ಜನಾಕ್ರೋಶದ ಮುಂದೆ ಕಾಂಗ್ರೆಸ್ ಸರ್ಕಾರ ಮಂಡಿಯೂರಿದೆ: ಆರ್. ಅಶೋಕ
ಬೆಂಗಳೂರು, 28 ಆಗಸ್ಟ್ (ಹಿ.ಸ.): ಆ್ಯಂಕರ್:ವಾಲ್ಮೀಕಿ ಅಭಿವೃದ್ಧಿ ನಿಗಮದ ಪರಿಶಿಷ್ಟ ವರ್ಗಕ್ಕೆ ಮೀಸಲಾದ ₹187 ಕೋಟಿ ಹಣ ಅಕ್ರಮವಾಗಿ ವರ್ಗಾವಣೆಯಾದ ಪ್ರಕರಣದಲ್ಲಿ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆ ಪಡೆಯುವ ಮೂಲಕ ಕಾಂಗ್ರೆಸ್ ಸರ್ಕಾರ ಜನಾಕ್ರೋಶದ ಮುಂದೆ ಮಂಡಿಯೂರಿದೆ ಎಂದು ವಿಧಾನಸಭೆ ಪ್ರತಿಪಕ್ಷ ನಾ
ಅಶೋಕ


ಬೆಂಗಳೂರು, 28 ಆಗಸ್ಟ್ (ಹಿ.ಸ.):

ಆ್ಯಂಕರ್:ವಾಲ್ಮೀಕಿ ಅಭಿವೃದ್ಧಿ ನಿಗಮದ ಪರಿಶಿಷ್ಟ ವರ್ಗಕ್ಕೆ ಮೀಸಲಾದ ₹187 ಕೋಟಿ ಹಣ ಅಕ್ರಮವಾಗಿ ವರ್ಗಾವಣೆಯಾದ ಪ್ರಕರಣದಲ್ಲಿ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆ ಪಡೆಯುವ ಮೂಲಕ ಕಾಂಗ್ರೆಸ್ ಸರ್ಕಾರ ಜನಾಕ್ರೋಶದ ಮುಂದೆ ಮಂಡಿಯೂರಿದೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ ಹೇಳಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಹೇಳಿಕೆ ನೀಡಿರುವ ಅವರು, ನಾಗೇಂದ್ರ ಅವರನ್ನು ರಕ್ಷಿಸಲು ಕಾಂಗ್ರೆಸ್ ಸರ್ಕಾರ ವಿಧಾನಮಂಡಲ ಅಧಿವೇಶನವನ್ನೇ ಮೊಟಕುಗೊಳಿಸಿತ್ತು. ಬಿಜೆಪಿ ಪಾದಯಾತ್ರೆ ಘೋಷಿಸಿದ ಬೆನ್ನಲ್ಲೇ ಸರ್ಕಾರ ಬೆದರಿದ್ದು, ಸಚಿವರಿಂದ ರಾಜೀನಾಮೆ ಪಡೆದಿದೆ ಎಂದು ಆರೋಪಿಸಿದ್ದಾರೆ.

ದಲಿತರ ಹಣದ ಅಕ್ರಮ ವರ್ಗಾವಣೆ ಹಾಗೂ ಲೂಟಿ ಆರೋಪದ ವಿರುದ್ಧ ಬಿಜೆಪಿ-ಜೆಡಿಎಸ್ ಸದನದ ಒಳಗೆ ಮತ್ತು ಹೊರಗೆ ನಿರಂತರ ಹೋರಾಟ ನಡೆಸಿತ್ತು. ಸಚಿವರ ರಾಜೀನಾಮೆ ನಮ್ಮ ಹೋರಾಟಕ್ಕೆ ಸಂದ ಜಯವಾಗಿದ್ದು, ಇದು ದಲಿತರ ಹಣಕ್ಕೆ ನ್ಯಾಯ ಸಿಗಬೇಕೆಂಬ ಆಗ್ರಹದ ಗೆಲುವಾಗಿದೆ ಎಂದು ತಿಳಿಸಿದ್ದಾರೆ.

ಆದರೆ ನಾಗೇಂದ್ರ ಅವರ ರಾಜೀನಾಮೆ ಅಂತ್ಯವಲ್ಲ, ಸತ್ಯ ತನಿಖೆಯ ಆರಂಭ. ಹಣ ಯಾರ ಆದೇಶದ ಮೇರೆಗೆ ವರ್ಗಾವಣೆಯಾಯಿತು, ನಿರ್ದೇಶನಗಳು ಎಲ್ಲಿಂದ ಬಂದವು, ಹಗರಣದಿಂದ ಯಾರಿಗೆ ಲಾಭವಾಯಿತು ಮತ್ತು ಆರೋಪಿಗಳನ್ನು ಯಾರು ರಕ್ಷಿಸಿದರು ಎಂಬುದಕ್ಕೆ ಉತ್ತರ ಸಿಗಬೇಕು ಎಂದು ಅಶೋಕ ಒತ್ತಾಯಿಸಿದ್ದಾರೆ.

ಹಗರಣದಲ್ಲಿ ಭಾಗಿಯಾದ ಹಾಗೂ ಆರೋಪಿಗಳನ್ನು ರಕ್ಷಿಸಿದ ಪ್ರತಿಯೊಬ್ಬರೂ ಕಾನೂನಿನ ಮುಂದೆ ನಿಲ್ಲಬೇಕು. ಹಗರಣದ ಸಂಪೂರ್ಣ ಸತ್ಯ ಬಯಲಾಗುವವರೆಗೆ, ಜನರ ಹಣಕ್ಕೆ ನ್ಯಾಯ ಸಿಗುವವರೆಗೆ ಹಾಗೂ ತಪ್ಪಿತಸ್ಥರಿಗೆ ಶಿಕ್ಷೆಯಾಗುವವರೆಗೆ ಬಿಜೆಪಿಯ ಹೋರಾಟ ಮುಂದುವರಿಯಲಿದೆ ಎಂದು ಅವರು ಹೇಳಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande