ಸಚಿವ ಸಂಪುಟ ವಿಸ್ತರಣೆಗೆ ಎಐಸಿಸಿ ಅಧಿಕೃತ ಅನುಮೋದನೆ;ಇಂದು ಸಂಜೆ ನೂತನ ಸಚಿವರ ಪ್ರಮಾಣ ವಚನ
ಬೆಂಗಳೂರು, 03 ಆಗಸ್ಟ್ (ಹಿ.ಸ.): ಆ್ಯಂಕರ್: ರಾಜ್ಯ ಸರ್ಕಾರದ ಸಚಿವ ಸಂಪುಟ ವಿಸ್ತರಣೆಗೆ ಕಾಂಗ್ರೆಸ್ ಹೈಕಮಾಂಡ್ ಅಧಿಕೃತ ಅನುಮೋದನೆ ನೀಡಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಅಧಿಕೃತ ಪಟ್ಟಿ ರವಾನಿಸಿದ್ದು, ನೂತನ ಸಚಿವರು ಇಂದು ಸಂ
ನೂತನ ಸಚಿವರ ಪಟ್ಟಿ


ಬೆಂಗಳೂರು, 03 ಆಗಸ್ಟ್ (ಹಿ.ಸ.):

ಆ್ಯಂಕರ್:

ರಾಜ್ಯ ಸರ್ಕಾರದ ಸಚಿವ ಸಂಪುಟ ವಿಸ್ತರಣೆಗೆ ಕಾಂಗ್ರೆಸ್ ಹೈಕಮಾಂಡ್ ಅಧಿಕೃತ ಅನುಮೋದನೆ ನೀಡಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಅಧಿಕೃತ ಪಟ್ಟಿ ರವಾನಿಸಿದ್ದು, ನೂತನ ಸಚಿವರು ಇಂದು ಸಂಜೆ ೪ ಗಂಟೆಗೆ ಲೋಕಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಸಚಿವ ಸಂಪುಟಕ್ಕೆ ಪಿ.ಎಂ. ನರೇಂದ್ರಸ್ವಾಮಿ, ಶಿವರಾಜ್ ತಂಗಡಗಿ, ರುದ್ರಪ್ಪ ಲಮಾಣಿ, ಕೆ.ಎಸ್. ಬಸವಂತಪ್ಪ, ಬಿ. ನಾಗೇಂದ್ರ, ಟಿ. ರಘುಮೂರ್ತಿ, ಬಿ.ಜೆ. ಜಮೀರ್ ಅಹ್ಮದ್ ಖಾನ್, ರಿಜ್ವಾನ್ ಅರ್ಷದ್, ಸಂತೋಷ್ ಲಾಡ್, ಮಧು ಬಂಗಾರಪ್ಪ, ಪುತ್ತರಂಗಶೆಟ್ಟಿ, ಮಂಕಾಳ ವೈದ್ಯ, ಡಾ. ಅಜಯ್ ಸಿಂಗ್, ಎನ್. ಚಲುವರಾಯಸ್ವಾಮಿ, ಕೆ.ಎಂ. ಶಿವಲಿಂಗೇಗೌಡ, ಎಚ್.ಸಿ. ಬಾಲಕೃಷ್ಣ, ಗಾಯತ್ರಿ ಶಾಂತೇಗೌಡ, ಬಸವರಾಜ್ ರಾಯರೆಡ್ಡಿ, ವಿಜಯಾನಂದ ಕಾಶಪ್ಪನವರ್ ಹಾಗೂ ಲಕ್ಷ್ಮಣ ಸವದಿ ಅವರ ಹೆಸರುಗಳಿಗೆ ಅನುಮೋದನೆ ನೀಡಲಾಗಿದೆ.

ಇದೇ ವೇಳೆ, ವಿಧಾನಸಭೆಯ ಸಭಾಧ್ಯಕ್ಷರಾಗಿ ಜಿ.ಎಸ್. ಪಾಟೀಲ, ಉಪಸಭಾಧ್ಯಕ್ಷರಾಗಿ ಎ.ಎಸ್. ಪೊನ್ನಣ್ಣ, ವಿಧಾನ ಪರಿಷತ್ ಸಭಾಪತಿಯಾಗಿ ಸಲೀಂ ಅಹ್ಮದ್ ಹಾಗೂ ಉಪಸಭಾಪತಿಯಾಗಿ ಉಮಾಶ್ರೀ ಅವರ ನೇಮಕಕ್ಕೂ ಕಾಂಗ್ರೆಸ್ ಅಧ್ಯಕ್ಷರು ಅನುಮೋದನೆ ನೀಡಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande