ಸಂಸತ್ತಿನಲ್ಲಿ ಅಮಿತ್ ಶಾ ಉತ್ತರಿಸಬೇಕು:ಕೆ.ಸಿ.ವೇಣುಗೋಪಾಲ್
ನವದೆಹಲಿ, 03 ಆಗಸ್ಟ್ (ಹಿ.ಸ.): ಆ್ಯಂಕರ್:ಸಂಸತ್ತಿನ ಮಳೆಗಾಲ ಅಧಿವೇಶನ ಮೂರನೇ ವಾರಕ್ಕೆ ಕಾಲಿಟ್ಟಿದ್ದರೂ, ಶಾಂತಿಯುತ ಪ್ರತಿಭಟನಾಕಾರರ ಮೇಲಿನ ಹಲ್ಲೆ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಇನ್ನೂ ಸಂಸತ್ತಿನಲ್ಲಿ ಉತ್ತರ ನೀಡಿಲ್ಲ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಆರೋಪಿಸಿ
ಕೆ.ಸಿ.ವೇಣುಗೋಪಾಲ ಸಂಗ್ರಹ ಚಿತ್ರ


ನವದೆಹಲಿ, 03 ಆಗಸ್ಟ್ (ಹಿ.ಸ.):

ಆ್ಯಂಕರ್:ಸಂಸತ್ತಿನ ಮಳೆಗಾಲ ಅಧಿವೇಶನ ಮೂರನೇ ವಾರಕ್ಕೆ ಕಾಲಿಟ್ಟಿದ್ದರೂ, ಶಾಂತಿಯುತ ಪ್ರತಿಭಟನಾಕಾರರ ಮೇಲಿನ ಹಲ್ಲೆ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಇನ್ನೂ ಸಂಸತ್ತಿನಲ್ಲಿ ಉತ್ತರ ನೀಡಿಲ್ಲ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಆರೋಪಿಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರಕಟಿಸಿರುವ ಹೇಳಿಕೆಯಲ್ಲಿ, ರಾಮಮಂದಿರದ ದೇಣಿಗೆ ದುರ್ಬಳಕೆ ಆರೋಪದ ವಿಚಾರದಲ್ಲೂ ಕೇಂದ್ರ ಸರ್ಕಾರ ಮೌನ ವಹಿಸಿದೆ ಎಂದು ಟೀಕಿಸಿದ್ದಾರೆ.

ಈ ಎರಡೂ ವಿಷಯಗಳಲ್ಲಿ ಸರ್ಕಾರ ಉತ್ತರದಾಯಿತ್ವ ವಹಿಸುವವರೆಗೆ ಸಂಸತ್ತಿನ ಹೊರಗೂ ಹಾಗೂ ಉಭಯ ಸದನಗಳ ಒಳಗೂ ಕಾಂಗ್ರೆಸ್‌ನ ಪ್ರತಿಭಟನೆ ಮುಂದುವರಿಯಲಿದೆ ಎಂದು ಅವರು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande