
ನವದೆಹಲಿ, 26 ಆಗಸ್ಟ್ (ಹಿ.ಸ.):
ಆ್ಯಂಕರ್:ನೇಪಾಳದಲ್ಲಿ ಪ್ರವಾಹದಿಂದ ಸಂಭವಿಸಿರುವ ಜನಹಾನಿಗೆ ಪ್ರಧಾನಿ ನರೇಂದ್ರ ಮೋದಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಬುಧವಾರ ನೇಪಾಳ ಪ್ರಧಾನಿ ಬಾಳೇಂದ್ರ ಶಾ ಅವರೊಂದಿಗೆ ದೂರವಾಣಿ ಮೂಲಕ ಮಾತುಕತೆ ನಡೆಸಿದ ಮೋದಿ, ಸಂಕಷ್ಟದ ಸಂದರ್ಭದಲ್ಲಿ ನೇಪಾಳದ ಜನರೊಂದಿಗೆ ಭಾರತ ದೃಢವಾಗಿ ನಿಂತಿದೆ ಎಂದು ಭರವಸೆ ನೀಡಿದರು.
ಪ್ರವಾಹದಿಂದ ಸಂಭವಿಸಿರುವ ಜೀವಹಾನಿಗೆ ಪ್ರಧಾನಿ ಮೋದಿ ಅವರು ಸಂತಾಪ ಸೂಚಿಸಿದ್ದು, ಈ ಕಠಿಣ ಸಂದರ್ಭದಲ್ಲಿ ನೇಪಾಳಕ್ಕೆ ಸಾಧ್ಯವಿರುವ ಎಲ್ಲ ಮಾನವೀಯ ಹಾಗೂ ಪರಿಹಾರ ನೆರವು ನೀಡಲು ಭಾರತ ಸಿದ್ಧವಿದೆ ಎಂದು ತಿಳಿಸಿದ್ದಾರೆ.
ರಕ್ಷಣಾ ಹಾಗೂ ಪರಿಹಾರ ಕಾರ್ಯಗಳಲ್ಲಿ ನೇಪಾಳದ ಸಂಬಂಧಿತ ಅಧಿಕಾರಿಗಳೊಂದಿಗೆ ಭಾರತೀಯ ತಂಡಗಳು ಸಮನ್ವಯದಿಂದ ಕಾರ್ಯನಿರ್ವಹಿಸುತ್ತಿವೆ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ. ನೇಪಾಳದ ಜನರಿಗೆ ಅಗತ್ಯವಿರುವ ಎಲ್ಲ ನೆರವು ಒದಗಿಸಲು ಭಾರತ ಬದ್ಧವಾಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
--------
ಹಿಂದೂಸ್ತಾನ್ ಸಮಾಚಾರ್ / Rakesh.M.B.