ಮ್ಯಾಮ್ಕೋಸ್ ವಾರ್ಷಿಕ ಮಹಾಸಭೆಗೆ ಬಸ್ ವ್ಯವಸ್ಥೆ
ಶಿವಮೊಗ್ಗ, 28 ಆಗಸ್ಟ್ (ಹಿ.ಸ.): ಆ್ಯಂಕರ್: ಶಿವಮೊಗ್ಗ ಮಲೆನಾಡು ಅಡಿಕೆ ಮಾರಾಟದ ಸಹಕಾರ ಸಂಘದ ವಾರ್ಷಿಕ ಮಹಾಸಭೆ ಆ.30ರಂದು ಬೆಳಗ್ಗೆ 11 ಗಂಟೆಗೆ ಸಾಗರ ರಸ್ತೆಯಲ್ಲಿರುವ ಪೆಸಿಟ್ ಕಾಲೇಜು ಆವರಣದಲ್ಲಿ ನಡೆಯಲಿದೆ. ಮಹಾಸಭೆಗೆ ಆಗಮಿಸುವ ಸದಸ್ಯರ ಅನುಕೂಲಕ್ಕಾಗಿ ಶಿವಮೊಗ್ಗದ ಖಾಸಗಿ ಬಸ್ ನಿಲ್ದಾಣದ ಸಮೀಪದ
ಮ್ಯಾಮ್ಕೋಸ್ ವಾರ್ಷಿಕ ಮಹಾಸಭೆಗೆ ಬಸ್ ವ್ಯವಸ್ಥೆ


ಶಿವಮೊಗ್ಗ, 28 ಆಗಸ್ಟ್ (ಹಿ.ಸ.):

ಆ್ಯಂಕರ್:

ಶಿವಮೊಗ್ಗ ಮಲೆನಾಡು ಅಡಿಕೆ ಮಾರಾಟದ ಸಹಕಾರ ಸಂಘದ ವಾರ್ಷಿಕ ಮಹಾಸಭೆ ಆ.30ರಂದು ಬೆಳಗ್ಗೆ 11 ಗಂಟೆಗೆ ಸಾಗರ ರಸ್ತೆಯಲ್ಲಿರುವ ಪೆಸಿಟ್ ಕಾಲೇಜು ಆವರಣದಲ್ಲಿ ನಡೆಯಲಿದೆ.

ಮಹಾಸಭೆಗೆ ಆಗಮಿಸುವ ಸದಸ್ಯರ ಅನುಕೂಲಕ್ಕಾಗಿ ಶಿವಮೊಗ್ಗದ ಖಾಸಗಿ ಬಸ್ ನಿಲ್ದಾಣದ ಸಮೀಪದ ಲಕ್ಷ್ಮಿ ಮೆಡಿಕಲ್ಸ್ ಎದುರಿನ ಬಸ್ ನಿಲ್ದಾಣದಿಂದ ಬೆಳಗ್ಗೆ 8.30ರಿಂದ ಹಾಗೂ ರೈಲು ನಿಲ್ದಾಣದಿಂದ ಬೆಳಗ್ಗೆ 9.15ಕ್ಕೆ ಪೆಸಿಟ್ ಕಾಲೇಜುವರೆಗೆ ಬಸ್ ವ್ಯವಸ್ಥೆ ಮಾಡಲಾಗಿದೆ.

ಸದಸ್ಯರು ಈ ಸಾರಿಗೆ ವ್ಯವಸ್ಥೆಯ ಸದುಪಯೋಗ ಪಡೆದುಕೊಳ್ಳುವಂತೆ ಸಂಘದ ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande