ಬೆಂಗಳೂರಿನಲ್ಲಿ ಬಿಎಚ್ಇಎಲ್ ಕಾರ್ಮಿಕರ ಸಭೆ
ಸಂಸ್ಥೆಯ ಪ್ರಗತಿಗೆ ಶ್ರಮಿಸುವಂತೆ ಕರೆ
bengaluru-bhel-workers-commit-to-organisational-growth-and-viksit-bharat-2047


ಬೆಂಗಳೂರು, 31 ಆಗಸ್ಟ್ (ಹಿ.ಸ.)

ಆ್ಯಂಕರ್:

ಬೆಂಗಳೂರಿನ ಬಿಎಚ್ಇಎಲ್ ಘಟಕದ ಕಾರ್ಮಿಕರೊಂದಿಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸಭೆ ನಡೆಸಿದರು. ಸಭೆಯಲ್ಲಿ ಸಂಸ್ಥೆಯ ಅಭಿವೃದ್ಧಿ ಹಾಗೂ ರಾಷ್ಟ್ರ ನಿರ್ಮಾಣದಲ್ಲಿ ಬಿಎಚ್ಇಎಲ್ ವಹಿಸುತ್ತಿರುವ ಪ್ರಮುಖ ಪಾತ್ರದ ಕುರಿತು ಚರ್ಚಿಸಲಾಯಿತು.

ಸಂಸ್ಥೆಯ ಪ್ರಗತಿಗಾಗಿ ಕಾರ್ಮಿಕರು ಸಮರ್ಪಣಾ ಮನೋಭಾವದಿಂದ ಕಾರ್ಯನಿರ್ವಹಿಸಬೇಕು ಎಂದು ಕರೆ ನೀಡಿದರು. ಇದೇ ವೇಳೆ, ಪ್ರಧಾನಿ ನರೇಂದ್ರ ಮೋದಿ ಅವರ ‘ಮೇಕ್ ಇನ್ ಇಂಡಿಯಾ’ ಹಾಗೂ ‘ಆತ್ಮನಿರ್ಭರ ಭಾರತ’ ಕಾರ್ಯಕ್ರಮಗಳ ಆಶಯದಂತೆ ದೇಶದ ಅಭಿವೃದ್ಧಿಗೆ ಕೊಡುಗೆ ನೀಡುವ ಸಂಕಲ್ಪವನ್ನು ಕಾರ್ಮಿಕರು ವ್ಯಕ್ತಪಡಿಸಿದರು.

‘ವಿಕಸಿತ ಭಾರತ–2047’ ಗುರಿ ಸಾಕಾರಗೊಳಿಸುವ ನಿಟ್ಟಿನಲ್ಲಿ ಸಂಸ್ಥೆಯ ಅಭಿವೃದ್ಧಿಗೆ ನಿರಂತರವಾಗಿ ಶ್ರಮಿಸುವುದಾಗಿ ಬಿಎಚ್ಇಎಲ್ ಕಾರ್ಮಿಕರು ಭರವಸೆ ನೀಡಿದರು.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande