ಸರ್ಕಾರಿ ಶಾಲೆಗಳಲ್ಲಿ 61 ಸಾವಿರ ಶಿಕ್ಷಕರ ಹುದ್ದೆ ಖಾಲಿ: ಸರ್ಕಾರದ ವಿರುದ್ಧ ಆರ್.ಅಶೋಕ ವಾಗ್ದಾಳಿ
ಬೆಂಗಳೂರು, 31 ಆಗಸ್ಟ್ (ಹಿ.ಸ.): ಆ್ಯಂಕರ್: ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ವಿಚಾರವಾಗಿ ಪ್ರತಿಪಕ್ಷ ನಾಯಕ ಆರ್.ಅಶೋಕ ಅವರು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ‘‘ನಾನು
ಅಶೋಕ ಸಂಗ್ರಹ ಚಿತ್ರ


ಬೆಂಗಳೂರು, 31 ಆಗಸ್ಟ್ (ಹಿ.ಸ.):

ಆ್ಯಂಕರ್:

ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ವಿಚಾರವಾಗಿ ಪ್ರತಿಪಕ್ಷ ನಾಯಕ ಆರ್.ಅಶೋಕ ಅವರು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ‘‘ನಾನು ಆಯ್ಕೆಯಿಂದ ಶಿಕ್ಷಣತಜ್ಞ’’ ಎಂದು ಹೇಳಿಕೊಳ್ಳುವ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸರ್ಕಾರಿ ಶಾಲೆಗಳ ಸ್ಥಿತಿಗತಿಗಳ ಬಗ್ಗೆ ಒಮ್ಮೆಯಾದರೂ ಗಮನ ಹರಿಸಿದ್ದಾರೆಯೇ ಎಂದು ಪ್ರಶ್ನಿಸಿದ್ದಾರೆ.

ರಾಜ್ಯದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಸುಮಾರು 61 ಸಾವಿರ ಶಿಕ್ಷಕರ ಹುದ್ದೆಗಳು ಖಾಲಿ ಇದ್ದು, ಸರ್ಕಾರ ಕೇವಲ 15 ಸಾವಿರ ಹುದ್ದೆಗಳನ್ನು ಭರ್ತಿ ಮಾಡಲು ಮುಂದಾಗಿದೆ. ಉಳಿದ 46 ಸಾವಿರ ಹುದ್ದೆಗಳನ್ನು ಖಾಲಿ ಉಳಿಸುವ ಮೂಲಕ ಲಕ್ಷಾಂತರ ಬಡ ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯವನ್ನು ಕತ್ತಲೆಗೆ ತಳ್ಳಲಾಗುತ್ತಿದೆ ಎಂದು ಅಶೋಕ ಆರೋಪಿಸಿದ್ದಾರೆ.

ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಉಂಟುಮಾಡಿ, ಬಡ ಮತ್ತು ಮಧ್ಯಮ ವರ್ಗದ ಪೋಷಕರು ಅನಿವಾರ್ಯವಾಗಿ ಖಾಸಗಿ ಶಾಲೆಗಳಿಗೆ ತೆರಳಿ ಹೆಚ್ಚಿನ ಶುಲ್ಕ ಹಾಗೂ ದೇಣಿಗೆ ಪಾವತಿಸುವ ಪರಿಸ್ಥಿತಿ ನಿರ್ಮಿಸಲಾಗುತ್ತಿದೆ. ಇದು ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಸರ್ಕಾರ ನೀಡುತ್ತಿರುವ ಬೆಂಬಲವೇ ಎಂದು ಅವರು ಪ್ರಶ್ನಿಸಿದ್ದಾರೆ.

ಬಡ ಮಕ್ಕಳ ಶಿಕ್ಷಣಕ್ಕೆ ತೊಂದರೆ ಉಂಟುಮಾಡುತ್ತಿರುವ ಕಾಂಗ್ರೆಸ್ ಸರ್ಕಾರಕ್ಕೆ ಜನರು ತಕ್ಕ ಪಾಠ ಕಲಿಸಲಿದ್ದಾರೆ ಎಂದು ಎಚ್ಚರಿಸಿರುವ ಅಶೋಕ, ರಾಜ್ಯದಲ್ಲಿರುವ ಎಲ್ಲಾ 61 ಸಾವಿರ ಖಾಲಿ ಶಿಕ್ಷಕರ ಹುದ್ದೆಗಳನ್ನು ತಕ್ಷಣ ಭರ್ತಿ ಮಾಡಬೇಕು. ಇಲ್ಲದಿದ್ದರೆ ಬಿಜೆಪಿ ರಾಜ್ಯಾದ್ಯಂತ ಬೃಹತ್ ಹೋರಾಟ ನಡೆಸಲಿದೆ ಎಂದು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande