
ಬೆಂಗಳೂರು, 26 ಆಗಸ್ಟ್ (ಹಿ.ಸ.):
ಆ್ಯಂಕರ್:ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹು ನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾ ಇಂದು ಜಗತ್ತಿನಾದ್ಯಂತ ತೆರೆಕಂಡಿದ್ದು, ಅಭಿಮಾನಿಗಳ ಸಂಭ್ರಮ ಮುಗಿಲುಮುಟ್ಟಿದೆ. ಸುಮಾರು ನಾಲ್ಕೂವರೆ ವರ್ಷಗಳ ಬಳಿಕ ಯಶ್ ಬೆಳ್ಳಿತೆರೆಗೆ ಮರಳಿರುವ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಚಿತ್ರಮಂದಿರಗಳ ಮುಂದೆ ಅಭಿಮಾನಿಗಳ ಅಬ್ಬರ ಜೋರಾಗಿದೆ.
ದೇಶಾದ್ಯಂತ ಸಾವಿರಾರು ಚಿತ್ರಮಂದಿರಗಳಲ್ಲಿ ಚಿತ್ರ ಬಿಡುಗಡೆಯಾಗಿದ್ದು, ಕರ್ನಾಟಕದಲ್ಲಿ 500ಕ್ಕೂ ಹೆಚ್ಚು ಪರದೆಗಳಲ್ಲಿ ಪ್ರದರ್ಶನ ಆರಂಭವಾಗಿದೆ. ಮೊದಲ ಪ್ರದರ್ಶನ ವೀಕ್ಷಿಸಲು ಅಭಿಮಾನಿಗಳು ಮುಂಜಾನೆಯಿಂದಲೇ ಚಿತ್ರಮಂದಿರಗಳತ್ತ ಹರಿದುಬಂದರು.
ಬೆಂಗಳೂರಿನ ಮಾಗಡಿ ರಸ್ತೆಯ ಪ್ರಸನ್ನ ಚಿತ್ರಮಂದಿರದಲ್ಲಿ ಬೆಳಗ್ಗೆ 5.45ಕ್ಕೆ ಮೊದಲ ಪ್ರದರ್ಶನ ಆರಂಭವಾಗಿದ್ದು, ಒಟ್ಟು ಆರು ಪ್ರದರ್ಶನಗಳ ವ್ಯವಸ್ಥೆ ಮಾಡಲಾಗಿದೆ. ಎಲ್ಲ ಪ್ರದರ್ಶನಗಳ ಟಿಕೆಟ್ಗಳು ಈಗಾಗಲೇ ಮಾರಾಟವಾಗಿವೆ.
ಮೆಜೆಸ್ಟಿಕ್ನ ಸಂತೋಷ್ ಚಿತ್ರಮಂದಿರದ ಬಳಿಯೂ ಅಭಿಮಾನಿಗಳು ಡೊಳ್ಳು ಬಾರಿಸಿ, ಪಟಾಕಿ ಸಿಡಿಸಿ, ಕುಣಿದು ಕುಪ್ಪಳಿಸಿ ಸಂಭ್ರಮಿಸಿದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.