ಹನೂರು ಗುಂಡಿನ ದಾಳಿ ಖಂಡಿಸಿ ಅರಣ್ಯ ಸಿಬ್ಬಂದಿ ಪರ ಯುಸಿಎಂ ಪ್ರತಿಭಟನೆ
ಬೆಂಗಳೂರು, 28 ಆಗಸ್ಟ್ (ಹಿ.ಸ.): ಆ್ಯಂಕರ್: ಹನೂರು ಗುಂಡಿನ ದಾಳಿ ಹಾಗೂ ಕಾವೇರಿ ವನ್ಯಜೀವಿ ಅಭಯಾರಣ್ಯದ ಅರಣ್ಯ ಸಿಬ್ಬಂದಿ ಎದುರಿಸುತ್ತಿರುವ ಸಂಕಷ್ಟದ ಹಿನ್ನೆಲೆಯಲ್ಲಿ, ಯುನೈಟೆಡ್ ಕನ್ಸರ್ವೇಷನ್ ಮೂವ್‌ಮೆಂಟ್‌ (ಯುಸಿಎಂ) ವತಿಯಿಂದ ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಯಲಿದೆ.
Ucm


ಬೆಂಗಳೂರು, 28 ಆಗಸ್ಟ್ (ಹಿ.ಸ.):

ಆ್ಯಂಕರ್:

ಹನೂರು ಗುಂಡಿನ ದಾಳಿ ಹಾಗೂ ಕಾವೇರಿ ವನ್ಯಜೀವಿ ಅಭಯಾರಣ್ಯದ ಅರಣ್ಯ ಸಿಬ್ಬಂದಿ ಎದುರಿಸುತ್ತಿರುವ ಸಂಕಷ್ಟದ ಹಿನ್ನೆಲೆಯಲ್ಲಿ, ಯುನೈಟೆಡ್ ಕನ್ಸರ್ವೇಷನ್ ಮೂವ್‌ಮೆಂಟ್‌ (ಯುಸಿಎಂ) ವತಿಯಿಂದ ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಯಲಿದೆ.

ಇಂದು ಬೆಳಿಗ್ಗೆ 11.30ಕ್ಕೆ ನಡೆಯಲಿರುವ ಶಾಂತಿಯುತ ಪ್ರತಿಭಟನೆಗೆ ಬೆಂಗಳೂರು ಪೊಲೀಸರು ಅನುಮತಿ ನೀಡಿದ್ದಾರೆ. ಅರಣ್ಯ ಮತ್ತು ವನ್ಯಜೀವಿ ಸಂರಕ್ಷಣೆಯಲ್ಲಿ ಮುಂಚೂಣಿಯಲ್ಲಿ ಕಾರ್ಯನಿರ್ವಹಿಸುವ ಅರಣ್ಯ ಸಿಬ್ಬಂದಿಗೆ ಬೆಂಬಲ ಸೂಚಿಸುವುದು ಪ್ರತಿಭಟನೆಯ ಉದ್ದೇಶವಾಗಿದೆ.

ವನ್ಯಜೀವಿ ಉತ್ಸಾಹಿಗಳು, ಛಾಯಾಗ್ರಾಹಕರು, ಕಾರ್ಯಕರ್ತರು, ಸ್ವಯಂಸೇವಾ ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಪ್ರತಿಭಟನೆಯಲ್ಲಿ ಭಾಗವಹಿಸಿ ಅರಣ್ಯ ಸಿಬ್ಬಂದಿಯೊಂದಿಗೆ ಒಗ್ಗಟ್ಟು ಪ್ರದರ್ಶಿಸುವಂತೆ ಯುಸಿಎಂ ಮನವಿ ಮಾಡಿದೆ.

ಅಮೂಲ್ಯವಾದ ಕಾಡುಗಳು, ವನ್ಯಜೀವಿಗಳು ಹಾಗೂ ಜೀವವೈವಿಧ್ಯವನ್ನು ರಕ್ಷಿಸಲು ತಮ್ಮ ಜೀವವನ್ನೇ ಪಣಕ್ಕಿಟ್ಟು ಕರ್ತವ್ಯ ನಿರ್ವಹಿಸುತ್ತಿರುವ ಅರಣ್ಯ ಸಿಬ್ಬಂದಿಯ ಸುರಕ್ಷತೆಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸಂಘಟನೆ ಒತ್ತಾಯಿಸಿದೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande