

ಬಳ್ಳಾರಿ, 25 ಆಗಸ್ಟ್ (ಹಿ.ಸ.)
ಆ್ಯಂಕರ್ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ಆಗಸ್ಟ್ 28 ರಂದು ಮಧ್ಯಾಹ್ನ 12 ಗಂಟೆಗೆ ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಅವರು ತಿಳಿಸಿದ್ದಾರೆ.
ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ ಅವರು ಕಾರ್ಯಕ್ರಮ ಉದ್ಘಾಟಿಸುವರು. ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಸಂಸದರಾದ ಈ.ತುಕಾರಾಮ್, ಕೆ.ರಾಜಶೇಖರ ಬಸವರಾಜ ಹಿಟ್ನಾಳ್, ರಾಜ್ಯಸಭೆ ಸದಸ್ಯ ಡಾ.ಸೈಯದ್ ನಾಸೀರ್ ಹುಸೇನ್, ರಾಜ್ಯ ಸಹಕಾರ ಕೈಮಗ್ಗ ನೇಕಾರರ ಮಹಾಮಂಡಳಿ ನಿಯಮಿತ (ಕಾವೇರಿ ಹ್ಯಾಂಡ್ ಲ್ಯೂಮ್ಸ್)ದ ಅಧ್ಯಕ್ಷರು ಹಾಗೂ ಕಂಪ್ಲಿ ಶಾಸಕ ಜೆ.ಎನ್.ಗಣೇಶ್, ಡಾ.ಬಾಬು ಜಗಜೀವನ್ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ, ಸಿರುಗುಪ್ಪ ಶಾಸಕ ಬಿ.ಎಂ.ನಾಗರಾಜ, ಸಂಡೂರು ಶಾಸಕರಾದ ಈ.ಅನ್ನಪೂರ್ಣ, ವಿಧಾನ ಪರಿಷತ್ ಶಾಸಕರಾದ ಡಾ.ಚಂದ್ರಶೇಖರ ಬಿ.ಪಾಟೀಲ್, ಶಶೀಲ್ ಜಿ.ನಮೋಶಿ, ವೈ.ಎಂ.ಸತೀಶ್, ಮಹಾನಗರ ಪಾಲಿಕೆಯ ಮಹಾಪೌರರಾದ ಪಿ.ಗಾದೆಪ್ಪ, ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜೆ.ಎಸ್.ಆಂಜನೇಯಲು, ಕರ್ನಾಟಕ ಸ್ಟೇಟ್ ಮಿನರಲ್ಸ್ ಕಾರ್ಪೋರೇಷನ್ ಲಿಮಿಟೆಡ್ ನ ಉಪಾಧ್ಯಕ್ಷ ಹೆಚ್.ಲಕ್ಷ್ಮಣ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ ಹಾಗೂ ವಿಶೇಷ ಆಹ್ವಾನಿತರಾಗಿ ಜಿಲ್ಲಾ ಆರ್ಯ ಈಡಿಗ ಗೌನ ಮಹಾಜನ ಸಂಘದ ಜಿಲ್ಲಾಧ್ಯಕ್ಷ ಆರ್. ಶ್ರೀನಾಥ್ ಸೇರಿದಂತೆ ಇನ್ನಿತರೆ ಗಣ್ಯರು ಪಾಲ್ಗೊಳ್ಳುವರು.
ಕಾರ್ಯಕ್ರಮದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ.ನಿಷ್ಠಿ ರುದ್ರಪ್ಪ ಅವರು ವಿಶೇಷ ಉಪನ್ಯಾಸ ನೀಡುವರು. ಸಂಡೂರಿನ ರಕುಮಾ .ಎಲ್ ಅವರು ಭಕ್ತಿ ಸಂಗೀತ ಪ್ರಸ್ತುತಪಡಿಸುವರು.
ಜಯಂತಿ ಅಂಗವಾಗಿ ಅಂದು ಬೆಳಿಗ್ಗೆ 09.30 ಗಂಟೆಗೆ ಮೆರವಣಿಗೆ ಏರ್ಪಡಿಸಲಾಗಿದ್ದು, ಮೆರವಣಿಗೆಯು ನಗರದ ಈಡಿಗ ಹಾಸ್ಟೆಲ್ ಆವರಣದಿಂದ ಆರಂಭವಾಗಿ ಗಡಿಗಿ ಚೆನ್ನಪ್ಪ ವೃತ್ತ, ಹಳೆಯ ಜಿಲ್ಲಾಧಿಕಾರಿಗಳ ಕಾರ್ಯಾಲಯ ರಸ್ತೆ, ಹೆಚ್.ಆರ್. ಗವಿಯಪ್ಪ ವೃತ್ತದ ಮೂಲಕ ಡಾ.ಜೋಳದ ರಾಶಿ ದೊಡ್ಡನಗೌಡ ರಂಗಮಂದಿರದವರೆಗೆ ನಡೆಯಲಿದೆ.
ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್ ಕೆ., ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಡಿ.ಪೆನ್ನೇಕರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್.ಎನ್, ಮಹಾನಗರ ಪಾಲಿಕೆಯ ಆಯುಕ್ತ ಮಂಜುನಾಥ್ ಪಿ.ಎಸ್ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ಜಿಲ್ಲೆಯ ಎಲ್ಲಾ ಚುನಾಯಿತ ಪ್ರತಿನಿಧಿಗಳು, ಸಮುದಾಯದ ಮುಖಂಡರು ಹಾಗೂ ಸಾರ್ವಜನಿಕರು ಉಪಸ್ಥಿತರಿರುವರು.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್