ಕ್ರೀಡಾ ಪ್ರತಿಭೆಗಳಿಗೆ ಅಗತ್ಯ ಸೌಲಭ್ಯ ಕಲ್ಪಿಸುವುದು ನಮ್ಮ ಜವಾಬ್ದಾರಿ: ಡಿ.ಕೆ. ಶಿವಕುಮಾರ್
ಬೆಂಗಳೂರು, 29 ಆಗಸ್ಟ್ (ಹಿ.ಸ.): ಆ್ಯಂಕರ್:ರಾಷ್ಟ್ರೀಯ ಕ್ರೀಡಾ ದಿನದ ಅಂಗವಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹಾಕಿ ದಿಗ್ಗಜ ಮೇಜರ್ ಧ್ಯಾನ್ ಚಂದ್ ಅವರನ್ನು ಸ್ಮರಿಸಿ ಗೌರವ ಸಲ್ಲಿಸಿದ್ದಾರೆ. ಎಕ್ಸ್‌ನಲ್ಲಿ ಸಂದೇಶ ಹಂಚಿಕೊಂಡಿರುವ ಅವರು, ಮೇಜರ್ ಧ್ಯಾನ್ ಚಂದ್ ಅವರ ಅಪ್ರತಿಮ ಸಮರ್ಪಣೆ ಮತ್ತ
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಎಕ್ಸ್ ಪೋಸ್ಟ್


ಬೆಂಗಳೂರು, 29 ಆಗಸ್ಟ್ (ಹಿ.ಸ.):

ಆ್ಯಂಕರ್:ರಾಷ್ಟ್ರೀಯ ಕ್ರೀಡಾ ದಿನದ ಅಂಗವಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹಾಕಿ ದಿಗ್ಗಜ ಮೇಜರ್ ಧ್ಯಾನ್ ಚಂದ್ ಅವರನ್ನು ಸ್ಮರಿಸಿ ಗೌರವ ಸಲ್ಲಿಸಿದ್ದಾರೆ.

ಎಕ್ಸ್‌ನಲ್ಲಿ ಸಂದೇಶ ಹಂಚಿಕೊಂಡಿರುವ ಅವರು, ಮೇಜರ್ ಧ್ಯಾನ್ ಚಂದ್ ಅವರ ಅಪ್ರತಿಮ ಸಮರ್ಪಣೆ ಮತ್ತು ಹಾಕಿ ಕೌಶಲ್ಯವು ತಲೆಮಾರುಗಳಿಗೆ ಸ್ಫೂರ್ತಿಯಾಗಿದೆ. ಮೂರು ಒಲಿಂಪಿಕ್ ಚಿನ್ನದ ಪದಕಗಳ ಮೂಲಕ ಭಾರತೀಯ ಹಾಕಿಗೆ ಅವರು ನೀಡಿದ ಕೊಡುಗೆ ಕ್ರೀಡಾ ಇತಿಹಾಸದ ಹೆಮ್ಮೆಯ ಅಧ್ಯಾಯವಾಗಿದೆ ಎಂದು ಹೇಳಿದ್ದಾರೆ.

ಕ್ರೀಡೆ ನಮ್ಮಲ್ಲಿ ಶಿಸ್ತು, ದೃಢಸಂಕಲ್ಪ ಮತ್ತು ಸವಾಲುಗಳನ್ನು ಎದುರಿಸುವ ಸಾಮರ್ಥ್ಯ ಬೆಳೆಸುತ್ತದೆ. ಕರ್ನಾಟಕದಲ್ಲಿ ಅಪಾರ ಕ್ರೀಡಾ ಪ್ರತಿಭೆಯಿದ್ದು, ಯುವ ಕ್ರೀಡಾಪಟುಗಳಿಗೆ ಗುಣಮಟ್ಟದ ತರಬೇತಿ, ಮೂಲಸೌಕರ್ಯ ಹಾಗೂ ಅಗತ್ಯ ಅವಕಾಶಗಳನ್ನು ಒದಗಿಸುವುದು ನಮ್ಮ ಜವಾಬ್ದಾರಿಯಾಗಿದೆ ಎಂದಿದ್ದಾರೆ.

ರಾಜ್ಯದ ಎಲ್ಲ ಭಾಗಗಳ ಪ್ರತಿಭೆಗಳಿಗೆ ಸೂಕ್ತ ಬೆಂಬಲ ಹಾಗೂ ವೇದಿಕೆ ಕಲ್ಪಿಸುವ ಮೂಲಕ ಬಲಿಷ್ಠ ಕ್ರೀಡಾ ಪರಿಸರ ನಿರ್ಮಿಸಲು ಸರ್ಕಾರ ಕಾರ್ಯನಿರ್ವಹಿಸುತ್ತಿದೆ. ಕ್ರೀಡಾ ಕ್ಷೇತ್ರದಲ್ಲಿ ಸಾಧನೆಯ ಕನಸು ಕಾಣುತ್ತಿರುವ ಯುವಕರು ಸವಾಲುಗಳನ್ನು ಸ್ವೀಕರಿಸಿ, ಬದ್ಧತೆಯಿಂದ ಶ್ರೇಷ್ಠತೆ ಸಾಧಿಸಲು ನಿರಂತರವಾಗಿ ಪ್ರಯತ್ನಿಸಬೇಕು ಎಂದು ಡಿ.ಕೆ. ಶಿವಕುಮಾರ್ ಕರೆ ನೀಡಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande