ಣ ಸತ್ಯವನ್ನು ಹೊರತರಬೇಕು ಎಂದು ಆಗ್ರಹಿದಯ ಅವರು, ಬೇಡಿಕೆ ಈಡೇರುವವರೆಗೆ ಹೋರಾಟವನ್ನು ವಿಧಾನಸಭೆಯ ಒಳಗೂ ಹೊರಗೂ ಮುಂದುವರಿಸುವುದಾಗಿ ಎಚ್ಚರಿಸಿದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande