ವಾಲ್ಮೀಕಿ ನಿಗಮದ ಬಹುಕೋಟಿ ಹಗರಣ:ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ
ಬೆಂಗಳೂರು, 24 ಆಗಸ್ಟ್ (ಹಿ.ಸ.): ಆ್ಯಂಕರ್:ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ ರೂಪಾಯಿ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಸೋಮವಾರ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಿತು. ಫ್ರೀಡಂ ಪಾರ್ಕ್‌ನಲ್ಲಿ ಬೆಳಗ್ಗೆ 1
ಪೋಲಿಸ್ ವಶಕ್ಕೆ ಬಿಜೆಪಿ ನಾಯಕರು


ಪೋಲಿಸ್ ಬಂದೋಬಸ್ತ


ಬೆಂಗಳೂರು, 24 ಆಗಸ್ಟ್ (ಹಿ.ಸ.):

ಆ್ಯಂಕರ್:ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ ರೂಪಾಯಿ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಸೋಮವಾರ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಿತು.

ಫ್ರೀಡಂ ಪಾರ್ಕ್‌ನಲ್ಲಿ ಬೆಳಗ್ಗೆ 10 ಗಂಟೆಗೆ ಸಮಾವೇಶಗೊಂಡ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ವಿಧಾನಸೌಧ ಚಲೋ ನಡೆಸಿದರು.

ಪ್ರತಿಭಟನೆಯ ಹಿನ್ನೆಲೆಯಲ್ಲಿ ವಿಧಾನಸೌಧ ಹಾಗೂ ವಿಕಾಸಸೌಧದ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು. ಬ್ಯಾರಿಕೇಡ್‌ಗಳನ್ನು ಅಳವಡಿಸಿ ಪ್ರವೇಶ ದ್ವಾರಗಳನ್ನು ಮುಚ್ಚಲಾಗಿತ್ತು. ಕೆಎಸ್‌ಆರ್‌ಪಿ ತುಕಡಿಗಳು ಹಾಗೂ ಪ್ರತಿಭಟನಾಕಾರರನ್ನು ಕರೆದೊಯ್ಯಲು ಬಿಎಂಟಿಸಿ ಬಸ್‌ಗಳನ್ನು ನಿಯೋಜಿಸಲಾಗಿತ್ತು.

ವಿಧಾನಸೌಧದತ್ತ ಮುನ್ನುಗ್ಗಲು ಯತ್ನಿಸಿದ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರನ್ನು ಪೊಲೀಸರು ಮಾರ್ಗಮಧ್ಯದಲ್ಲೇ ತಡೆದರು. ಈ ವೇಳೆ ಕಾರ್ಯಕರ್ತರು ಕಾಂಗ್ರೆಸ್ ಸರ್ಕಾರ ಹಾಗೂ ಸಚಿವರ ವಿರುದ್ಧ ಘೋಷಣೆಗಳನ್ನು ಕೂಗಿದರು. ಬಳಿಕ ಆರ್. ಅಶೋಕ್, ಬಿ.ವೈ. ವಿಜಯೇಂದ್ರ, ಸಿ.ಟಿ. ರವಿ, ಎನ್. ರವಿಕುಮಾರ್ ಸೇರಿದಂತೆ ಪ್ರಮುಖ ಬಿಜೆಪಿ ನಾಯಕರನ್ನು ಪೊಲೀಸರು ವಶಕ್ಕೆ ಪಡೆದರು.

ಈ ಸಂದರ್ಭದಲ್ಲಿ ಮೇಲ್ಮನೆ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮಾತನಾಡಿ, ವಾಲ್ಮೀಕಿ ಸಮುದಾಯಕ್ಕೆ ಸೇರಬೇಕಿದ್ದ ₹187 ಕೋಟಿ ಹಣವನ್ನು ದುರುಪಯೋಗಪಡಿಸಿಕೊಳ್ಳಲಾಗಿದೆ ಎಂದು ಆರೋಪಿಸಿದರು. ಸಚಿವ ನಾಗೇಂದ್ರ ಅವರನ್ನು ಸಂಪುಟದಿಂದ ವಜಾಗೊಳಿಸದಿದ್ದರೆ ಬೀದಿಗಿಳಿದು ಹೋರಾಟ ನಡೆಸುವುದಾಗಿ ಎಚ್ಚರಿಸಿದರು.

ಮಾಜಿ ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ, ಮಾಜಿ ಸಚಿವ ರಾಜೂಗೌಡ ಸೇರಿದಂತೆ ಬಿಜೆಪಿ ನಾಯಕರು ಕೂಡ ಸಚಿವರ ರಾಜೀನಾಮೆಗೆ ಆಗ್ರಹಿಸಿದರು. ದಲಿತರು ಹಾಗೂ ಬಡವರ ಹಣದ ದುರುಪಯೋಗವನ್ನು ಸಹಿಸುವುದಿಲ್ಲ. ನಾಗೇಂದ್ರ ಅವರ ರಾಜೀನಾಮೆ ಪಡೆಯುವವರೆಗೆ ಹೋರಾಟ ಮುಂದುವರಿಯಲಿದೆ ಎಂದು ಹೇಳಿದರು.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮಾತನಾಡಿ, ಸರ್ಕಾರದ ಬೊಕ್ಕಸ ಹಾಗೂ ಬಡವರು, ಶೋಷಿತರು ಮತ್ತು ದಲಿತರ ಹಣದ ದುರುಪಯೋಗದ ಆರೋಪಗಳ ಕುರಿತು ಸಂಪೂರ್ಣ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು. ಸಚಿವರನ್ನು ಸಂಪುಟದಿಂದ ವಜಾಗೊಳಿಸಿ, ಹಗರಣದ ಸಂಪೂರ್ಣ ಸತ್ಯವನ್ನು ಜನರ ಮುಂದಿಡುವವರೆಗೆ ಹೋರಾಟ ಮುಂದುವರಿಸುವುದಾಗಿ ಎಚ್ಚರಿಸಿದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande