ಹುಲಸೂರನ್ನು ಬರಗಾಲ ಪೀಡಿತ ತಾಲೂಕು ಘೋಷಿಸದಿದ್ದರೆ ವಿಧಾನಸೌಧದ ಎದುರು ಅರೆಬೆತ್ತಲೆ ಪ್ರತಿಭಟನೆ: ಶಾಸಕ ಶರಣು ಸಲಗಾರ ಎಚ್ಚರಿಕೆ
ಬೀದರ್, 30 ಆಗಸ್ಟ್ (ಹಿ.ಸ.) ಆ್ಯಂಕರ್: ಹುಲಸೂರ ತಾಲೂಕನ್ನು ತಕ್ಷಣ ಬರಗಾಲ ಪೀಡಿತ ತಾಲೂಕು ಎಂದು ಘೋಷಿಸದಿದ್ದರೆ ಬೆಂಗಳೂರಿನ ವಿಧಾನಸೌಧದ ಎದುರು ಅರೆಬೆತ್ತಲೆ ಪ್ರತಿಭಟನೆ ನಡೆಸುವುದಾಗಿ ಬಸವಕಲ್ಯಾಣ ಶಾಸಕ ಶರಣು ಸಲಗಾರ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಕಾಂಗ್ರೆಸ್ ಸರ್ಕಾರದ ವಿರುದ್ಧ
hulasur-drought-hit-taluka-declaration-demand-sharan-salgar-protest-warning


ಬೀದರ್, 30 ಆಗಸ್ಟ್ (ಹಿ.ಸ.)

ಆ್ಯಂಕರ್:

ಹುಲಸೂರ ತಾಲೂಕನ್ನು ತಕ್ಷಣ ಬರಗಾಲ ಪೀಡಿತ ತಾಲೂಕು ಎಂದು ಘೋಷಿಸದಿದ್ದರೆ ಬೆಂಗಳೂರಿನ ವಿಧಾನಸೌಧದ ಎದುರು ಅರೆಬೆತ್ತಲೆ ಪ್ರತಿಭಟನೆ ನಡೆಸುವುದಾಗಿ ಬಸವಕಲ್ಯಾಣ ಶಾಸಕ ಶರಣು ಸಲಗಾರ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಶಾಸಕ ಶರಣು ಸಲಗಾರ, ಹುಲಸೂರ ತಾಲೂಕಿನ ರೈತರು ಬರದ ಸಂಕಷ್ಟದಿಂದ ತೀವ್ರವಾಗಿ ನಲುಗುತ್ತಿದ್ದರೂ ಸರ್ಕಾರ ತಾಲೂಕಿನ ವಾಸ್ತವ ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ ಎಂದು ಆರೋಪಿಸಿದರು.

ಹುಲಸೂರ ತಾಲೂಕನ್ನು ಬರಗಾಲ ಪಟ್ಟಿಗೆ ಸೇರಿಸುವಲ್ಲಿ ಸರ್ಕಾರ ವಿಳಂಬ ಮಾಡುತ್ತಿರುವುದು ರೈತರಿಗೆ ಅನ್ಯಾಯ ಮಾಡಿದಂತಾಗಿದೆ. ರೈತರ ಸಂಕಷ್ಟವನ್ನು ಸರ್ಕಾರ ಕೂಡಲೇ ಅರಿತು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.ರೈತರಿಗೆ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ತಾವು ನಿರಂತರ ಹೋರಾಟ ನಡೆಸುವುದಾಗಿ ತಿಳಿಸಿದ ಸಲಗಾರ, ಹುಲಸೂರನ್ನು ತಕ್ಷಣ ಬರಗಾಲ ಪೀಡಿತ ತಾಲೂಕು ಎಂದು ಘೋಷಿಸಬೇಕು. ಇಲ್ಲವಾದರೆ ಬೆಂಗಳೂರಿನಲ್ಲಿ ವಿಧಾನಸೌಧದ ಎದುರು ಅರೆಬೆತ್ತಲೆ ಪ್ರತಿಭಟನೆ ನಡೆಸಲಾಗುವುದು ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ರೈತರ ಸಮಸ್ಯೆ ಪರಿಹಾರವಾಗದಿದ್ದರೆ ಸರ್ಕಾರದ ವಿರುದ್ಧ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದು ಬಿಜೆಪಿ ಶಾಸಕ ಶರಣು ಸಲಗಾರ ಗುಡುಗಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande