
ಪೂಂಚ್, 04 ಆಗಸ್ಟ್ (ಹಿ.ಸ):
ಆ್ಯಂಕರ್:
ಜಮ್ಮು-ಕಾಶ್ಮೀರದ ಪುಂಚ್ ಜಿಲ್ಲೆಯ ಸುರನ್‌ಕೋಟ್ ಪೊಲೀಸ್ ಠಾಣೆ ವ್ಯಾಪ್ತಿಯ ಧಾರಾ ಸಾಂಗ್ಲಾ ಗ್ರಾಮದ ಪ್ರದೇಶದಲ್ಲಿ ಶಂಕಿತ ಚಟುವಟಿಕೆಗಳ ಮಾಹಿತಿ ಹಿನ್ನೆಲೆಯಲ್ಲಿ ವಿಶೇಷ ಕಾರ್ಯಾಚರಣೆ ದಳ (ಎಸ್‌ಒಜಿ) ಮತ್ತು 16 ರಾಷ್ಟ್ರೀಯ ರೈಫಲ್ಸ್ (ಆರ್‌ಆರ್) ಜಂಟಿಯಾಗಿ ಮಂಗಳವಾರ ಶೋಧ ಕಾರ್ಯಾಚರಣೆ ಆರಂಭಿಸಿವೆ.
ಅಧಿಕೃತ ಮೂಲಗಳ ಪ್ರಕಾರ, ಎರಡು ಪ್ರತ್ಯೇಕ ಸ್ಥಳಗಳಲ್ಲಿ ಒಟ್ಟು ಏಳು ಶಂಕಿತರನ್ನು ಕಂಡಿರುವ ಮಾಹಿತಿ ಲಭ್ಯವಾಗಿದೆ. ಗುಜ್ಜರ್ ನಾರ್ ಪ್ರದೇಶದಲ್ಲಿ ಮೂವರು ಹಾಗೂ ಖೆರೋವಾಲಿ ಧೋಕ್ ಸಮೀಪ ನಾಲ್ವರು ಶಂಕಿತರು ಕಾಣಿಸಿಕೊಂಡಿದ್ದಾರೆ ಎನ್ನಲಾಗಿದೆ.
ಮಾಹಿತಿ ದೊರಕುತ್ತಿದ್ದಂತೆಯೇ ಭದ್ರತಾ ಪಡೆಗಳು ವ್ಯಾಪಕ ಶೋಧ ಕಾರ್ಯಾಚರಣೆ ಕೈಗೊಂಡಿದ್ದು, ಶಂಕಿತರ ಪತ್ತೆಗೆ ತೀವ್ರ ಹುಡುಕಾಟ ನಡೆಸುತ್ತಿವೆ. ವರದಿ ಬರೆಯುವ ವೇಳೆಯಲ್ಲೂ ಕಾರ್ಯಾಚರಣೆ ಮುಂದುವರಿದಿದ್ದು, ಸ್ಥಳೀಯ ನಿವಾಸಿಗಳ ಸುರಕ್ಷತೆಗಾಗಿ ಪ್ರದೇಶದಲ್ಲಿ ನಿಗಾವನ್ನೂ ಹೆಚ್ಚಿಸಲಾಗಿದೆ.
--------
ಹಿಂದೂಸ್ತಾನ್ ಸಮಾಚಾರ್ / Rakesh.M.B.