
ಬಳ್ಳಾರಿ, 29 ಆಗಸ್ಟ್ (ಹಿ.ಸ.)
ಆ್ಯಂಕರ್: ನಗರದ ಬಿಐಟಿಎಂ ಕಾಲೇಜಿನಲ್ಲಿ ಆಗಸ್ಟ್ 30 ರಂದು ಬೆಳಿಗ್ಗೆ 09 ರಿಂದ ಮಧ್ಯಾಹ್ನ 12.30 ಗಂಟೆಯವರೆಗೆ ರಾಷ್ಟಿಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ಸ್ನಾತಕೋತ್ತರ) -2026 ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷೆಯನ್ನು ಸುಗಮವಾಗಿ ಮತ್ತು ಪಾರದರ್ಶಕವಾಗಿ ನಡೆಸಲು ಪರೀಕ್ಷಾ ಕೇಂದ್ರದ ಸುತ್ತ-ಮುತ್ತಲಿನ 200 ಮೀಟರ್ ವ್ಯಾಪ್ತಿಯ ಪ್ರದೇಶವನ್ನು ನಿಷೇಧಿತ ಪ್ರದೇಶ ಎಂದು ಘೋಷಿಸಿ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಆದೇಶಿಸಿದ್ದಾರೆ.
ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023 ರ ಕಲಂ 163 ರ ಅಡಿಯಲ್ಲಿ ತಮಗಿರುವ ಅಧಿಕಾರವನ್ನು ಚಲಾಯಿಸಿ ಈ ಆದೇಶವನ್ನು ಹೊರಡಿಸಿದ್ದಾರೆ.
ಪರೀಕ್ಷಾ ಕೇಂದ್ರದ ಸುತ್ತಮುತ್ತ ಅನಧಿಕೃತ ವ್ಯಕ್ತಿಗಳು ಹಾಗೂ ವ್ಯಕ್ತಿಗಳ ಗುಂಪುಗಳು ಜಮಾಯಿಸುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಪರೀಕ್ಷಾ ಅವಧಿಯಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿರುವ ಎಲ್ಲಾ ಜೆರಾಕ್ಸ್ ಅಂಗಡಿಗಳು ಹಾಗೂ ಇಂಟರ್ನೆಟ್ ಸೆಂಟರ್ಗಳು ಕಾರ್ಯನಿರ್ವಹಿಸದಂತೆ ಕಟ್ಟುನಿಟ್ಟಿನ ಪ್ರತಿಬಂಧಕ ಆದೇಶ ಜಾರಿಗೊಳಿಸಲಾಗಿದೆ.
ಈ ಕಟ್ಟುನಿಟ್ಟಿನ ನಿಯಮಗಳು ಪರೀಕ್ಷೆಯ ಮೇಲ್ವಿಚಾರಣೆ ಹಾಗೂ ಕರ್ತವ್ಯ ನಿರ್ವಹಿಸುವ ಸಿಬ್ಬಂದಿ ವರ್ಗದವರಿಗೆ ಅನ್ವಯಿಸುವುದಿಲ್ಲ ಎಂದು ಅವರು ಹೊರಡಿಸಿರುವ ಆದೇಶದಲ್ಲಿ ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್