
ಬೆಂಗಳೂರು, 03 ಆಗಸ್ಟ್ (ಹಿ.ಸ.):
ಆ್ಯಂಕರ್:ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಎಲ್ಲ ಸಚಿವರಿಗೆ ಹಾಗೂ ವಿಧಾನಸಭೆಯ ಸಭಾಧ್ಯಕ್ಷ, ಉಪಸಭಾಧ್ಯಕ್ಷ, ವಿಧಾನಪರಿಷತ್ ಸಭಾಪತಿ ಮತ್ತು ಉಪಸಭಾಪತಿಯಾಗಿ ಆಯ್ಕೆಯಾದ ನಾಯಕರಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾರ್ದಿಕ ಶುಭಾಶಯ ಕೋರಿದ್ದಾರೆ.
ನಿಮ್ಮೆಲ್ಲರ ರಾಜಕೀಯ ಅನುಭವ ಮತ್ತು ಬದ್ಧತೆ ಸರ್ಕಾರದ ಆಡಳಿತಕ್ಕೆ ಮತ್ತಷ್ಟು ಚೈತನ್ಯ ನೀಡಲಿದ್ದು, ಪಾರದರ್ಶಕ, ದಕ್ಷ ಹಾಗೂ ಜನಪರ ಆಡಳಿತದ ಮೂಲಕ ರಾಜ್ಯದ ಜನರ ನಿರೀಕ್ಷೆಗಳನ್ನು ಈಡೇರಿಸೋಣ ಎಂದು ಹೇಳಿದ್ದಾರೆ.
ಸರ್ಕಾರದ ಅಭಿವೃದ್ಧಿ ಯೋಜನೆಗಳನ್ನು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪಿಸುವ ಜವಾಬ್ದಾರಿಯನ್ನು ಎಲ್ಲರೂ ಒಗ್ಗಟ್ಟಿನಿಂದ ನಿಭಾಯಿಸೋಣ. ಸುಭದ್ರ, ಜನಪರ ಹಾಗೂ ಪ್ರಗತಿಪರ ಆಡಳಿತದೊಂದಿಗೆ ಬಲಿಷ್ಠ ಕರ್ನಾಟಕ ನಿರ್ಮಾಣಕ್ಕೆ ಕೈಜೋಡಿಸಿ ಕೆಲಸ ಮಾಡೋಣ ಎಂದು ಮುಖ್ಯಮಂತ್ರಿ ಕರೆ ನೀಡಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.