370ನೇ ವಿಧಿ ರದ್ದತಿ ಜಮ್ಮು-ಕಾಶ್ಮೀರ, ಲಡಾಖ್ ಅಭಿವೃದ್ಧಿಗೆ ಹೊಸ ಅಧ್ಯಾಯ: ಪ್ರಧಾನಿ ಮೋದಿ
ನವದೆಹಲಿ, 05 ಆಗಸ್ಟ್ (ಹಿ.ಸ.): ಆ್ಯಂಕರ್:ಜಮ್ಮು-ಕಾಶ್ಮೀರ ಮತ್ತು ಲಡಾಖ್‌ನಿಂದ 370 ಹಾಗೂ 35(ಎ) ವಿಧಿಗಳನ್ನು ರದ್ದುಪಡಿಸಿ ಏಳು ವರ್ಷಗಳು ಪೂರ್ಣಗೊಂಡ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಈ ಕ್ರಮವು ಎರಡೂ ಕೇಂದ್ರಾಡಳಿತ ಪ್ರದೇಶಗಳ ಅಭಿವೃದ್ಧಿಗೆ ಹೊಸ ಅಧ್ಯಾಯವನ್ನು ತೆರೆದಿದೆ ಎಂದು ಹೇಳಿದ್ದಾ
जम्मू-कश्मीर तब और अब (प्रतिकात्मक चित्र)


ನವದೆಹಲಿ, 05 ಆಗಸ್ಟ್ (ಹಿ.ಸ.):

ಆ್ಯಂಕರ್:ಜಮ್ಮು-ಕಾಶ್ಮೀರ ಮತ್ತು ಲಡಾಖ್‌ನಿಂದ 370 ಹಾಗೂ 35(ಎ) ವಿಧಿಗಳನ್ನು ರದ್ದುಪಡಿಸಿ ಏಳು ವರ್ಷಗಳು ಪೂರ್ಣಗೊಂಡ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಈ ಕ್ರಮವು ಎರಡೂ ಕೇಂದ್ರಾಡಳಿತ ಪ್ರದೇಶಗಳ ಅಭಿವೃದ್ಧಿಗೆ ಹೊಸ ಅಧ್ಯಾಯವನ್ನು ತೆರೆದಿದೆ ಎಂದು ಹೇಳಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಸಂದೇಶ ಹಂಚಿಕೊಂಡಿರುವ ಅವರು, ಕಳೆದ ಏಳು ವರ್ಷಗಳಲ್ಲಿ ಜಮ್ಮು-ಕಾಶ್ಮೀರ ಮತ್ತು ಲಡಾಖ್‌ನಲ್ಲಿ ಮೂಲಸೌಕರ್ಯ ಅಭಿವೃದ್ಧಿ ವೇಗ ಪಡೆದಿದ್ದು, ಶಿಕ್ಷಣ, ಆರೋಗ್ಯ, ಉದ್ಯಮಶೀಲತೆ ಹಾಗೂ ಕ್ರೀಡಾ ಕ್ಷೇತ್ರಗಳಲ್ಲಿ ಹೊಸ ಅವಕಾಶಗಳು ಸೃಷ್ಟಿಯಾಗಿವೆ ಎಂದು ತಿಳಿಸಿದ್ದಾರೆ. ಮಹಿಳೆಯರು ಮತ್ತು ಅಂಚಿನ ಸಮುದಾಯಗಳಿಗೆ ಭಾರತೀಯ ಸಂವಿಧಾನದ ಸಂಪೂರ್ಣ ಹಕ್ಕುಗಳು ದೊರೆತಿದ್ದು, ಅವರ ಸಬಲೀಕರಣಕ್ಕೆ ಇದು ನೆರವಾಗಿದೆ ಎಂದು ಹೇಳಿದರು.

ಈ ವರ್ಷ ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಅವರ 125ನೇ ಜನ್ಮಜಯಂತಿ ಆಚರಿಸಲಾಗುತ್ತಿರುವ ಹಿನ್ನೆಲೆಯಲ್ಲಿ, ರಾಷ್ಟ್ರೀಯ ಏಕತೆಗೆ ಅವರು ನೀಡಿದ ಕೊಡುಗೆಯನ್ನು ಪ್ರಧಾನಿ ಸ್ಮರಿಸಿದರು. ಜಮ್ಮು-ಕಾಶ್ಮೀರ ಮತ್ತು ಲಡಾಖ್‌ನ ಸಮಗ್ರ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಬದ್ಧವಾಗಿದ್ದು, ಪ್ರತಿಯೊಬ್ಬ ನಾಗರಿಕನಿಗೂ ಅಭಿವೃದ್ಧಿ ಹೊಂದಿದ ಭಾರತದ ನಿರ್ಮಾಣದಲ್ಲಿ ಪಾಲ್ಗೊಳ್ಳುವ ಅವಕಾಶ ಕಲ್ಪಿಸುವುದು ನಮ್ಮ ಗುರಿಯಾಗಿದೆ ಎಂದು ಹೇಳಿದರು.

ಇದೇ ವೇಳೆ ಕೇಂದ್ರ ಗೃಹ ಸಚಿವಾಲಯವು 370ನೇ ವಿಧಿ ರದ್ದತಿಯ ಬಳಿಕ ಜಮ್ಮು-ಕಾಶ್ಮೀರದಲ್ಲಿ ಶಾಂತಿಯ ವಾತಾವರಣ ನಿರ್ಮಾಣವಾಗಿದ್ದು, ಕಲ್ಲು ತೂರಾಟದ ಘಟನೆಗಳು ಬಹುತೇಕ ಶೂನ್ಯಕ್ಕೆ ಇಳಿದಿವೆ ಎಂದು ತಿಳಿಸಿದೆ. 2023ರಿಂದ ಬಂದ್‌ಗಳು ನಡೆಯದಿರುವುದು, 2024ರಲ್ಲಿ ದಾಖಲೆ 23 ಕೋಟಿ ಪ್ರವಾಸಿಗರ ಭೇಟಿ, 18 ಜಿಐ ಮಾನ್ಯತೆ ಪಡೆದ ಕರಕುಶಲ ಉತ್ಪನ್ನಗಳು, ಚೆನಾಬ್ ಸೇತುವೆ, ಸೋನಮರ್ಗ್ ಸುರಂಗ, ಮೊದಲ ವಂದೇ ಭಾರತ ರೈಲು ಹಾಗೂ ಮೊದಲ ವಿದ್ಯುತ್ ರೈಲು ಸೇರಿದಂತೆ ಹಲವು ಮಹತ್ವದ ಸಾಧನೆಗಳು ಈ ಅವಧಿಯಲ್ಲಿ ದಾಖಲಾಗಿವೆ ಎಂದು ಸಚಿವಾಲಯ ಹೇಳಿದೆ.

--------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande