
ನವದೆಹಲಿ, 03 ಆಗಸ್ಟ್ (ಹಿ.ಸ.):
ಆ್ಯಂಕರ್:ರಾಮಮಂದಿರದಲ್ಲಿ ದೇಣಿಗೆ ದುರ್ಬಳಕೆ ನಡೆದಿದೆ ಎಂಬ ಆರೋಪ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಸಂಸತ್ತಿನಲ್ಲಿ ಹಾಜರಾಗುತ್ತಿಲ್ಲ ಎಂದು ಆರೋಪಿಸಿ ಪ್ರತಿಪಕ್ಷ ಸಂಸದರು ಸಂಸತ್ ಆವರಣದಲ್ಲಿ ಪ್ರತಿಭಟನೆ ನಡೆಸಿದರು.
ಈ ಕುರಿತು ಕಾಂಗ್ರೆಸ್ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರಕಟಿಸಿದ ಹೇಳಿಕೆಯಲ್ಲಿ, ವಿದ್ಯಾರ್ಥಿಗಳ ಮೇಲಿನ ಪೊಲೀಸ್ ಕ್ರಮ ಮತ್ತು ರಾಮಮಂದಿರದ ದೇಣಿಗೆ ದುರ್ಬಳಕೆ ಆರೋಪಗಳ ಬಗ್ಗೆ ದೇಶದ ಜನರು ಉತ್ತರ ಕೇಳುತ್ತಿದ್ದಾರೆ ಎಂದು ತಿಳಿಸಿದೆ.
ವಿದ್ಯಾರ್ಥಿಗಳ ಮೇಲೆ ಬಲಪ್ರಯೋಗಕ್ಕೆ ಆದೇಶ ನೀಡಿದವರು ಯಾರು ಎಂಬುದನ್ನು ಸರ್ಕಾರ ಸ್ಪಷ್ಟಪಡಿಸಬೇಕು. ಬಿಜೆಪಿ ಉತ್ತರದಾಯಿತ್ವದಿಂದ ತಪ್ಪಿಸಿಕೊಳ್ಳಲು ಯತ್ನಿಸಿದರೂ ಸರ್ಕಾರ ಜನರಿಗೆ ಉತ್ತರ ನೀಡಲೇಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.