
ಕೋಲಾರ,ಆ.೦೩ (ಹಿ.ಸ.):
ಆ್ಯಂಕರ್: ಪ್ರಸಕ್ತ ಸಾಲಿನ ಒಕ್ಕಲಿಗ ಸಮುದಾಯದ ಪ್ರತಿಭಾವಂತ ಎಸ್.ಎಸ್.ಎಲ್.ಸಿ ಯಲ್ಲಿ ಶೇ ೯೫% ಮತ್ತು ಪಿಯುಸಿ ಯಲ್ಲಿ ಶೇ ೯೫% ಕ್ಕಿಂತ ಅಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರಕ್ಕೆ ಕೋಲಾರ ಜಿಲ್ಲಾ ಒಕ್ಕಲಿಗರ ಸಂಘದಿ0ದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಹ ವಿದ್ಯಾರ್ಥಿಗಳು ಒಕ್ಕಲಿಗರ ಸಂಘದ ಕಚೇರಿಯಲ್ಲಿ ಅರ್ಜಿ ಪಡೆದು ಅಂಕಪಟ್ಟಿ ಪ್ರತಿ, ಜಾತಿ ಪ್ರಮಾಣ ಪತ್ರ ಮತ್ತು ಎರಡು ಭಾವಚಿತ್ರದೊಂದಿಗೆ ೧೫-೦೮-೨೦೨೬ ದಿನಾಂಕ ಅರ್ಜಿಗಳನ್ನು ಸಲ್ಲಿಸಬೇಕೆಂದು ಸಂಘವು ಕೋರಿದೆ.
ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್