ಎಫ್ಸಿಆರ್ಎ ತಿದ್ದುಪಡಿ ಮಸೂದೆಗೆ ಕಾಂಗ್ರೆಸ್ ವಿರೋಧ: ಕೆ.ಸಿ. ವೇಣುಗೋಪಾಲ್
ನವದೆಹಲಿ, 05 ಆಗಸ್ಟ್ (ಹಿ.ಸ.): ಆ್ಯಂಕರ್;ವಿದೇಶಿ ಅನುದಾನ (ನಿಯಂತ್ರಣ) ತಿದ್ದುಪಡಿ ಮಸೂದೆ–2026 (ಎಫ್‌ಸಿಆರ್‌ಎ)ಗೆ ಕಾಂಗ್ರೆಸ್ ಸಂಸತ್ತಿನಲ್ಲಿ ತೀವ್ರ ವಿರೋಧ ವ್ಯಕ್ತಪಡಿಸುವುದಾಗಿ ಕಾಂಗ್ರೆಸ್ ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ತಿಳಿಸಿದ್ದಾರೆ. ಸಂಸತ್ ಆವರಣದಲ್ಲಿ ಸುದ್ದಿಗಾರರೊಂ
संसद भवन परिसर में पत्रकारों से बात करते कांग्रेस महासिचव केसी वेणुगोपाल।


ನವದೆಹಲಿ, 05 ಆಗಸ್ಟ್ (ಹಿ.ಸ.):

ಆ್ಯಂಕರ್;ವಿದೇಶಿ ಅನುದಾನ (ನಿಯಂತ್ರಣ) ತಿದ್ದುಪಡಿ ಮಸೂದೆ–2026 (ಎಫ್‌ಸಿಆರ್‌ಎ)ಗೆ ಕಾಂಗ್ರೆಸ್ ಸಂಸತ್ತಿನಲ್ಲಿ ತೀವ್ರ ವಿರೋಧ ವ್ಯಕ್ತಪಡಿಸುವುದಾಗಿ ಕಾಂಗ್ರೆಸ್ ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ತಿಳಿಸಿದ್ದಾರೆ.

ಸಂಸತ್ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಎಫ್‌ಸಿಆರ್‌ಎ ಕಾಯ್ದೆಯನ್ನು ಹಳೆಯ ರೂಪದಲ್ಲೇ ಮರುಜಾರಿಗೆ ತರಲು ಮುಂದಾಗಿದೆ ಎಂದು ಆರೋಪಿಸಿದರು. ಕೆಲವು ಸಂಸ್ಥೆಗಳಿಗೆ ವಿಶೇಷ ವಿನಾಯಿತಿ ನೀಡಿ, ಇತರ ಸರ್ಕಾರೇತರ ಸಂಸ್ಥೆಗಳ (ಎನ್‌ಜಿಒ) ಮೇಲೆ ಕಠಿಣ ನಿರ್ಬಂಧ ಹೇರಲು ಯತ್ನಿಸಲಾಗುತ್ತಿದೆ ಎಂದು ದೂರಿದರು.

ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಈ ವಿಷಯದಲ್ಲಿ ಪಕ್ಷದ ಆತಂಕಗಳನ್ನು ಸರ್ಕಾರದ ಮುಂದೆ ಸ್ಪಷ್ಟವಾಗಿ ಮಂಡಿಸಿದ್ದಾರೆ. ಕಾಂಗ್ರೆಸ್ ಹಾಗೂ ಸಂಪೂರ್ಣ ಪ್ರತಿಪಕ್ಷ ಈ ಮಸೂದೆಯನ್ನು ದಮನಕಾರಿ ಎಂದು ಪರಿಗಣಿಸಿದ್ದು, ಸಂಸತ್ತಿನಲ್ಲಿ ತೀವ್ರವಾಗಿ ವಿರೋಧಿಸಲಿದೆ ಎಂದು ಹೇಳಿದರು.

ಪ್ರಸ್ತಾವಿತ ತಿದ್ದುಪಡಿಗಳ ಮೂಲಕ ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ ಸಂಬಂಧಿಸಿದ ಸಂಸ್ಥೆಗಳಿಗೆ ಅನುಕೂಲ ಕಲ್ಪಿಸುವ ಪ್ರಯತ್ನ ನಡೆಯುತ್ತಿದೆ ಎಂದು ವೇಣುಗೋಪಾಲ್ ಆರೋಪಿಸಿದರು. ಇತರ ಎನ್‌ಜಿಒಗಳೊಂದಿಗೆ ತಾರತಮ್ಯ ಮಾಡುವ ಕ್ರಮವನ್ನು ಕಾಂಗ್ರೆಸ್ ಒಪ್ಪುವುದಿಲ್ಲ ಎಂದರು.

ಇದೇ ವೇಳೆ, ಅಮೆರಿಕದ ಕೆಲ ಸಂಸದರು ಹಾಗೂ ರಾಜಕೀಯ ಮುಖಂಡರು ಕೂಡ ಈ ಮಸೂದೆಯ ಬಗ್ಗೆ ಆತಂಕ ವ್ಯಕ್ತಪಡಿಸಿದ್ದು, ಧಾರ್ಮಿಕ ಮತ್ತು ಸರ್ಕಾರೇತರ ಸಂಸ್ಥೆಗಳ ಮೇಲೆ ಸರ್ಕಾರದ ನಿಯಂತ್ರಣ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಇಂತಹ ತಿದ್ದುಪಡಿಗಳು ಭಾರತ–ಅಮೆರಿಕ ಸಂಬಂಧಗಳ ಮೇಲೂ ಪರಿಣಾಮ ಬೀರಬಹುದು ಎಂದು ಅವರು ಎಚ್ಚರಿಸಿದ್ದಾರೆ.

--------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande