ಸೆ.1ರಿಂದ 10ರವರೆಗೆ ಭದ್ರಾ ಬಲದಂಡೆ ನಾಲೆಯಲ್ಲಿ ನೀರು ಬಿಡುಗಡೆ
ಶಿವಮೊಗ್ಗ, 29 ಆಗಸ್ಟ್ (ಹಿ.ಸ.): ಆ್ಯಂಕರ್:ದಾವಣಗೆರೆ ಹಾಗೂ ಚನ್ನಗಿರಿ ತಾಲ್ಲೂಕಿನ ಜನ-ಜಾನುವಾರುಗಳಿಗೆ ಮತ್ತು ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳ ಉದ್ದೇಶಕ್ಕಾಗಿ ಭದ್ರಾ ಬಲದಂಡೆ ನಾಲೆಯಿಂದ ಸೆಪ್ಟೆಂಬರ್ 1ರಿಂದ 10ರವರೆಗೆ ನೀರು ಹರಿಸಲು ನಿರ್ಧರಿಸಲಾಗಿದೆ. ಪ್ರಾದೇಶಿಕ ಆಯುಕ್ತರ ಆದೇಶದಂತೆ ಪ್ರತಿದ
ಸೆ.1ರಿಂದ 10ರವರೆಗೆ ಭದ್ರಾ ಬಲದಂಡೆ ನಾಲೆಯಲ್ಲಿ ನೀರು ಬಿಡುಗಡೆ


ಶಿವಮೊಗ್ಗ, 29 ಆಗಸ್ಟ್ (ಹಿ.ಸ.):

ಆ್ಯಂಕರ್:ದಾವಣಗೆರೆ ಹಾಗೂ ಚನ್ನಗಿರಿ ತಾಲ್ಲೂಕಿನ ಜನ-ಜಾನುವಾರುಗಳಿಗೆ ಮತ್ತು ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳ ಉದ್ದೇಶಕ್ಕಾಗಿ ಭದ್ರಾ ಬಲದಂಡೆ ನಾಲೆಯಿಂದ ಸೆಪ್ಟೆಂಬರ್ 1ರಿಂದ 10ರವರೆಗೆ ನೀರು ಹರಿಸಲು ನಿರ್ಧರಿಸಲಾಗಿದೆ.

ಪ್ರಾದೇಶಿಕ ಆಯುಕ್ತರ ಆದೇಶದಂತೆ ಪ್ರತಿದಿನ 1,500 ಕ್ಯುಸೆಕ್ ಪ್ರಮಾಣದಲ್ಲಿ ನೀರನ್ನು ಜಲಸಂಗ್ರಹಣಾ ತೊಟ್ಟಿಗಳಿಗೆ ಹರಿಸಲಾಗುವುದು ಎಂದು ಭದ್ರಾ ಯೋಜನಾ ವೃತ್ತದ ಅಧೀಕ್ಷಕ ಅಭಿಯಂತರರು ತಿಳಿಸಿದ್ದಾರೆ.

ನಾಲೆಯಲ್ಲಿ ಹರಿಸಲಾಗುವ ನೀರನ್ನು ಕುಡಿಯುವ ನೀರಿನ ಉದ್ದೇಶಕ್ಕೆ ಮಾತ್ರ ಬಳಸಬೇಕು. ಅಚ್ಚುಕಟ್ಟು ಪ್ರದೇಶದ ಬೆಳೆಗಳಿಗೆ ಯಾವುದೇ ಕಾರಣಕ್ಕೂ ನೀರು ಬಳಸಬಾರದು. ರೈತರು ನಾಲೆಯಿಂದ ಅಕ್ರಮವಾಗಿ ನೀರೆತ್ತುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ನೀರು ಹರಿಯುವ ಅವಧಿಯಲ್ಲಿ ಸಾರ್ವಜನಿಕರು ಕಾಲುವೆಯಲ್ಲಿ ಸಂಚರಿಸಬಾರದು ಹಾಗೂ ದನ-ಕರುಗಳನ್ನು ಕಾಲುವೆಗೆ ಇಳಿಸಬಾರದು ಎಂದು ಎಚ್ಚರಿಕೆ ನೀಡಲಾಗಿದೆ.

ಕುಡಿಯುವ ನೀರಿನ ಅಭಾವ ತಪ್ಪಿಸಲು ಕೈಗೊಂಡಿರುವ ಈ ಕ್ರಮಕ್ಕೆ ಸಾರ್ವಜನಿಕರು ಹಾಗೂ ರೈತರು ಸಹಕರಿಸುವಂತೆ ಭದ್ರಾ ಜಲಾಶಯ ಯೋಜನೆಯ ಕುಡಿಯುವ ನೀರಿನ ಸಮಿತಿ ಮನವಿ ಮಾಡಿದೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande