ಆ.೨೯ ರಿಂದ ರಾಘವೇಂದ್ರ ಸ್ವಾಮಿಗಳ ಆರಾಧನಾ ಕಾರ್ಯಕ್ರಮಗಳು
ಆ.೨೯ ರಿಂದ ರಾಘವೇಂದ್ರ ಸ್ವಾಮಿಗಳ ಆರಾಧನಾ ಕಾರ್ಯಕ್ರಮಗಳು
ಆ.೨೯ ರಿಂದ ರಾಘವೇಂದ್ರ ಸ್ವಾಮಿಗಳ ಆರಾಧನಾ ಕಾರ್ಯಕ್ರಮಗಳು


ಕೋಲಾರ, ಆಗಸ್ಟ್ ೨೭ (ಹಿ.ಸ):

ಆ್ಯಂಕರ್ : ನಗರದ ಬ್ರಾಹ್ಮಣರ ಬೀದಿಯಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿಗಳವರ ಮಠದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಕೂಡಾ ಆ. ೨೯ ರಿಂದ ೩೧ ರವರೆಗೂ ಮೂರು ದಿನಗಳ ಕಾಲ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ೩೫೫ ನೇ ವರ್ಷದ ಆರಾಧನಾ ಪಂಚರಾತ್ರೋತ್ಸವ ನಡೆಯಲಿವೆ ಎಂದು ಮಠದ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.

ರಾಘವೇಂದ್ರ ಸ್ವಾಮಿಗಳು ಸಶರೀರ ಬೃಂದಾವನಸ್ಥರಾದ ದಿನವನ್ನು ಪ್ರತಿ ವರ್ಷ ಆರಾಧನೆಯನ್ನಾಗಿ ಆಚರಿಸಲಾಗುತ್ತದೆ. ೧೬೭೧ ರಲ್ಲಿ ಶ್ರಾವಣ ಕೃಷ್ಣ ಪಕ್ಷದ ದ್ವಿತೀಯ ದಿನದಂದು ರಾಘವೇಂದ್ರ ಸ್ವಾಮಿಗಳು ಸಶರೀರ ಬೃಂದಾವನಸ್ಥರಾದರು. ಅಂದಿನಿಂದ ಪ್ರತಿ ವರ್ಷ ಆ ದಿನವನ್ನು ರಾಘವೇಂದ್ರ ಸ್ವಾಮಿಗಳ ಆರಾಧನೆಯನ್ನಾಗಿ ಆಚರಿಸಲಾಗುತ್ತಿದೆ. ಈ ಬಾರಿ ಕೂಡಾ ಮೂಲ ಬೃಂದಾವನವಿರುವ ಮಂತ್ರಾಲಯ, ಕೋಲಾರ ಸೇರಿದಂತೆ ಎಲ್ಲಾ ರಾಯರ ಮಠದಲ್ಲಿ ಈ ಆರಾಧನೆಯನ್ನು ಶ್ರದ್ಧಾ ಭಕ್ತಿಗಳಿಂದ ಆಚರಿಸಲಾಗುತ್ತಿದೆ.

ಕೋಲಾರದಲ್ಲಿ ಈ ಕಾರ್ಯಕ್ರಮ ಶ್ರದ್ಧಾಭಕ್ತಿಗಳಿಂದ ನಡೆಯಲಿದೆ. ಈ ಮೂರು ದಿವಸಗಳ ಕಾಲ ಭಕ್ತರು ಶ್ರೀಮಠಕ್ಕೆ ಆಗಮಿಸಿ ಆರಾಧನಾ ಮಹೋತ್ಸವದಲ್ಲಿ ಭಾಗವಹಿಸಿ ಶ್ರೀ ಗುರುರಾಜರ ಅನುಗ್ರಹಕ್ಕೆ ಪಾತ್ರರಾಗಬೇಕೆಂದು ಮಠದ ಆಡಳಿತ ಮಂಡಳಿ ಪದಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್


 rajesh pande