
ಬೆಂಗಳೂರು, 30 ಆಗಸ್ಟ್ (ಹಿ.ಸ.):
ಆ್ಯಂಕರ್:
ಗೃಹಲಕ್ಷ್ಮಿ ಯೋಜನೆ ಯಶಸ್ವಿಯಾಗಿ ಮೂರು ವರ್ಷಗಳನ್ನು ಪೂರೈಸಿದ್ದು, ನಾಡಿನ 1.2 ಕೋಟಿಗೂ ಅಧಿಕ ಮಹಿಳೆಯರಿಗೆ ಆರ್ಥಿಕ ಭದ್ರತೆಯ ಆಸರೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಯೋಜನೆಯಡಿ ಇದುವರೆಗೆ ₹76,500 ಕೋಟಿಗೂ ಅಧಿಕ ನೆರವನ್ನು ಮಹಿಳೆಯರಿಗೆ ನೀಡಲಾಗಿದೆ. ಗೃಹಲಕ್ಷ್ಮಿ ಯೋಜನೆಯು ಮಹಿಳೆಯರ ಸಬಲೀಕರಣಕ್ಕೆ ಮಹತ್ವದ ಕೊಡುಗೆ ನೀಡಿದ್ದು, ಪ್ರತಿಯೊಂದು ಮನೆಯಲ್ಲೂ ಸಂತಸದ ವಾತಾವರಣ ಮೂಡಿಸಿದೆ ಎಂದು ಅವರು ಎಕ್ಸ್‌ನಲ್ಲಿ ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.