ರೈತರ ಒಪ್ಪಿಗೆಯಿಲ್ಲದೆ ಭೂಮಿ ಕಸಿದುಕೊಳ್ಳಲು ಬಿಡುವುದಿಲ್ಲ: ಆರ್. ಅಶೋಕ್
ರಾಮನಗರ, 09 ಆಗಸ್ಟ್ (ಹಿ.ಸ.): ಆ್ಯಂಕರ್:ರೈತರ ಒಪ್ಪಿಗೆಯಿಲ್ಲದೆ ಫಲವತ್ತಾದ ಭೂಮಿಯನ್ನು ಕಸಿದುಕೊಂಡು ಸಾವಿರಾರು ಕುಟುಂಬಗಳನ್ನು ಬೀದಿಗೆ ತಳ್ಳುವ ಯಾವುದೇ ಯೋಜನೆಗೆ ಬಿಜೆಪಿ–ಜೆಡಿಎಸ್ ಅವಕಾಶ ನೀಡುವುದಿಲ್ಲ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ್ ಎಚ್ಚರಿಸಿದರು. ಬಿಡದಿಯಿಂದ ಆರಂಭವಾದ ಮೂರು ದ
ಪ್ರತಿಭಟನೆಯಲ್ಲಿ ಭಾಗಿಯಾದ ಅಶೋಕ


ರಾಮನಗರ, 09 ಆಗಸ್ಟ್ (ಹಿ.ಸ.):

ಆ್ಯಂಕರ್:ರೈತರ ಒಪ್ಪಿಗೆಯಿಲ್ಲದೆ ಫಲವತ್ತಾದ ಭೂಮಿಯನ್ನು ಕಸಿದುಕೊಂಡು ಸಾವಿರಾರು ಕುಟುಂಬಗಳನ್ನು ಬೀದಿಗೆ ತಳ್ಳುವ ಯಾವುದೇ ಯೋಜನೆಗೆ ಬಿಜೆಪಿ–ಜೆಡಿಎಸ್ ಅವಕಾಶ ನೀಡುವುದಿಲ್ಲ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ್ ಎಚ್ಚರಿಸಿದರು.

ಬಿಡದಿಯಿಂದ ಆರಂಭವಾದ ಮೂರು ದಿನಗಳ ಬೃಹತ್ ಪಾದಯಾತ್ರೆಯಲ್ಲಿ ಬಿಜೆಪಿ–ಜೆಡಿಎಸ್ ಮುಖಂಡರು, ಕಾರ್ಯಕರ್ತರು ಹಾಗೂ ಸಾವಿರಾರು ಸಾರ್ವಜನಿಕರೊಂದಿಗೆ ಹೆಜ್ಜೆ ಹಾಕಿದ ಅವರು, “ಇದು ಕೇವಲ ಪಾದಯಾತ್ರೆಯಲ್ಲ, ರೈತರ ಭೂಮಿ, ಬದುಕು ಮತ್ತು ಹಕ್ಕುಗಳಿಗಾಗಿ ನಡೆಯುತ್ತಿರುವ ಹೋರಾಟ” ಎಂದರು.

ಕಾಂಗ್ರೆಸ್ ವಿರೋಧ ಪಕ್ಷದಲ್ಲಿದ್ದಾಗ ಬಿಡದಿ ಟೌನ್‌ಶಿಪ್ ಯೋಜನೆಯನ್ನು ವಿರೋಧಿಸಿತ್ತು. ಆದರೆ ಅಧಿಕಾರಕ್ಕೆ ಬಂದ ಬಳಿಕ ಅದೇ ಯೋಜನೆಯನ್ನು ಜಾರಿಗೊಳಿಸಲು ಮುಂದಾಗಿರುವುದು ಕಾಂಗ್ರೆಸ್‌ನ ದ್ವಿಮುಖ ನೀತಿಗೆ ಸಾಕ್ಷಿಯಾಗಿದೆ ಎಂದು ಆರೋಪಿಸಿದರು.

ವಿಧಾನಸಭೆಯ ಒಳಗೂ, ಹೊರಗೂ ಹೋರಾಟ ಮುಂದುವರಿಯಲಿದೆ. ಯಾವುದೇ ಕಾರಣಕ್ಕೂ ಬಿಡದಿ ಟೌನ್‌ಶಿಪ್ ಯೋಜನೆಯನ್ನು ಜಾರಿಯಾಗಲು ಬಿಡುವುದಿಲ್ಲ ಎಂದು ಅಶೋಕ್ ಸ್ಪಷ್ಟಪಡಿಸಿದರು.

ಕಾಂಗ್ರೆಸ್ ಸರ್ಕಾರ ತನ್ನ ತಪ್ಪಿಗೆ ಪ್ರಾಯಶ್ಚಿತ್ತ ಮಾಡಿಕೊಳ್ಳಬೇಕು. ಇಲ್ಲವಾದರೆ ಜನವಿರೋಧಿ ನಿರ್ಧಾರವೇ ಕಾಂಗ್ರೆಸ್ ಸರ್ಕಾರದ ಶವಪೆಟ್ಟಿಗೆಗೆ ಕೊನೆಯ ಮೊಳೆಯಾಗಲಿದೆ ಎಂದು ಎಚ್ಚರಿಕೆ ನೀಡಿದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande