
ಬೆಂಗಳೂರು, 29 ಆಗಸ್ಟ್ (ಹಿ.ಸ.):
ಆ್ಯಂಕರ್:
ವಿಶ್ವ ಸಂವಾದ ಕೇಂದ್ರ, ಕರ್ನಾಟಕದ 25ನೇ ವರ್ಷದ ಅಂಗವಾಗಿ ಸ್ನೇಹಮಿಲನ ಕಾರ್ಯಕ್ರಮವನ್ನು ಇಂದು ಸಂಜೆ 6.30ಕ್ಕೆ ಬೆಂಗಳೂರಿನ ಸೃಪತುಂಗ ರಸ್ತೆಯಲ್ಲಿರುವ ದಿ ಮಿಥಿಕ್ ಸೊಸೈಟಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತೀಯ ಸಹಬೌದ್ಧಿಕ್ ಪ್ರಮುಖರಾದ ಶ್ರೀ ಸುಧೀರ್ ಹಾಗೂ ದಿ ಮಿಥಿಕ್ ಸೊಸೈಟಿಯ ಅಧ್ಯಕ್ಷರಾದ ವಿ. ನಾಗರಾಜ್ ಉಪಸ್ಥಿತರಿರಲಿದ್ದಾರೆ.
ಇದೇ ಸಂದರ್ಭದಲ್ಲಿ ಹಿರಿಯ ಲೇಖಕ ನಾರಾಯಣ ಶೇವಿರೆ ಅವರು ಬರೆದಿರುವ ‘ಹಿಂದುತ್ವ’, ‘ಭಾರತ’ ಹಾಗೂ ‘ಸ್ವತ್ವ’ ಕುರಿತ ಮೂರು ಕಿರುಪುಸ್ತಕಗಳನ್ನು ಬಿಡುಗಡೆ ಮಾಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.