ಯುವನಿಧಿ ಯೋಜನೆಗೆ ಅರ್ಜಿ ಆಹ್ವಾನ
ಗದಗ, 04 ಆಗಸ್ಟ್ (ಹಿ.ಸ.) ಆ್ಯಂಕರ್:- ಕರ್ನಾಟಕ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಪೈಕಿ ಪ್ರಮುಖ ಯೋಜನೆಯಾದ ಯುವನಿಧಿ ಯೋಜನೆಗೆ ಅರ್ಹ ಅಭ್ಯರ್ಥಿಗಳು ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಿ ಯೋಜನೆಯ ಸೌಲಭ್ಯ ಪಡೆಯುವಂತೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಮನವಿ ಮಾಡಿದೆ. ಜಿಲ್ಲಾ ಉದ್ಯೋಗಾಧಿಕಾರಿ
ಫೋಟೋ


ಗದಗ, 04 ಆಗಸ್ಟ್ (ಹಿ.ಸ.)

ಆ್ಯಂಕರ್:- ಕರ್ನಾಟಕ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಪೈಕಿ ಪ್ರಮುಖ ಯೋಜನೆಯಾದ ಯುವನಿಧಿ ಯೋಜನೆಗೆ ಅರ್ಹ ಅಭ್ಯರ್ಥಿಗಳು ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಿ ಯೋಜನೆಯ ಸೌಲಭ್ಯ ಪಡೆಯುವಂತೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಮನವಿ ಮಾಡಿದೆ.

ಜಿಲ್ಲಾ ಉದ್ಯೋಗಾಧಿಕಾರಿ ಬಸವಂತ ಪಿ.ಎನ್. ಅವರು ಪ್ರಕಟಣೆ ನೀಡಿದ್ದು, 2023, 2024, 2025 ಹಾಗೂ 2026ನೇ ಸಾಲಿನಲ್ಲಿ ಪದವಿ ಅಥವಾ ಡಿಪ್ಲೊಮಾ ಪೂರ್ಣಗೊಳಿಸಿರುವ ಅರ್ಹ ಅಭ್ಯರ್ಥಿಗಳು ಯೋಜನೆಯಡಿ ನೋಂದಾಯಿಸಿಕೊಳ್ಳಬಹುದಾಗಿದೆ ಎಂದು ತಿಳಿಸಿದ್ದಾರೆ.

ಯೋಜನೆಯಡಿ ಪದವೀಧರರಿಗೆ ಪ್ರತಿ ತಿಂಗಳು ₹3,000 ಹಾಗೂ ಡಿಪ್ಲೊಮಾ ಪದವೀಧರರಿಗೆ ₹1,500 ನಿರುದ್ಯೋಗ ಭತ್ಯೆ ನೀಡಲಾಗುತ್ತದೆ. ವಿದ್ಯಾಭ್ಯಾಸ ಪೂರ್ಣಗೊಂಡು 180 ದಿನಗಳವರೆಗೆ ಉದ್ಯೋಗ ದೊರೆಯದಿರುವ ಹಾಗೂ ಯೋಜನೆಯ ಎಲ್ಲ ಅರ್ಹತಾ ಮಾನದಂಡಗಳನ್ನು ಪೂರೈಸಿರುವ ಅಭ್ಯರ್ಥಿಗಳ ಬ್ಯಾಂಕ್ ಖಾತೆಗೆ ನೇರ ನಗದು ವರ್ಗಾವಣೆ (ಡಿಬಿಟಿ) ಮೂಲಕ ಭತ್ಯೆ ಜಮೆ ಮಾಡಲಾಗುತ್ತದೆ.

ಯೋಜನೆಯ ಲಾಭವನ್ನು ನಿರಂತರವಾಗಿ ಪಡೆಯಲು ಫಲಾನುಭವಿಗಳು ಪ್ರತಿ ತಿಂಗಳು ಕಡ್ಡಾಯವಾಗಿ ಸ್ವಯಂ ಘೋಷಣೆಯನ್ನು ಸಲ್ಲಿಸಬೇಕು. ತಾವು ಇನ್ನೂ ನಿರುದ್ಯೋಗಿಯಾಗಿದ್ದು, ಯಾವುದೇ ಉನ್ನತ ವ್ಯಾಸಂಗ ಮುಂದುವರಿಸುತ್ತಿಲ್ಲ ಹಾಗೂ ಸ್ವಯಂ ಉದ್ಯೋಗದಲ್ಲಿಯೂ ತೊಡಗಿಸಿಕೊಂಡಿಲ್ಲ ಎಂಬುದನ್ನು ಪ್ರತಿ ತಿಂಗಳ 1ರಿಂದ 25ನೇ ತಾರೀಖಿನೊಳಗೆ ಸೇವಾ ಸಿಂಧು ಪೋರ್ಟಲ್ನಲ್ಲಿ ದೃಢೀಕರಿಸಬೇಕಾಗಿದೆ. ಈ ಪ್ರಕ್ರಿಯೆ ಪೂರ್ಣಗೊಳಿಸದಿದ್ದಲ್ಲಿ ಭತ್ಯೆ ಬಿಡುಗಡೆಯಲ್ಲಿ ವಿಳಂಬವಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹೊಸದಾಗಿ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ತಮ್ಮ ಅರ್ಜಿಯ ಪರಿಶೀಲನೆ ಹಾಗೂ ದೃಢೀಕರಣಕ್ಕಾಗಿ ಅಗತ್ಯವಿರುವ ಎಲ್ಲಾ ಮೂಲ ದಾಖಲೆಗಳೊಂದಿಗೆ ಗದಗ ಜಿಲ್ಲಾ ಆಡಳಿತ ಭವನದ 2ನೇ ಮಹಡಿಯಲ್ಲಿರುವ ಕೊಠಡಿ ಸಂಖ್ಯೆ 215ರ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಗೆ ಭೇಟಿ ನೀಡಿ ದಾಖಲೆಗಳನ್ನು ಪರಿಶೀಲಿಸಿಕೊಳ್ಳುವಂತೆ ಸೂಚಿಸಲಾಗಿದೆ.

ಯೋಜನೆಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಗಾಗಿ 08372-220609 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದು. ಅಲ್ಲದೇ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿಯೂ ಅಗತ್ಯ ಮಾಹಿತಿ ಹಾಗೂ ಮಾರ್ಗದರ್ಶನ ಪಡೆಯಬಹುದಾಗಿದೆ ಎಂದು ಜಿಲ್ಲಾ ಉದ್ಯೋಗಾಧಿಕಾರಿ ಬಸವಂತ ಪಿ.ಎನ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande