ಪ್ರಧಾನಿ ಮೋದಿ ಜನ್ಮದಿನ: ಸೆ.17ರಿಂದ ಸೇವಾ ಸಂಕಲ್ಪ ಅಭಿಯಾನ
ಬೆಂಗಳೂರು, 30 ಆಗಸ್ಟ್ (ಹಿ.ಸ.): ಆ್ಯಂಕರ್:ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ಸೆಪ್ಟೆಂಬರ್ 17ರಿಂದ ಅಕ್ಟೋಬರ್ 17ರವರೆಗೆ ‘ಸೇವಾ ಸಂಕಲ್ಪ ಅಭಿಯಾನ’ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದರು. ಅಭಿಯಾನದ ಅಂಗವಾಗಿ ನಡೆಯಲಿರುವ ವಿವಿಧ ಸಮಾಜಮುಖಿ
ಕಾರ್ಯಾಗಾರದಲ್ಲಿ ಮಾತನಾಡಿದ ವಿಜಯೇಂದ್ರ


ಬೆಂಗಳೂರು, 30 ಆಗಸ್ಟ್ (ಹಿ.ಸ.):

ಆ್ಯಂಕರ್:ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ಸೆಪ್ಟೆಂಬರ್ 17ರಿಂದ ಅಕ್ಟೋಬರ್ 17ರವರೆಗೆ ‘ಸೇವಾ ಸಂಕಲ್ಪ ಅಭಿಯಾನ’ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದರು.

ಅಭಿಯಾನದ ಅಂಗವಾಗಿ ನಡೆಯಲಿರುವ ವಿವಿಧ ಸಮಾಜಮುಖಿ ಹಾಗೂ ಜನಸೇವಾ ಕಾರ್ಯಕ್ರಮಗಳ ಕುರಿತು ಕಾರ್ಯಾಗಾರವನ್ನು ಭಾನುವಾರ ಉದ್ಘಾಟಿಸಲಾಯಿತು. ಜನಸೇವೆ, ಸುಶಾಸನ ಹಾಗೂ ರಾಷ್ಟ್ರದ ಪ್ರಗತಿಗೆ ಪ್ರಧಾನಿ ಮೋದಿ ಅವರ ಕೊಡುಗೆ ಕಾರ್ಯಕರ್ತರಿಗೆ ಪ್ರೇರಣೆಯಾಗಿದೆ. ಅವರ ಸೇವಾ ಮನೋಭಾವವನ್ನು ಜನರಿಗೆ ತಲುಪಿಸುವುದು ಅಭಿಯಾನದ ಉದ್ದೇಶವಾಗಿದೆ ಎಂದು ವಿಜಯೇಂದ್ರ ಹೇಳಿದರು.

ಮಹಾರಾಷ್ಟ್ರದ ಐಟಿ, ಬಿಟಿ ಸಚಿವ ಆಶೀಷ್ ಶೆಲಾರ್, ರಾಜ್ಯ ಸಹ ಉಸ್ತುವಾರಿ ಸುಧಾಕರ್ ರೆಡ್ಡಿ, ಶಾಸಕರಾದ ಡಾ. ಅಶ್ವತ್ಥನಾರಾಯಣ, ಶೈಲೇಂದ್ರ ಬೆಲ್ದಾಳೆ, ಧೀರಜ್ ಮುನಿರಾಜು, ಪ್ರಧಾನ ಕಾರ್ಯದರ್ಶಿ ನಂದೀಶ್ ರೆಡ್ಡಿ, ರಾಜ್ಯ ಕಾರ್ಯದರ್ಶಿ ಅಂಬಿಕಾ ಹುಲಿನಾಯ್ಕರ್ ಸೇರಿದಂತೆ ವಿವಿಧ ಜಿಲ್ಲಾಧ್ಯಕ್ಷರು ಹಾಗೂ ಹಿರಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

‘ಸೇವೆಯೇ ಪರಮ ಧರ್ಮ’ ಎಂಬ ತತ್ವದಡಿ ಸಮಾಜಮುಖಿ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸಲು ಪಕ್ಷದ ಕಾರ್ಯಕರ್ತರು ಸಂಪೂರ್ಣ ಬದ್ಧತೆಯಿಂದ ಕಾರ್ಯನಿರ್ವಹಿಸಲಿದ್ದಾರೆ ಎಂದು ವಿಜಯೇಂದ್ರ ತಿಳಿಸಿದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande