ರಾಜ್ಯಸಭೆಯಲ್ಲಿ ಪ್ರತಿಪಕ್ಷಗಳ ಗದ್ದಲ: ಕಲಾಪ ಮಧ್ಯಾಹ್ನ 2 ಗಂಟೆಯವರೆಗೆ ಮುಂದೂಡಿಕೆ
ನವದೆಹಲಿ, 03ಆಗಸ್ಟ್ (ಹಿ.ಸ.): ಆ್ಯಂಕರ್: ಸಂಸತ್ತಿನ ಮಳೆಗಾಲ ಅಧಿವೇಶನದ ವೇಳೆ ಸೋಮವಾರ ರಾಜ್ಯಸಭೆಯಲ್ಲಿ ಪ್ರತಿಪಕ್ಷ ಸದಸ್ಯರು ಕೇಂದ್ರ ಗೃಹ ಸಚಿವ ಅಮಿತ್ ಶಾ ಸದನದಲ್ಲಿ ಹಾಜರಾಗಬೇಕು ಎಂದು ಒತ್ತಾಯಿಸಿ ಗದ್ದಲ ನಡೆಸಿದ ಹಿನ್ನೆಲೆಯಲ್ಲಿ ಸಭಾಪತಿ ಸಿ.ಪಿ. ರಾಧಾಕೃಷ್ಣನ್ ಕಲಾಪವನ್ನು ಮಧ್ಯಾಹ್ನ 2 ಗಂಟೆಯವ
राज्यसभा के सभापति सीपी राधाकृष्णन


ನವದೆಹಲಿ, 03ಆಗಸ್ಟ್ (ಹಿ.ಸ.):

ಆ್ಯಂಕರ್:

ಸಂಸತ್ತಿನ ಮಳೆಗಾಲ ಅಧಿವೇಶನದ ವೇಳೆ ಸೋಮವಾರ ರಾಜ್ಯಸಭೆಯಲ್ಲಿ ಪ್ರತಿಪಕ್ಷ ಸದಸ್ಯರು ಕೇಂದ್ರ ಗೃಹ ಸಚಿವ ಅಮಿತ್ ಶಾ ಸದನದಲ್ಲಿ ಹಾಜರಾಗಬೇಕು ಎಂದು ಒತ್ತಾಯಿಸಿ ಗದ್ದಲ ನಡೆಸಿದ ಹಿನ್ನೆಲೆಯಲ್ಲಿ ಸಭಾಪತಿ ಸಿ.ಪಿ. ರಾಧಾಕೃಷ್ಣನ್ ಕಲಾಪವನ್ನು ಮಧ್ಯಾಹ್ನ 2 ಗಂಟೆಯವರೆಗೆ ಮುಂದೂಡಿದರು.

ಕಲಾಪ ಆರಂಭದಲ್ಲಿ ಗ್ಲಾಸ್ಗೋ 2026 ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತ 39 ಪದಕಗಳನ್ನು ಗೆದ್ದು ನಾಲ್ಕನೇ ಸ್ಥಾನ ಪಡೆದಿರುವ ಸಾಧನೆಗೆ ಸಭಾಪತಿ ಅಭಿನಂದನೆ ಸಲ್ಲಿಸಿದರು. ಪ್ಯಾರಾಲಿಂಪಿಕ್ ಕ್ರೀಡಾಪಟುಗಳೂ ಏಳು ಪದಕಗಳನ್ನು ಗೆದ್ದು ದೇಶದ ಕೀರ್ತಿ ಹೆಚ್ಚಿಸಿದ್ದಾರೆ ಎಂದು ಶ್ಲಾಘಿಸಿದರು.

ಬಳಿಕ ಶಾಸನ ಕಾರ್ಯ ಆರಂಭವಾಗುತ್ತಿದ್ದಂತೆ ಪ್ರತಿಪಕ್ಷ ಸದಸ್ಯರು ಗೃಹ ಸಚಿವರ ಹಾಜರಾತಿಯನ್ನು ಆಗ್ರಹಿಸಿ ಗದ್ದಲ ನಡೆಸಿದರು. ಶೂನ್ಯ ವೇಳೆಯಲ್ಲಿ ಕೆಲವು ಸದಸ್ಯರು ಸ್ಲೀಪ್ ಅಪ್ನಿಯಾ, ಬಾವಿಗಳ ಸಂರಕ್ಷಣೆ ಸೇರಿದಂತೆ ವಿವಿಧ ಸಾರ್ವಜನಿಕ ವಿಷಯಗಳನ್ನು ಪ್ರಸ್ತಾಪಿಸಿದರೂ ಗದ್ದಲ ಮುಂದುವರಿದ ಕಾರಣ ಕಲಾಪವನ್ನು ಮುಂದೂಡಲಾಯಿತು.

ಮಧ್ಯಾಹ್ನ 2 ಗಂಟೆಯ ನಂತರ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಅಭಿವೃದ್ಧಿ (ತಿದ್ದುಪಡಿ) ಮಸೂದೆ–2026ನ್ನು ರಾಜ್ಯಸಭೆಯಲ್ಲಿ ಮಂಡಿಸಿ ಅಂಗೀಕರಿಸುವ ಸಾಧ್ಯತೆ ಇದೆ. ಈ ತಿದ್ದುಪಡಿ ಪ್ರಕಾರ, ಎಂಎಸ್‌ಎಂಇ ಪೂರೈಕೆದಾರರಿಗೆ ಸಂಬಂಧಿಸಿದ ಅರ್ಜಿ ಆರು ತಿಂಗಳಿಗಿಂತ ಹೆಚ್ಚು ಕಾಲ ನ್ಯಾಯಾಲಯದಲ್ಲಿ ಬಾಕಿ ಉಳಿದರೆ, ನ್ಯಾಯಾಲಯವು ನೀಡಲಾದ ಪರಿಹಾರದ ಮೊತ್ತದ ಕನಿಷ್ಠ ಶೇ.50ರಷ್ಟು ಹಣ ಪಾವತಿಸಲು ಆದೇಶ ನೀಡಬಹುದಾಗಿದೆ.

--------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande