
ಬೆಂಗಳೂರು, 29 ಆಗಸ್ಟ್ (ಹಿ.ಸ.):
ಆ್ಯಂಕರ್:
ಭಾರತೀಯ ಹಾಕಿ ಕ್ಷೇತ್ರಕ್ಕೆ ಜಾಗತಿಕ ಮಟ್ಟದಲ್ಲಿ ಹೊಸ ಹಿರಿಮೆ ಮತ್ತು ಮೆರಗು ತಂದುಕೊಟ್ಟ ಮೇಜರ್ ಧ್ಯಾನ್‌ಚಂದ್ ಅವರ ಜನ್ಮಸ್ಮರಣೆಯಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಗೌರವ ನಮನ ಸಲ್ಲಿಸಿದ್ದಾರೆ.
ಎಕ್ಸ್‌ನಲ್ಲಿ ಸಂದೇಶ ಹಂಚಿಕೊಂಡಿರುವ ಅವರು, ಮೇಜರ್ ಧ್ಯಾನ್‌ಚಂದ್ ಅವರ ಸ್ಮರಣಾರ್ಥ ಆಚರಿಸಲಾಗುತ್ತಿರುವ ರಾಷ್ಟ್ರೀಯ ಕ್ರೀಡಾ ದಿನದ ಅಂಗವಾಗಿ ಎಲ್ಲರಿಗೂ ಶುಭಾಶಯ ತಿಳಿಸಿದ್ದಾರೆ.
ಭಾರತದ ಕೀರ್ತಿ ಪತಾಕೆಯನ್ನು ಕ್ರೀಡಾ ಕ್ಷೇತ್ರದಲ್ಲಿ ಎತ್ತರಕ್ಕೆ ಏರಿಸಲು ಶ್ರಮಿಸುತ್ತಿರುವ ನಾಡಿನ ಸಮಸ್ತ ಕ್ರೀಡಾಪಟುಗಳ ಉಜ್ವಲ ಭವಿಷ್ಯಕ್ಕಾಗಿ ಹಾರೈಸಿರುವ ವಿಜಯೇಂದ್ರ, ಮುಂದಿನ ಪೀಳಿಗೆಯ ಕ್ರೀಡಾಪಟುಗಳಿಗೆ ಪೂರ್ಣ ಯಶಸ್ಸು ಹಾಗೂ ಶುಭವನ್ನು ಕೋರಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.