ಮಹಾರಾಷ್ಟ್ರದ ಅಮರಾವತಿ ಆಸ್ಪತ್ರೆಯ ಎನ್ಐಸಿಯುನಲ್ಲಿ ಅಗ್ನಿ ಅವಘಡ: ಮೂವರು ನವಜಾತ ಶಿಶುಗಳ ಸಾವು
ಅಮರಾವತಿ, 24 ಆಗಸ್ಟ್ (ಹಿ.ಸ.): ಆ್ಯಂಕರ್:ಮಹಾರಾಷ್ಟ್ರದ ಅಮರಾವತಿ ಜಿಲ್ಲಾ ಮಹಿಳಾ ಆಸ್ಪತ್ರೆಯ ನವಜಾತ ಶಿಶುಗಳ ತೀವ್ರ ನಿಗಾ ಘಟಕದಲ್ಲಿ ಸೋಮವಾರ ಮುಂಜಾನೆ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಮೂವರು ನವಜಾತ ಶಿಶುಗಳು ಮೃತಪಟ್ಟಿದ್ದಾರೆ. ಘಟನೆಯ ವೇಳೆ ಘಟಕದಲ್ಲಿ ಸುಮಾರು 39 ನವಜಾತ ಶಿಶುಗಳಿಗೆ ಚಿಕಿತ್ಸೆ
अमरावती जिला महिला अस्पताल में लगी आग के बाद का दृश्य


ಅಮರಾವತಿ, 24 ಆಗಸ್ಟ್ (ಹಿ.ಸ.):

ಆ್ಯಂಕರ್:ಮಹಾರಾಷ್ಟ್ರದ ಅಮರಾವತಿ ಜಿಲ್ಲಾ ಮಹಿಳಾ ಆಸ್ಪತ್ರೆಯ ನವಜಾತ ಶಿಶುಗಳ ತೀವ್ರ ನಿಗಾ ಘಟಕದಲ್ಲಿ ಸೋಮವಾರ ಮುಂಜಾನೆ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಮೂವರು ನವಜಾತ ಶಿಶುಗಳು ಮೃತಪಟ್ಟಿದ್ದಾರೆ. ಘಟನೆಯ ವೇಳೆ ಘಟಕದಲ್ಲಿ ಸುಮಾರು 39 ನವಜಾತ ಶಿಶುಗಳಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆರು ಮಕ್ಕಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

ಆಸ್ಪತ್ರೆಯ ಮೂರನೇ ಮಹಡಿಯಲ್ಲಿರುವ ವಿಶೇಷ ನವಜಾತ ಆರೈಕೆ ಘಟಕದಲ್ಲಿ ಮುಂಜಾನೆ ಸುಮಾರು 3.30ಕ್ಕೆ ಬೆಂಕಿ ಕಾಣಿಸಿಕೊಂಡಿದೆ. ಪ್ರಾಥಮಿಕ ಮಾಹಿತಿಯಂತೆ, ವೆಂಟಿಲೇಟರ್‌ನಲ್ಲಿ ಏಕಾಏಕಿ ಸ್ಫೋಟ ಸಂಭವಿಸಿದ ಬಳಿಕ ಬೆಂಕಿ ಹೊತ್ತಿಕೊಂಡು ಘಟಕದಾದ್ಯಂತ ಹೊಗೆ ಆವರಿಸಿದೆ.

ಬೆಂಕಿ ಕಾಣಿಸಿಕೊಂಡ ಕೂಡಲೇ ಕರ್ತವ್ಯದಲ್ಲಿದ್ದ ವೈದ್ಯರು, ನರ್ಸ್‌ಗಳು ಹಾಗೂ ಆಸ್ಪತ್ರೆಯ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ನಡೆಸಿ ಹಲವು ಶಿಶುಗಳನ್ನು ಸುರಕ್ಷಿತವಾಗಿ ಹೊರಗೆ ಸ್ಥಳಾಂತರಿಸಿದರು. ಆದರೆ ಮೂವರು ನವಜಾತ ಶಿಶುಗಳನ್ನು ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ.

ಅಗ್ನಿ ಅವಘಡಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ವೆಂಟಿಲೇಟರ್ ಸ್ಫೋಟಕ್ಕೆ ಕಾರಣವೇನು ಹಾಗೂ ಆಸ್ಪತ್ರೆಯಲ್ಲಿ ಅಗ್ನಿ ಸುರಕ್ಷತಾ ಮತ್ತು ವೈದ್ಯಕೀಯ ಉಪಕರಣಗಳ ಸುರಕ್ಷತಾ ಮಾನದಂಡಗಳನ್ನು ಪಾಲಿಸಲಾಗುತ್ತಿತ್ತೇ ಎಂಬ ಬಗ್ಗೆ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ.

ಇದೇ ವೇಳೆ, ಈ ಘಟನೆಗೆ ಎರಡು ದಿನಗಳ ಮೊದಲು ಮಧ್ಯಪ್ರದೇಶದ ಛಿಂದ್ವಾರಾ ಜಿಲ್ಲಾ ಆಸ್ಪತ್ರೆಯ ನವಜಾತ ಶಿಶುಗಳ ತೀವ್ರ ನಿಗಾ ಘಟಕದಲ್ಲೂ ಬೆಂಕಿ ಕಾಣಿಸಿಕೊಂಡಿತ್ತು. ವಾರ್ಮರ್ ಯಂತ್ರದ ಫಿಲಮೆಂಟ್‌ನಿಂದ ಉಂಟಾದ ಕಿಡಿಯಿಂದ ಬೆಂಕಿ ಹೊತ್ತಿಕೊಂಡಿದ್ದು, ಮೂವರು ನವಜಾತ ಶಿಶುಗಳು ಗಾಯಗೊಂಡಿದ್ದರು. ಬಳಿಕ ಅವರನ್ನು ಜಬಲ್‌ಪುರಕ್ಕೆ ಸ್ಥಳಾಂತರಿಸಲಾಗಿತ್ತು. ಚಿಕಿತ್ಸೆ ವೇಳೆ ಗಂಭೀರ ಸ್ಥಿತಿಯಲ್ಲಿದ್ದ ಒಂದು ಮಗು ಮೃತಪಟ್ಟಿತ್ತು.

-------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande