ಕೋಲಾರ ಜಿಲ್ಲೆಗೆ ತಪ್ಪಿದ ಸಚಿವ ಸ್ಥಾನ ; ಶಾಸಕ ನಾರಾಯಣಸ್ವಾಮಿ ಆಕ್ರೋಶ
ಕೋಲಾರ ಜಿಲ್ಲೆಗೆ ತಪ್ಪಿದ ಸಚಿವ ಸ್ಥಾನ ; ಶಾಸಕ ನಾರಾಯಣಸ್ವಾಮಿ ಆಕ್ರೋಶ
ಶಾಸಕರಾದ ನಾರಾಯಣಸ್ವಾಮಿ, ನಂಜೇಗೌಡ, ಕೊತ್ತೂರು ಮಂಜುನಾಥ್ ಮತ್ತು ಅನಿಲ್ ಕುಮಾರ್


ಕೋಲಾರ : ಆ.೦೩ (ಹಿ.ಸ):

ಆ್ಯಂಕರ್ ; ಕಳೆದ ಒಂದು ತಿಂಗಳಿನಿಂದ ಸಚಿವ ಸ್ಥಾನಕ್ಕೆ ಕೋಲಾರ ಜಿಲ್ಲೆಯ ಕಾಂಗ್ರೆಸ್ ಶಾಸಕರು ನಡೆಸಿದ ಕಸರತ್ತು ವ್ಯರ್ಥವಾಗಿದೆ. ಬೆಂಗಳೂರಿನಿಂದ ದೆಹಲಿಯತನಕ ಸಚಿವ ಸ್ಥಾನಕ್ಕೆ ಲಾಬಿ ನಡೆಸಿದ್ದರು. ಮಾಲೂರು ಶಾಸಕ ಕೆ.ವೈ. ನಂಜೇಗೌಡ ಮತ್ತು ಬಂಗಾರಪೇಟೆ ಶಾಸಕ ಎಸ್.ಎನ್.ನಾರಾಯಣಸ್ವಾಮಿ ಎಲ್ಲಾ ವೈಮನಸ್ಸುಗಳನ್ನು ಮರೆತು ಸಚಿವ ಸ್ಥಾನಕ್ಕಾಗಿ ಕೈ ಜೊಡಿಸಿದ್ದರು. ಆದರೆ ಕಾಂಗ್ರೆಸ್ ಹೈ ಕಮಾಂಡ್ ಸಚಿವ ಸ್ಥಾನ ನೀಡಲು ನಿರಾಕರಣೆ ಮಾಡಿದೆ. ಇದರಿಂದ ಕೋಲಾರ ಜಿಲ್ಲಾ ಕಾಂಗ್ರೆಸ್ನಲ್ಲಿ ಆಕ್ರೋಶ ಬುಗಿಲೆದ್ದಿದೆ.

ರಾಜ್ಯ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ಭಿನ್ನಮತ ಸ್ಪೋಟವಾಗಿದೆ. ತಮಗೆ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಕೋಲಾರ ಜಿಲ್ಲೆಯ ಬಂಗಾರಪೇಟೆ ವಿಧಾನಸಭಾ ಕ್ಷೇತ್ರದ ಹಿರಿಯ ಕಾಂಗ್ರೆಸ್ ಶಾಸಕ ಎಸ್.ಎನ್.ನಾರಾಯಣಸ್ವಾಮಿ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನವರನ್ನು ದೂಷಿಶಿಸಿದ್ದಾರೆ. ಅವರಿಬ್ಬರೂ ನನಗೆ ಮೋಸ ಮಾಡಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ನಂಬಿದ್ದೆ ನಮಗೆ ಮುಳುವಾಗಿಯಿತು. ಅವರ ಬಗ್ಗೆ ಅಪಾರವಾದ ವಿಶ್ವಾಸವಿತ್ತು. ಮುಖ್ಯಮಂತ್ರಿಗಳಾಗಿದ್ದಾಗಲೂ ಸಚಿವ ಸ್ಥಾನ ನೀಡಿಲ್ಲ ಎಂದು ಎಸ್.ಎನ್.ನಾರಾಯಣಸ್ವಾಮಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಇಂಗಿತ ವ್ಯಕ್ತಪಡಿಸಿದ್ದಾರೆ.

ಕಳೆದ ೩೫ ವರ್ಷಗಳಿಂದ ಪಕ್ಷಕ್ಕಾಗಿ ದುಡಿದಿದ್ದೇನೆ. ಕಳೆದ ೩೫ ವರ್ಷಗಳಿಂದ ಪಕ್ಷಕ್ಕಾಗಿ ಪ್ರಾಮಾಣಿಕವಾಗಿ ದುಡಿಯುತ್ತಾ ಸಂಘಟನೆ ಮಾಡಿದ್ದೇನೆ. ಆದರೆ ಕಾಂಗ್ರೆಸ ಪಕ್ಷ ತಮಗೆ ಸಚಿವ ಸ್ಥಾನ ನೀಡದೆ ದ್ರೋಹ ಮಾಡಿದೆ. ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳೆಂದರೆ ಕಾಂಗ್ರೆಸ್ ಹೈಕಮಾಂಡ್ಗೆ ತೀವ್ರ ನಿರ್ಲಕ್ಷö್ಯ ಮಾಡಿದೆ. ಈ ಎರಡು ಜಿಲ್ಲೆಗಳು ಸರ್ಕಾರಕ್ಕೆ ಅಗತ್ಯವಿಲ್ಲ ಎಂಬಂತೆ ನಾಯಕರು ವರ್ತಿಸುತ್ತಿದ್ದಾರೆ. ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಗಳು ಕೋಲಾರ ಜಿಲ್ಲೆಯ ಜನರಿಗೆ ಮೋಸ ಮಾಡಿದ್ದಾರೆ ಎಂದು ನಾರಾಯಣಸ್ವಾಮಿ ಪಕ್ಷದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಲ್ಲದೆ ಆಹಾರ ಮತ್ತು ನಾಗರೀಕ ಪೂರೈಕೆ ಸಚಿವ ಕೆ.ಎಚ್.ಮುನಿಯಪ್ಪ ರವರ ಪುತ್ರಿ ರೂಪ ಶಶಿಧರ್ ವಿರುದ್ಧ ಸಹ ಆಕ್ರೋಶ ಹೊರಹಾಕಿದ್ದಾರೆ. ಕೋಲಾರ ಜಿಲ್ಲೆಗೆ ಸಚಿವ ಸ್ಥಾನ ತಪ್ಪಿಸಲು ಅಪ್ಪ ಮತ್ತು ಮಗಳು ಹೈ ಕಮಾಂಡ್ ಮೇಲೆ ಒತ್ತಡ ಏರಿದ್ದಾರೆ ಎಂಬ ಮಾಹಿತಿ ದೊರೆತಿದೆ. ಮುನಿಯಪ್ಪನವರಿಗಾಗಿ ಏಳು ಚುನಾವಣೆಗಳಲ್ಲಿ ನಾನು ಕೆಲಸ ಮಾಡಿದ್ದೇನೆ. ಮಂಗಳವಾರ ಬೆಂಬಲಿಗರು ಮತ್ತು ಮುಖಂಡರ ಸಭೆ ನಡೆಸಿ ಮುಂದಿನ ನಿರ್ಧಾರ ತೆಗೆದುಕೊಳ್ಳುವುದಾಗಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್


 rajesh pande