ವಿದ್ಯಾರ್ಥಿಗಳ ಮೇಲಿನ ಪೊಲೀಸ್ ಕ್ರಮ ಖಂಡಿಸಿ ಸಂಸತ್ ಆವರಣದಲ್ಲಿ ಪ್ರತಿಪಕ್ಷಗಳ ಪ್ರತಿಭಟನೆ
ನವದೆಹಲಿ, 05 ಆಗಸ್ಟ್ (ಹಿ.ಸ.): ಆ್ಯಂಕರ್:ಸಂಸತ್ತಿನ ಮಳೆಗಾಲದ ಅಧಿವೇಶನದ 13ನೇ ದಿನವಾದ ಬುಧವಾರ, ಜುಲೈ 20ರಂದು ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳ ವಿರುದ್ಧ ಪೊಲೀಸರು ಕೈಗೊಂಡ ಕ್ರಮ, ರಾಮಮಂದಿರ ಕಾಣಿಕೆ ಕಳ್ಳತನ ಪ್ರಕರಣ ಸೇರಿದಂತೆ ವಿವಿಧ ವಿಚಾರಗಳನ್ನು ಮುಂದಿಟ್ಟುಕೊಂಡು ಕಾಂ
विपक्षी सांसदों ने संसद परिसर में किया प्रदर्शन


ನವದೆಹಲಿ, 05 ಆಗಸ್ಟ್ (ಹಿ.ಸ.):

ಆ್ಯಂಕರ್:ಸಂಸತ್ತಿನ ಮಳೆಗಾಲದ ಅಧಿವೇಶನದ 13ನೇ ದಿನವಾದ ಬುಧವಾರ, ಜುಲೈ 20ರಂದು ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳ ವಿರುದ್ಧ ಪೊಲೀಸರು ಕೈಗೊಂಡ ಕ್ರಮ, ರಾಮಮಂದಿರ ಕಾಣಿಕೆ ಕಳ್ಳತನ ಪ್ರಕರಣ ಸೇರಿದಂತೆ ವಿವಿಧ ವಿಚಾರಗಳನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ಹಾಗೂ ಇತರೆ ಪ್ರತಿಪಕ್ಷಗಳ ಸಂಸದರು ಸಂಸತ್‌ ಆವರಣದಲ್ಲಿ ಪ್ರತಿಭಟನೆ ನಡೆಸಿದರು. ಈ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಸಂಸತ್‌ನಲ್ಲಿ ಉತ್ತರ ನೀಡಬೇಕು ಎಂದು ಒತ್ತಾಯಿಸಿದರು.

ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಸೇರಿದಂತೆ ಹಲವು ಪ್ರತಿಪಕ್ಷ ಸಂಸದರು ಸಂಸತ್‌ ಆವರಣದಲ್ಲಿರುವ ಗಾಂಧಿ ಪ್ರತಿಮೆಯಿಂದ ಮಕರ ದ್ವಾರದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು.

ಕಾಂಗ್ರೆಸ್, ಸಮಾಜವಾದಿ ಪಕ್ಷ, ರಾಷ್ಟ್ರೀಯ ಜನತಾ ದಳ ಹಾಗೂ ಇತರೆ ಪ್ರತಿಪಕ್ಷಗಳ ಸಂಸದರು ಬ್ಯಾನರ್ ಮತ್ತು ಫಲಕಗಳನ್ನು ಹಿಡಿದು ಪ್ರತಿಭಟನೆಯಲ್ಲಿ ಭಾಗವಹಿಸಿದರು. ಜುಲೈ 20ರಂದು ವಿದ್ಯಾರ್ಥಿಗಳು ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ಸಂದರ್ಭದಲ್ಲಿ ಅವರ ವಿರುದ್ಧ ಬಲಪ್ರಯೋಗ ನಡೆಸಲಾಗಿದೆ ಎಂದು ಆರೋಪಿಸಿದ ಅವರು, ಈ ಘಟನೆಗೆ ಸಂಬಂಧಿಸಿದವರ ಹೊಣೆಗಾರಿಕೆಯನ್ನು ನಿಗದಿಪಡಿಸಬೇಕು ಎಂದು ಆಗ್ರಹಿಸಿದರು. ಈ ಎಲ್ಲ ವಿಷಯಗಳ ಕುರಿತು ಗೃಹ ಸಚಿವ ಅಮಿತ್ ಶಾ ಸಂಸತ್‌ನಲ್ಲಿ ಸ್ಪಷ್ಟನೆ ನೀಡಬೇಕು ಎಂದು ಒತ್ತಾಯಿಸಿದರು.

ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಮಾತನಾಡಿ, ವಿದ್ಯಾರ್ಥಿಗಳ ವಿರುದ್ಧ ಗುಂಡಿನ ದಾಳಿ, ಪೆಲೆಟ್ ಗನ್, ಅಶ್ರುವಾಯು ಅಥವಾ ಲಾಠಿಚಾರ್ಜ್ ನಡೆಸಿದ್ದರೆ ಅದರ ಹೊಣೆಗಾರಿಕೆಯನ್ನು ಯಾರಾದರೂ ಹೊತ್ತುಕೊಳ್ಳಲೇಬೇಕು. ಇಂತಹ ಕ್ರಮಗಳಿಗೆ ಅಧಿಕಾರಿಗಳು ಅಥವಾ ಸರ್ಕಾರದ ಮಟ್ಟದಲ್ಲೇ ಆದೇಶ ನೀಡಲಾಗಿರುತ್ತದೆ. ಆದ್ದರಿಂದ ಈ ಪ್ರಕರಣದಲ್ಲಿ ಜವಾಬ್ದಾರಿ ನಿಗದಿಯಾಗಬೇಕು. ದೇಶದ ಪ್ರಜಾಪ್ರಭುತ್ವದ ಸಂಪ್ರದಾಯವೂ ಇದೇ ಆಗಿದೆ ಎಂದು ಹೇಳಿದರು.

ಸ್ವತಂತ್ರ ಸಂಸದ ಪಪ್ಪು ಯಾದವ್ ಮಾತನಾಡಿ, ಬಿಜೆಪಿ ಸಂಸದೆ ಬನ್ಸುರಿ ಸ್ವರಾಜ್ ಅವರು ರಾಹುಲ್ ಗಾಂಧಿ ವಿರುದ್ಧ ಪ್ರಕರಣ ದಾಖಲಿಸುವುದರಲ್ಲಿ ಮಾತ್ರ ಸಕ್ರಿಯರಾಗಿದ್ದಾರೆ. ಅವರಿಗೆ ಕಾನೂನಿನ ಸರಿಯಾದ ಅರಿವು ಇಲ್ಲ. ಬೇಕಾದಾಗ ಪೊಲೀಸ್ ಠಾಣೆಗೆ ತೆರಳಿ ದೂರು ದಾಖಲಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಟೀಕಿಸಿದರು.

--------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande