ಸಾಮಾಜಿಕ, ಆರ್ಥಿಕ ಸುಧಾರಣೆಗೆ ನಾರಾಯಣ ಗುರುಗಳ ಕೊಡುಗೆ ಅಪಾರ
ಬಳ್ಳಾರಿ, 28 ಆಗಸ್ಟ್ (ಹಿ.ಸ.) ಆ್ಯಂಕರ್ : ಬ್ರಹ್ಮಶ್ರೀ ನಾರಾಯಣ ಗುರುಗಳು ಸಾಮಾಜಿಕ ಹಾಗೂ ಆರ್ಥಿಕ ಸುಧಾರಣೆಗಳ ಮೂಲಕ ಸಮಾಜದ ಸರ್ವತೋಮುಖ ಪ್ರಗತಿಗೆ ಶ್ರಮಿಸಿದ್ದರು ಎಂದು ಡಾ. ಬಾಬು ಜಗಜೀವನ್ ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಮುಂಡರಗಿ ನಾಗರಾಜ ಅವರು ತಿಳಿಸಿದ್ದಾರೆ. ಜಿ
ಸಾಮಾಜಿಕ, ಆರ್ಥಿಕ ಸುಧಾರಣೆಗೆ ನಾರಾಯಣ  ಗುರುಗಳ ಕೊಡುಗೆ ಅಪಾರ


ಸಾಮಾಜಿಕ, ಆರ್ಥಿಕ ಸುಧಾರಣೆಗೆ ನಾರಾಯಣ  ಗುರುಗಳ ಕೊಡುಗೆ ಅಪಾರ


ಸಾಮಾಜಿಕ, ಆರ್ಥಿಕ ಸುಧಾರಣೆಗೆ ನಾರಾಯಣ  ಗುರುಗಳ ಕೊಡುಗೆ ಅಪಾರ


ಸಾಮಾಜಿಕ, ಆರ್ಥಿಕ ಸುಧಾರಣೆಗೆ ನಾರಾಯಣ  ಗುರುಗಳ ಕೊಡುಗೆ ಅಪಾರ


ಬಳ್ಳಾರಿ, 28 ಆಗಸ್ಟ್ (ಹಿ.ಸ.)

ಆ್ಯಂಕರ್ : ಬ್ರಹ್ಮಶ್ರೀ ನಾರಾಯಣ ಗುರುಗಳು ಸಾಮಾಜಿಕ ಹಾಗೂ ಆರ್ಥಿಕ ಸುಧಾರಣೆಗಳ ಮೂಲಕ ಸಮಾಜದ ಸರ್ವತೋಮುಖ ಪ್ರಗತಿಗೆ ಶ್ರಮಿಸಿದ್ದರು ಎಂದು ಡಾ. ಬಾಬು ಜಗಜೀವನ್ ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಮುಂಡರಗಿ ನಾಗರಾಜ ಅವರು ತಿಳಿಸಿದ್ದಾರೆ.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಮಹಾನಗರ ಪಾಲಿಕೆಯ ಸಂಯುಕ್ತಾಶ್ರಯದಲ್ಲಿ ಡಾ. ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಶುಕ್ರವಾರ ನಡೆದ `ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ’ಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಒಂದೇ ಜಾತಿ, ಒಂದೇ ಧರ್ಮ, ಒಂದೇ ಜನಾಂಗ ಎಂಬ ಸಂದೇಶ ಸಾರಿದ ಗುರುಗಳು ಅಸ್ಪøಶ್ಯತೆ ನಿರ್ಮೂಲನೆಗಾಗಿ ನಿರಂತರವಾಗಿ ಶ್ರಮಿಸಿದರು. ಬ್ರಹ್ಮಶ್ರೀ ನಾರಾಯಣ ಗುರುಗಳ ಸ್ಮರಣೆ ನಮ್ಮೆಲ್ಲರ ಪುಣ್ಯ ಎಂದರು.

ಬಳ್ಳಾರಿ ಮಹಾನಗರ ಪಾಲಿಕೆಯ ಮಹಾಪೌರರಾದ ಪಿ. ಗಾದೆಪ್ಪ ಅವರು, ಇಂದಿನ ಯುವ ಪೀಳಿಗೆಗೆ ಮಹನೀಯರ ಆದರ್ಶ ಹಾಗೂ ಕೊಡುಗೆಗಳನ್ನು ಪರಿಚಯಿಸುವ ನಿಟ್ಟಿನಲ್ಲಿ ಪೂರಕ ಸಾಹಿತ್ಯ ಪುಸ್ತಕಗಳ ರಚನೆಯಾಗಬೇಕಿದೆ ಎಂದು ಹೇಳಿದರು.

ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ. ಚಿದಾನಂದಪ್ಪ ಅವರು, ಅಸ್ಪøಶ್ಯತೆ ವಿರುದ್ಧ ಹೋರಾಡಿ ‘ಕೇರಳದ ಬಸವಣ್ಣ’ ಎಂದೇ ಪ್ರಸಿದ್ಧರಾದ ನಾರಾಯಣ ಗುರುಗಳು, 1888ರಲ್ಲಿ ಅರುವಿಪುರಂನಲ್ಲಿ ಶಿವಲಿಂಗ ಪ್ರತಿಷ್ಠಾಪಿಸಿ ಎಲ್ಲ ಸಮುದಾಯಗಳಿಗೂ ಮುಕ್ತ ಪ್ರವೇಶ ಕಲ್ಪಿಸುವ ಮೂಲಕ ಐತಿಹಾಸಿಕ ಸಾಮಾಜಿಕ ಕ್ರಾಂತಿಗೆ ಮುನ್ನುಡಿ ಬರೆದರು ಎಂದು ತಿಳಿಸಿದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ನಿಷ್ಠಿ ರುದ್ರಪ್ಪ ಅವರು ವಿಶೇಷ ಉಪನ್ಯಾಸ ನೀಡಿ, ಆಗಸ್ಟ್ 28, 1856ರಂದು ಕೇರಳದ ಚೆಂಪಜಂತಿಯಲ್ಲಿ ಜನಿಸಿದ ನಾರಾಯಣ ಗುರುಗಳು, ಸಂಸ್ಕøತ-ಧರ್ಮಗ್ರಂಥಗಳ ಅಧ್ಯಯನ ನಡೆಸಿ 1903ರಲ್ಲಿ ‘ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ’ ಸಂಸ್ಥೆಯನ್ನು ಸ್ಥಾಪಿಸಿ ಶೈಕ್ಷಣಿಕ, ಸಾಮಾಜಿಕ ಸುಧಾರಣೆಗೆ ಬಲ ನೀಡಿದರು ಎಂದು ತಿಳಿಸಿದರು.

ಜಯಂತಿಯ ಅಂಗವಾಗಿ ನಗರದ ಪ್ರಮುಖ ಬೀದಿಗಳಲ್ಲಿ ಭವ್ಯವಾದ ಮೆರವಣಿಗೆ ನಡೆಯಿತು. ಮೆರವಣಿಗೆಯಲ್ಲಿ ಕುಂಭ ಹೊತ್ತ ಹೆಣ್ಣು ಮಕ್ಕಳು ಗಮನ ಸೆಳೆದರು. ಮೆರವಣಿಗೆಯು ನಗರದ ಈಡಿಗ ಹಾಸ್ಟೆಲ್ ಆವರಣದಿಂದ ಆರಂಭವಾಗಿ ಗಡಿಗಿ ಚೆನ್ನಪ್ಪ ವೃತ್ತ, ಹಳೆಯ ಜಿಲ್ಲಾಧಿಕಾರಿಗಳ ಕಚೇರಿ ರಸ್ತೆ ಮತ್ತು ಹೆಚ್.ಆರ್. ಗವಿಯಪ್ಪ ವೃತ್ತದ ಮಾರ್ಗವಾಗಿ ಸಾಗಿ ಡಾ.ಜೋಳದರಾಶಿ ರಂಗಮಂದಿರ ತಲುಪಿತು.

ರಕುಮಾ ಎಲ್. ತಂಡದಿಂದ ಭಕ್ತಿ ಸಂಗೀತ ನೆರವೇರಿತು. ಸಂವಿಧಾನದ ಪ್ರಸ್ತಾವನೆ ಬೋಧಿಸಲಾಯಿತು.

ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ. ನಾಗರಾಜ, ಜಿಲ್ಲಾ ಈಡಿಗ ಸಮಾಜದ ಕಾರ್ಯದರ್ಶಿ ಪಿ. ಮಂಜುನಾಥ್, ನಿವೃತ್ತ ಅಧಿಕಾರಿ ಮಲ್ಲಿಕಾರ್ಜುನ್ ಸೇರಿ ಅನೇಕರು ಪಾಲ್ಗೊಂಡಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande