
ಕುರುಗೋಡು, 27 ಆಗಸ್ಟ್ (ಹಿ.ಸ.):
ಆ್ಯಂಕರ್ : ಕೃಷಿ ಇಲಾಖೆಯ ವತಿಯಿಂದ 2026-27ನೇ ಸಾಲಿನ ‘ಆತ್ಮ’ ಯೋಜನೆಯಡಿ ನೀಡಲಾಗುವ ‘ಆತ್ಮ ಶ್ರೇಷ್ಠ ಕೃಷಿಕ ಪ್ರಶಸ್ತಿ’ಗಾಗಿ ಬಳ್ಳಾರಿ ಹಾಗೂ ಕುರುಗೋಡು ತಾಲೂಕಿನ ಅರ್ಹ ರೈತರು ಮತ್ತು ರೈತ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಬಳ್ಳಾರಿಯ ಸಹಾಯಕ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.
ಕೃಷಿ ಕ್ಷೇತ್ರದಲ್ಲಿ ವಿನೂತನ ಪದ್ಧತಿ ಹಾಗೂ ಸಾಧನೆಗೈದ ರೈತರನ್ನು ಪ್ರೋತ್ಸಾಹಿಸಲು ಈ ಪ್ರಶಸ್ತಿಯನ್ನು ತಾಲೂಕು, ಜಿಲ್ಲಾ ಹಾಗೂ ರಾಜ್ಯ ಮಟ್ಟದಲ್ಲಿ ನೀಡಲಾಗುತ್ತದೆ.
ಆಸಕ್ತ ಪ್ರಗತಿಪರ ರೈತರು ಹಾಗೂ ರೈತ ಮಹಿಳೆಯರು ತಮ್ಮ ವ್ಯಾಪ್ತಿಯ ಹೋಬಳಿಯ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಿಂದ ನಿಗದಿತ ಅರ್ಜಿ ನಮೂನೆಯನ್ನು ಪಡೆದುಕೊಂಡು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಸೆಪ್ಟೆಂಬರ್ 30 ರ ಒಳಗಾಗಿ ಸಲ್ಲಿಸಬೇಕಾಗಿದೆ.
ಹೆಚ್ಚಿನ ವಿವರ ಮತ್ತು ಮಾಹಿತಿಗಾಗಿ ಸಮೀಪದ ಹೋಬಳಿ ರೈತ ಸಂಪರ್ಕ ಕೇಂದ್ರ ಅಥವಾ ಬಳ್ಳಾರಿಯ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸುವಂತೆ ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್