ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಜನ್ಮದಿನ: ಡಿ.ಕೆ. ಶಿವಕುಮಾರ್ ಗೌರವ ನಮನ
ಬೆಂಗಳೂರು, 29 ಆಗಸ್ಟ್ (ಹಿ.ಸ.): ಆ್ಯಂಕರ್: ಕರ್ನಾಟಕದ ರಾಜಕಾರಣದಲ್ಲಿ ತಮ್ಮ ಆಕರ್ಷಕ ವ್ಯಕ್ತಿತ್ವ, ಚುರುಕಾದ ಆಡಳಿತ ಹಾಗೂ ಹೊಸ ಆಲೋಚನೆಗಳ ಮೂಲಕ ವಿಶಿಷ್ಟ ಛಾಪು ಮೂಡಿಸಿದ್ದ ಮಾಜಿ ಮುಖ್ಯಮಂತ್ರಿ ದಿ. ರಾಮಕೃಷ್ಣ ಹೆಗಡೆ ಅವರ ಜನ್ಮದಿನದಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಗೌರವ ನಮನ ಸಲ್ಲಿಸಿದ್ದಾ
ಮುಖ್ಯಮಂತ್ರಿ ಎಕ್ಸ್ ಪೋಸ್ಟ್


ಬೆಂಗಳೂರು, 29 ಆಗಸ್ಟ್ (ಹಿ.ಸ.):

ಆ್ಯಂಕರ್:

ಕರ್ನಾಟಕದ ರಾಜಕಾರಣದಲ್ಲಿ ತಮ್ಮ ಆಕರ್ಷಕ ವ್ಯಕ್ತಿತ್ವ, ಚುರುಕಾದ ಆಡಳಿತ ಹಾಗೂ ಹೊಸ ಆಲೋಚನೆಗಳ ಮೂಲಕ ವಿಶಿಷ್ಟ ಛಾಪು ಮೂಡಿಸಿದ್ದ ಮಾಜಿ ಮುಖ್ಯಮಂತ್ರಿ ದಿ. ರಾಮಕೃಷ್ಣ ಹೆಗಡೆ ಅವರ ಜನ್ಮದಿನದಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಗೌರವ ನಮನ ಸಲ್ಲಿಸಿದ್ದಾರೆ.

ಎಕ್ಸ್‌ನಲ್ಲಿ ಸಂದೇಶ ಹಂಚಿಕೊಂಡಿರುವ ಅವರು, ಅಧಿಕಾರ ವಿಕೇಂದ್ರೀಕರಣದ ಭಾಗವಾಗಿ ಪಂಚಾಯತ್ ರಾಜ್ ವ್ಯವಸ್ಥೆಯನ್ನು ಸಮರ್ಪಕವಾಗಿ ಜಾರಿಗೊಳಿಸಿದ್ದು ಹಾಗೂ ಭ್ರಷ್ಟಾಚಾರ ನಿಯಂತ್ರಣಕ್ಕೆ ಲೋಕಾಯುಕ್ತ ಸಂಸ್ಥೆಯನ್ನು ಬಲಪಡಿಸಿದ್ದು ಹೆಗಡೆಯವರ ದೂರದೃಷ್ಟಿಗೆ ಸಾಕ್ಷಿಯಾಗಿದೆ ಎಂದು ಹೇಳಿದ್ದಾರೆ.

ನಾಡಿನ ಕಲೆ, ಸಂಸ್ಕೃತಿ ಹಾಗೂ ಆಡಳಿತ ಸುಧಾರಣೆಗೆ ರಾಮಕೃಷ್ಣ ಹೆಗಡೆ ನೀಡಿದ ಅನನ್ಯ ಕೊಡುಗೆ ಸ್ಮರಣೀಯವಾಗಿದ್ದು, ಅವರ ಆದರ್ಶಗಳು ಚಿರಸ್ಥಾಯಿಯಾಗಿರುತ್ತವೆ ಎಂದು ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande