ಕುರೇಕುಪ್ಪ : ವಿಶೇಷ ಚೇತನರ ಸಹಾಯಧನಕ್ಕೆ ಅರ್ಜಿ ಆಹ್ವಾನ
ಬಳ್ಳಾರಿ, 25 ಆಗಸ್ಟ್ (ಹಿ.ಸ.): ಆ್ಯಂಕರ್ : ಕುರೇಕುಪ್ಪ ಪುರಸಭೆ ವ್ಯಾಪ್ತಿಯಲ್ಲಿ 2019-20, 2023-24 ಹಾಗೂ 2024-25ನೇ ಸಾಲಿನ ಎಸ್ಎಫ್ಸಿ ಶೇ. 5ರ ಯೋಜನೆಯಡಿ ಅರ್ಹ ವಿಶೇಷ ಚೇತನ ಫಲಾನುಭವಿಗಳಿಗೆ ಅಗತ್ಯ ಸಾಧನ ಸಲಕರಣೆಗಳು ಹಾಗೂ ಯಂತ್ರಚಾಲಿತ ತ್ರಿಚಕ್ರ ವಾಹನ ಪಡೆಯಲು ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸ
ಕುರೇಕುಪ್ಪ : ವಿಶೇಷ ಚೇತನರ ಸಹಾಯಧನಕ್ಕೆ ಅರ್ಜಿ ಆಹ್ವಾನ


ಬಳ್ಳಾರಿ, 25 ಆಗಸ್ಟ್ (ಹಿ.ಸ.):

ಆ್ಯಂಕರ್ : ಕುರೇಕುಪ್ಪ ಪುರಸಭೆ ವ್ಯಾಪ್ತಿಯಲ್ಲಿ 2019-20, 2023-24 ಹಾಗೂ 2024-25ನೇ ಸಾಲಿನ ಎಸ್ಎಫ್ಸಿ ಶೇ. 5ರ ಯೋಜನೆಯಡಿ ಅರ್ಹ ವಿಶೇಷ ಚೇತನ ಫಲಾನುಭವಿಗಳಿಗೆ ಅಗತ್ಯ ಸಾಧನ ಸಲಕರಣೆಗಳು ಹಾಗೂ ಯಂತ್ರಚಾಲಿತ ತ್ರಿಚಕ್ರ ವಾಹನ ಪಡೆಯಲು ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಪುರಸಭೆ ಮುಖ್ಯಾಧಿಕಾರಿಗಳು ತಿಳಿಸಿದ್ದಾರೆ.

ಅರ್ಹ ವಿಶೇಷ ಚೇತನರು ಸೆಪ್ಟೆಂಬರ್ 16 ರೊಳಗಾಗಿ ಭರ್ತಿ ಮಾಡಿದ ಅರ್ಜಿಗಳನ್ನು ಕುರೇಕುಪ್ಪ ಪುರಸಭೆ ಕಚೇರಿಗೆ ಸಲ್ಲಿಸಬೇಕು. ನಿಗದಿತ ದಿನಾಂಕದ ನಂತರ ಬರುವ ಅರ್ಜಿಗಳನ್ನು ಯಾವುದೇ ಕಾರಣಕ್ಕೂ ಸ್ವೀಕರಿಸಲಾಗುವುದಿಲ್ಲ ಎಂದು ಹೇಳಿದ್ದಾರೆ.

ಅರ್ಜಿಯೊಂದಿಗೆ ಸಲ್ಲಿಸಬೇಕಾದ ಅಗತ್ಯ ದಾಖಲೆಗಳು:

ಆಧಾರ್ ಕಾರ್ಡ್ ಪ್ರತಿ, ಮತದಾರರ ಗುರುತಿನ ಚೀಟಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಇತ್ತೀಚಿನ ಭಾವಚಿತ್ರ (ಪಾಸ್ ಪೋರ್ಟ್ ಅಳತೆ), ಯುಡಿಐಡಿ ಕಾರ್ಡ್, ಪಡಿತರ ಚೀಟಿ (ರೇಷನ್ ಕಾರ್ಡ್) ಪ್ರತಿ, ಯಂತ್ರಚಾಲಿತ ವಾಹನಕ್ಕೆ ಬಳ್ಳಾರಿ ಆರ್ಟಿಒ ಅವರಿಂದ ಪಡೆದ ಎಲ್ಎಲ್ಆರ್ ಪ್ರತಿ.

ಹೆಚ್ಚಿನ ಮಾಹಿತಿಗಾಗಿ ದೂ.08395-295601, ಕುರೇಕುಪ್ಪ ಪುರಸಭೆ ಕಚೇರಿಯ ನೋಟಿಸ್ ಬೋರ್ಡ್ ಅಥವಾ ಕಚೇರಿ ಕೆಲಸದ ವೇಳೆಯಲ್ಲಿ ಸಂಬಂಧಪಟ್ಟ ಅಧಿಕಾರಿಗಳನ್ನು ಖುದ್ದಾಗಿ ಸಂಪರ್ಕಿಸಬಹುದು.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande