ಪಶ್ಚಿಮ ಏಷ್ಯಾದಲ್ಲಿ ಶಾಂತಿ ನಿರೀಕ್ಷೆ: ಕಚ್ಚಾ ತೈಲ ದರ ಇಳಿಕೆ
ನವದೆಹಲಿ, 03 ಆಗಸ್ಟ್ (ಹಿ.ಸ.): ಆ್ಯಂಕರ್:ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ತಗ್ಗಿ ಶಾಂತಿ ಸ್ಥಾಪನೆಯ ನಿರೀಕ್ಷೆ ಮೂಡಿರುವ ಹಿನ್ನೆಲೆಯಲ್ಲಿ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯಲ್ಲಿ ಗಮನಾರ್ಹ ಇಳಿಕೆ ಕಂಡುಬಂದಿದೆ. ಬ್ರೆಂಟ್ ಕಚ್ಚಾ ತೈಲ ಮತ್ತು ವೆಸ್ಟ್ ಟೆಕ್ಸಾಸ್ ಇಂಟರ್‌ಮೀಡಿಯೇಟ್
प्रतीकात्मक


ನವದೆಹಲಿ, 03 ಆಗಸ್ಟ್ (ಹಿ.ಸ.):

ಆ್ಯಂಕರ್:ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ತಗ್ಗಿ ಶಾಂತಿ ಸ್ಥಾಪನೆಯ ನಿರೀಕ್ಷೆ ಮೂಡಿರುವ ಹಿನ್ನೆಲೆಯಲ್ಲಿ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯಲ್ಲಿ ಗಮನಾರ್ಹ ಇಳಿಕೆ ಕಂಡುಬಂದಿದೆ. ಬ್ರೆಂಟ್ ಕಚ್ಚಾ ತೈಲ ಮತ್ತು ವೆಸ್ಟ್ ಟೆಕ್ಸಾಸ್ ಇಂಟರ್‌ಮೀಡಿಯೇಟ್ (ಡಬ್ಲ್ಯುಟಿಐ) ಕಚ್ಚಾ ತೈಲದ ಬೆಲೆ ಶೇಕಡಾ 5ಕ್ಕೂ ಹೆಚ್ಚು ಕುಸಿದಿದೆ.

ಬ್ರೆಂಟ್ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರೆಲ್‌ಗೆ 83.31 ಡಾಲರ್‌ಗೆ ಇಳಿದರೆ, ಡಬ್ಲ್ಯುಟಿಐ ಕಚ್ಚಾ ತೈಲದ ಬೆಲೆ 80 ಡಾಲರ್‌ಗಿಂತ ಕೆಳಗಿಳಿದು 78.78 ಡಾಲರ್‌ಗೆ ತಲುಪಿದೆ.

ಜುಲೈ ತಿಂಗಳಲ್ಲಿ ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನತೆಯಿಂದ ಕಚ್ಚಾ ತೈಲದ ಬೆಲೆಯಲ್ಲಿ ಸುಮಾರು ಶೇಕಡಾ 25ರಷ್ಟು ಏರಿಕೆ ದಾಖಲಾಗಿತ್ತು. ಇದರಿಂದ ಜಾಗತಿಕ ಹಣದುಬ್ಬರದ ಆತಂಕವೂ ಹೆಚ್ಚಾಗಿತ್ತು.

ಆದರೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್ ಮೇಲಿನ ದಾಳಿಯ ಯೋಜನೆಯನ್ನು ಸ್ಥಗಿತಗೊಳಿಸಿ, ಮಾತುಕತೆಗೆ ಅವಕಾಶ ನೀಡುವುದಾಗಿ ಘೋಷಿಸಿದ ಬಳಿಕ ಕಚ್ಚಾ ತೈಲದ ಬೆಲೆಯಲ್ಲಿ ಇಳಿಕೆ ಕಂಡುಬಂದಿದೆ. ಸೌದಿ ಅರೇಬಿಯಾ ಸೇರಿದಂತೆ ಪಶ್ಚಿಮ ಏಷ್ಯಾದ ಮಿತ್ರ ರಾಷ್ಟ್ರಗಳ ಮನವಿಯ ಮೇರೆಗೆ ಈ ನಿರ್ಧಾರ ಕೈಗೊಂಡಿರುವುದಾಗಿ ಟ್ರಂಪ್ ತಿಳಿಸಿದ್ದಾರೆ.

ಮಾತುಕತೆ ಯಶಸ್ವಿಯಾಗಿ ನಡೆದರೆ ಜಾಗತಿಕ ತೈಲ ಪೂರೈಕೆ ಸ್ಥಿರಗೊಂಡು ಬೆಲೆ ಮತ್ತಷ್ಟು ನಿಯಂತ್ರಣಕ್ಕೆ ಬರುವ ನಿರೀಕ್ಷೆ ವ್ಯಕ್ತವಾಗಿದೆ.

--------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande