ಸೆ.4ರಿಂದ ರಾಯಚೂರಿನಲ್ಲಿ ದಸರಾ ಕ್ರೀಡಾಕೂಟ
ರಾಯಚೂರು, 27 ಆಗಸ್ಟ್ (ಹಿ.ಸ.): ಆ್ಯಂಕರ್:ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಗಳ ಸಹಯೋಗದಲ್ಲಿ 2026-27ನೇ ಸಾಲಿನ ದಸರಾ ಕ್ರೀಡಾಕೂಟದ ತಾಲೂಕು ಹಾಗೂ ಜಿಲ್ಲಾ ಮಟ್ಟದ ಆಯ್ಕೆ ಪ್ರಕ್ರಿಯೆ ಸೆಪ್ಟೆಂಬರ್ 4ರಿಂದ ಆರಂಭವಾಗಲಿದ
ಸೆ.4ರಿಂದ ರಾಯಚೂರಿನಲ್ಲಿ ದಸರಾ ಕ್ರೀಡಾಕೂಟ


ರಾಯಚೂರು, 27 ಆಗಸ್ಟ್ (ಹಿ.ಸ.):

ಆ್ಯಂಕರ್:ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಗಳ ಸಹಯೋಗದಲ್ಲಿ 2026-27ನೇ ಸಾಲಿನ ದಸರಾ ಕ್ರೀಡಾಕೂಟದ ತಾಲೂಕು ಹಾಗೂ ಜಿಲ್ಲಾ ಮಟ್ಟದ ಆಯ್ಕೆ ಪ್ರಕ್ರಿಯೆ ಸೆಪ್ಟೆಂಬರ್ 4ರಿಂದ ಆರಂಭವಾಗಲಿದೆ.

ಮಾನವಿ ತಾಲೂಕಿನಲ್ಲಿ ಸೆ.4ರಂದು, ಸಿರವಾರದಲ್ಲಿ ಸೆ.6ರಂದು, ರಾಯಚೂರು, ದೇವದುರ್ಗ ಹಾಗೂ ಲಿಂಗಸುಗೂರಿನಲ್ಲಿ ಸೆ.7ರಂದು, ಮಸ್ಕಿಯಲ್ಲಿ ಸೆ.11ರಂದು ಹಾಗೂ ಸಿಂಧನೂರಿನಲ್ಲಿ ಸೆ.12ರಂದು ತಾಲೂಕು ಮಟ್ಟದ ಕ್ರೀಡಾಕೂಟ ನಡೆಯಲಿದೆ. ಜಿಲ್ಲಾ ಮಟ್ಟದ ದಸರಾ ಸಿಎಂ ಕಪ್ ಕ್ರೀಡಾಕೂಟ ಸೆ.18ರಂದು ರಾಯಚೂರಿನ ಮಹಾತ್ಮಗಾಂಧಿ ಜಿಲ್ಲಾ ಹೊರಾಂಗಣ ಕ್ರೀಡಾಂಗಣದಲ್ಲಿ ನಡೆಯಲಿದೆ.

ಆಸಕ್ತ ಕ್ರೀಡಾಪಟುಗಳು ಆ.28ರಿಂದ ಸೆ.5ರೊಳಗೆ ನಿಗದಿತ ಆನ್‌ಲೈನ್ ಮೂಲಕ ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳಬೇಕು. ಆಫ್‌ಲೈನ್ ನೋಂದಣಿಗೆ ಅವಕಾಶವಿರುವುದಿಲ್ಲ. ನೋಂದಣಿ ಮಾಡಿಕೊಳ್ಳದವರಿಗೆ ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶವಿಲ್ಲ ಎಂದು ಇಲಾಖೆ ತಿಳಿಸಿದೆ.

ತಾಲೂಕು ಮಟ್ಟದ ವೈಯಕ್ತಿಕ ಸ್ಪರ್ಧೆಯಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದವರು ಮತ್ತು ಗುಂಪು ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದವರು ಜಿಲ್ಲಾ ಮಟ್ಟದಲ್ಲಿ ಭಾಗವಹಿಸಲು ಅರ್ಹರಾಗಿರುತ್ತಾರೆ. ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸುವವರು ಆನ್‌ಲೈನ್ ನೋಂದಣಿ ಪ್ರತಿಯೊಂದಿಗೆ ಆಧಾರ್ ಕಾರ್ಡ್ ಹಾಗೂ ಬ್ಯಾಂಕ್ ಖಾತೆ ವಿವರಗಳನ್ನು ಸಲ್ಲಿಸಬೇಕು.

ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸುವವರಿಗೆ ಯಾವುದೇ ಪ್ರಯಾಣ ಹಾಗೂ ದಿನಭತ್ಯೆ ನೀಡಲಾಗುವುದಿಲ್ಲ. ಜಿಲ್ಲಾ ಮಟ್ಟದಲ್ಲಿ ಭಾಗವಹಿಸುವ ಪುರುಷ ಕ್ರೀಡಾಪಟುಗಳಿಗೆ ಪ್ರಯಾಣ ಮತ್ತು ದಿನಭತ್ಯೆ ಹಾಗೂ ಮಹಿಳಾ ಕ್ರೀಡಾಪಟುಗಳಿಗೆ ದಿನಭತ್ಯೆ ಬ್ಯಾಂಕ್ ಖಾತೆಗೆ ನೇರವಾಗಿ ಜಮೆ ಮಾಡಲಾಗುವುದು. ಸರ್ಕಾರದ ಶಕ್ತಿ ಯೋಜನೆ ಜಾರಿಯಲ್ಲಿರುವುದರಿಂದ ಮಹಿಳಾ ಕ್ರೀಡಾಪಟುಗಳಿಗೆ ಪ್ರಯಾಣಭತ್ಯೆ ಇರುವುದಿಲ್ಲ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande