ನಾಳೆ ಟಾಕ್ಸಿಕ್ ಚಿತ್ರ ಬಿಡುಗಡೆ: ಯಶಸ್ಸಿಗಾಗಿ ಧರ್ಮಸ್ಥಳದಲ್ಲಿ ನಟ ಯಶ್ ವಿಶೇಷ ಪೂಜೆ
ಇಂದು ಯಶ್ ಟೆಂಪಲ್ ರನ್
ಧರ್ಮಸ್ಥಳದಲ್ಲಿ ನಟ ಯಶ


ಬೆಂಗಳೂರು, 25 ಆಗಸ್ಟ್ (ಹಿ.ಸ.):

ಆ್ಯಂಕರ್:

ಭಾರತೀಯ ಚಿತ್ರರಂಗದ ಬಹುನಿರೀಕ್ಷಿತ ಸಿನಿಮಾ ‘ಟಾಕ್ಸಿಕ್’ ಆ.26ರಂದು ವಿಶ್ವದಾದ್ಯಂತ ಬಿಡುಗಡೆಯಾಗಲಿದ್ದು, ಚಿತ್ರದ ಯಶಸ್ಸಿಗಾಗಿ ನಟ ‘ರಾಕಿಭಾಯ್’ ಯಶ್ ಅವರು ಮಂಗಳವಾರ ಧರ್ಮಸ್ಥಳ ಶ್ರೀಕ್ಷೇತ್ರಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

ಚೆನ್ನೈನಿಂದ ವಿಶೇಷ ವಿಮಾನದ ಮೂಲಕ ಮಂಗಳೂರಿಗೆ ಆಗಮಿಸಿದ ಯಶ್, ಬಳಿಕ ಧರ್ಮಸ್ಥಳಕ್ಕೆ ತೆರಳಿದರು. ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಅವರು, ಗರ್ಭಗುಡಿಯ ಸಮೀಪ ಸುಮಾರು 10 ನಿಮಿಷಗಳ ಕಾಲ ಭಕ್ತಿಭಾವದಿಂದ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಮಹಾ ಮಂಗಳಾರತಿಯನ್ನೂ ಸ್ವೀಕರಿಸಿದರು.

ಧರ್ಮಸ್ಥಳದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ ಪ್ರತಿ ಚಿತ್ರ ಬಿಡುಗಡೆಗೂ ಮುನ್ನ ಧರ್ಮಸ್ಥಳಕ್ಕೆ ಭೇಟಿ ನೀಡುವುದು ನನ್ನ ರೂಢಿಯಾಗಿದ್ದು, ಈ ಸಂಪ್ರದಾಯವನ್ನು ‘ಟಾಕ್ಸಿಕ್’ ಚಿತ್ರದ ಬಿಡುಗಡೆ ಸಂದರ್ಭದಲ್ಲೂ ಮುಂದುವರೆಸಿರುವುದಾಗಿ ಯಶ ಹೇಳಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande