ಕಾಟನಾಯಕನಹಳ್ಳಿಯಲ್ಲಿ ಬೆಳೆ ಹಾನಿ ಪರಿಶೀಲಿಸಿದ ಸಂಸದೆ ಪ್ರಭಾ ಮಲ್ಲಿಕಾರ್ಜುನ
ದಾವಣಗೆರೆ, 09 ಆಗಸ್ಟ್ (ಹಿ.ಸ.): ಆ್ಯಂಕರ್: ಮಾಯಕೊಂಡ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಾಟನಾಯಕನಹಳ್ಳಿ ಗ್ರಾಮದಲ್ಲಿ ಬೆಳೆ ಹಾನಿಗೊಳಗಾದ ರೈತರ ಜಮೀನುಗಳಿಗೆ ಸಂಸದೆ ಪ್ರಭಾ ಮಲ್ಲಿಕಾರ್ಜುನ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗ್ರಾಮದ ವಿವಿಧ ರೈತರ ಹೊಲಗಳಿಗೆ ತೆರಳಿದ ಅವರು, ಹಾನಿಗೊಳಗಾದ ಬೆಳೆಗಳನ್ನು
Visit


ದಾವಣಗೆರೆ, 09 ಆಗಸ್ಟ್ (ಹಿ.ಸ.):

ಆ್ಯಂಕರ್:

ಮಾಯಕೊಂಡ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಾಟನಾಯಕನಹಳ್ಳಿ ಗ್ರಾಮದಲ್ಲಿ ಬೆಳೆ ಹಾನಿಗೊಳಗಾದ ರೈತರ ಜಮೀನುಗಳಿಗೆ ಸಂಸದೆ ಪ್ರಭಾ ಮಲ್ಲಿಕಾರ್ಜುನ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಗ್ರಾಮದ ವಿವಿಧ ರೈತರ ಹೊಲಗಳಿಗೆ ತೆರಳಿದ ಅವರು, ಹಾನಿಗೊಳಗಾದ ಬೆಳೆಗಳನ್ನು ಖುದ್ದಾಗಿ ವೀಕ್ಷಿಸಿ ರೈತರಿಂದ ಮಾಹಿತಿ ಪಡೆದರು. ಬೆಳೆ ಹಾನಿಯ ಪ್ರಮಾಣ, ಕೃಷಿಗೆ ಮಾಡಿರುವ ವೆಚ್ಚ ಹಾಗೂ ರೈತರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ರೈತರೊಂದಿಗೆ ಚರ್ಚಿಸಿದರು.

ಬೆಳೆ ಹಾನಿಯಿಂದ ರೈತರಿಗೆ ಉಂಟಾಗಿರುವ ನಷ್ಟದ ಬಗ್ಗೆ ಮಾಹಿತಿ ಪಡೆದು, ರೈತರ ಸಮಸ್ಯೆಗಳಿಗೆ ಸ್ಪಂದಿಸಿ ಅಗತ್ಯ ಪರಿಹಾರ ದೊರಕಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande