
ಗದಗ, 05 ಆಗಸ್ಟ್ (ಹಿ.ಸ.)
ಆ್ಯಂಕರ್:- ಗದಗ ತಾಲೂಕಿನ ಯಲಿಶಿರೂರ ಗ್ರಾಮದಲ್ಲಿ ವಿಬಿಜಿ ರಾಮ್ ಜಿ ಯೋಜನೆಯ ಸಮುದಾಯ ಕಾಮಗಾರಿ ಪರಿಶೀಲಿಸಿ ಅವರು ಮಾತನಾಡಿದರು.
ವಿಬಿಜಿ ರಾಮ್ ಜಿ ಸಮುದಾಯ ಕಾಮಗಾರಿಗಳ ಹಾಜರಾತಿ ಕಡ್ಡಾಯವಾಗಿ ಎನ್ಎಂಎಂಎಸ್ ತಂತ್ರಾಂಶದಲ್ಲಿ ಪ್ರತಿದಿನ ಎರಡು ಅಳವಡಿಸಬೇಕು. ಕಾಯಕ ಬಂಧುಗಳು ಮತ್ತು ಕೂಲಿಕಾರರು ಬೆಳಿಗ್ಗೆ 6 ಗಂಟೆಗೆ ಕೆಲಸಕ್ಕೆ ಹಾಜರಾಗವಂತೆ ತಿಳಿಸಿದರು. ಕೂಲಿ ಮೊತ್ತ 382ಕ್ಕೆ ಹೆಚ್ಚಳವಾಗಿದೆ. ಅಳತೆಗೆ ತಕ್ಕಂತೆ ಕೆಲಸ ಮಾಡಬೇಕು. ಅಳತೆಯಂತೆ ಕೆಲಸ ಮಾಡಿದರಷ್ಟೆ ಸಂಪೂರ್ಣ ಕೂಲಿ ಮೊತ್ತ ಸಿಗಲಿದೆ ಎಂದರು. ಗ್ರಾಮೀಣ ಪ್ರದೇಶದ ಬಡ ಅಕುಶಲಕೂಲಿ ಕಾರ್ಮಿಕರಿಗೆ ಸ್ಥಳೀಯವಾಗಿಯೇ ಉದ್ಯೋಗ ಒದಗಿಸಲಾಗುತ್ತಿದೆ. ಕೆರೆ ಅಭಿವೃದ್ಧಿ ಕಾಮಗಾರಿಯಿಂದ ಅಂತರ್ಜಲ ಹೆಚ್ಚಳವಾಗಲಿದೆ ಎಂದರು.
ಗ್ರಾಮೀಣ ಪ್ರದೇಶದ ಸರ್ವಾಂಗೀಣ ಅಭಿವೃದ್ಧಿಗೆ ಜೊತೆಯಾಗಿರುವ ವಿಬಿಜಿ ರಾಮ್ ಜಿ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು. ಯೋಜನೆಯಡಿ ಉದ್ಯೋಗ ಚೀಟಿ ಹೊಂದಿರುವ ಪ್ರತಿ ಕುಟುಂಬಕ್ಕೆ ವರ್ಷಕ್ಕೆ 125 ದಿನಗಳ ಕೆಲಸ ನೀಡಲಾಗುತ್ತಿದೆ. ಪುರುಷ- ಮಹಿಳೆ ಎಂಬ ಭೇದವಿರದೆ ಎಲ್ಲರಿಗೂ ಸಮಾನ ಕೂಲಿ ನೀಡಲಾಗುತ್ತಿದೆ ಎಂದರು.
ಈ ಸಂದರ್ಭದಲ್ಲಿ ಗ್ರಾಪಂ ಅಭಿವೃದ್ಧಿ ಅಧಿಕಾರಿ ಶಿವಕುಮಾರ ವಾಲಿ, ತಾಪಂ ಐಇಸಿ ಸಂಯೋಜಕ ವೀರೇಶ ಬಸನಗೌಡ್ರ, ತಾಂತ್ರಿಕ ಸಹಾಯಕ ಮಂಜುನಾಥ ತಳವಾರ ಬಿಲ್ ಕಲೆಕ್ಟರ್ ಪ್ರಕಾಶ ಬೋರಾಣಿ, ಬಿಎಫ್ಟಿ ದುರ್ಗಪ್ಪ ಆಲೂರ, ಕಾಯಕ ಬಂಧುಗಳು, ಕೂಲಿಕಾರರು ಇದ್ದರು.
---------------
ಹಿಂದೂಸ್ತಾನ್ ಸಮಾಚಾರ್ / lalita MP