
ಬೆಂಗಳೂರು, 31 ಆಗಸ್ಟ್ (ಹಿ.ಸ.):
ಆ್ಯಂಕರ್:
ನಗರದ ಕೋರಮಂಗಲದಲ್ಲಿರುವ ರೈಲ್ವೆ ಟಿಕೆಟ್ ಕಾಯ್ದಿರಿಸುವ ಕೇಂದ್ರವನ್ನು ವಾಣಿಜ್ಯ ಸಂಕೀರ್ಣದ ಪುನರಾಭಿವೃದ್ಧಿ ಕಾಮಗಾರಿಯ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 1ರಿಂದ ಮುಚ್ಚಲಾಗುವುದು ಎಂದು ನೈಋತ್ಯ ರೈಲ್ವೆ ತಿಳಿಸಿದೆ.
ಕೋರಮಂಗಲದ ಬಿಡಿಎ ಶಾಪಿಂಗ್ ಕಾಂಪ್ಲೆಕ್ಸ್‌ನ ಮೊದಲ ಮಹಡಿಯ ಹಾಲ್ ಸಂಖ್ಯೆ 1ರಲ್ಲಿ ಈ ಟಿಕೆಟ್ ಕಾಯ್ದಿರಿಸುವ ಕೇಂದ್ರ ಕಾರ್ಯನಿರ್ವಹಿಸುತ್ತಿತ್ತು. ಪುನರಾಭಿವೃದ್ಧಿ ಕಾಮಗಾರಿ ಹಿನ್ನೆಲೆಯಲ್ಲಿ ಕೇಂದ್ರವನ್ನು ಮುಚ್ಚಲಾಗುತ್ತಿದ್ದು, ಮುಂದಿನ ಸೂಚನೆವರೆಗೆ ಪ್ರಯಾಣಿಕರು ಇಲ್ಲಿಂದ ಟಿಕೆಟ್ ಕಾಯ್ದಿರಿಸಲು ಸಾಧ್ಯವಾಗುವುದಿಲ್ಲ.
ಪ್ರಯಾಣಿಕರು ನಗರದ ಇತರ ಗಣಕೀಕೃತ ರೈಲ್ವೆ ಟಿಕೆಟ್ ಕಾಯ್ದಿರಿಸುವ ಕೇಂದ್ರಗಳ ಸೌಲಭ್ಯವನ್ನು ಬಳಸಿಕೊಳ್ಳಬೇಕು. ಆನ್‌ಲೈನ್ ಮೂಲಕವೂ ರೈಲು ಟಿಕೆಟ್ ಕಾಯ್ದಿರಿಸಬಹುದಾಗಿದೆ ಎಂದು ನೈಋತ್ಯ ರೈಲ್ವೆ ಸಾರ್ವಜನಿಕ ಸಂಪರ್ಕ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.
ಕೇಂದ್ರ ಬಂದ್‌ನಿಂದ ಪ್ರಯಾಣಿಕರಿಗೆ ಉಂಟಾಗುವ ಅನಾನುಕೂಲತೆಗೆ ನೈಋತ್ಯ ರೈಲ್ವೆ ವಿಷಾದ ವ್ಯಕ್ತಪಡಿಸಿದೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.